ಹಣ ಅಕ್ರಮ ವರ್ಗಾವಣೆ ಆರೋಪ: ಈ.ಡಿ.ಯಿಂದ ಆ್ಯಮ್ನೆಸ್ಟಿಯ 17 ಕೋ. ರೂ. ಬ್ಯಾಂಕ್ ಠೇವಣಿ ಮುಟ್ಟುಗೋಲು

ಹೊಸದಿಲ್ಲಿ, ಫೆ. 16: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾಗತಿಕ ಮಾನವ ಹಕ್ಕು ಕಾವಲು ಸಮತಿ ಆ್ಯಮ್ನೆಸ್ಟಿ ಇಂಟರ್‌ನ್ಯಾಷನಲ್ (ಇಂಡಿಯಾ)ನ ಎರಡು ಸಂಸ್ಥೆಗಳ 17 ಕೋಟಿ ರೂಪಾಯಿಗೂ ಅಧಿಕ ಬ್ಯಾಂಕ್ ಠೇವಣೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಂಗಳವಾರ ಹೇಳಿದೆ.
ಆ್ಯಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (ಎಐಐಪಿಎಲ್)ಪಿಎಂಎಲ್‌ಎ ಹಾಗೂ ಇಂಡಿಯನ್ಸ್ ಫಾರ್ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಟ್ರಸ್ಟ್ (ಐಎಐಟಿ)ನ ಬ್ಯಾಂಕ್ ಖಾತೆಯನ್ನು ಪಿಎಂಎಲ್‌ಎ (ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ) ಅಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿಕೆಯಲ್ಲಿ ತಿಳಿಸಿದೆ.
Next Story





