Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಸಿಕೆಗೆ ಸಂಬಂಧಪಟ್ಟ ವದಂತಿಗಳಿಗೆ...

ಲಸಿಕೆಗೆ ಸಂಬಂಧಪಟ್ಟ ವದಂತಿಗಳಿಗೆ ಕಿವಿಗೊಡಬೇಡಿ: ಡಾ. ಕೆ.ವಿ. ತ್ರಿಲೋಕಚಂದ್ರ

ವಾರ್ತಾಭಾರತಿವಾರ್ತಾಭಾರತಿ17 Feb 2021 1:29 PM IST
share
ಲಸಿಕೆಗೆ ಸಂಬಂಧಪಟ್ಟ ವದಂತಿಗಳಿಗೆ ಕಿವಿಗೊಡಬೇಡಿ: ಡಾ. ಕೆ.ವಿ. ತ್ರಿಲೋಕಚಂದ್ರ

ಬೆಂಗಳೂರು, ಫೆ. 17: ಕೋವಿಡ್-19ರ ಲಸಿಕೆಗೆ ಸಂಬಂಧಪಟ್ಟಂತೆ ಹಲವು ವಂದಂತಿಗಳು ಹರಡುತ್ತಿದ್ದು, ಇದರ  ಪ್ರಾಮುಖ್ಯತೆ ಹಾಗೂ ಸುರಕ್ಷತೆಯ ಬಗ್ಗೆ ಮಾಧ್ಯಮದವರು ಜನರಿಗೆ ಅರಿವು ಮೂಡಿಸಬೇಕೆಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ. ಕೆ.ವಿ. ತ್ರಿಲೋಕಚಂದ್ರ ತಿಳಿಸಿದರು.

ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಹಾತ್ಮಗಾಂಧಿ ಮಾದ್ಯಮ ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ಕೋವಿಡ್-19 ಲಸಿಕೆ ಆಂದೋಲನ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ  ಹಮ್ಮಿಕೊಂಡಿದ್ದ ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಮಾಧ್ಯಮದವರು ಜನರಲ್ಲಿ ವಿಶ್ವಾಸ ಮೂಡಿಸಲು ಕ್ಷೇತ್ರ ಮಟ್ಟದಲ್ಲಿ ನಡೆಯುವಂತಹ ಸಕಾರಾತ್ಮಕ ಪ್ರಕರಣಗಳನ್ನು ಪ್ರಕಟಿಸಿ, ಲಸಿಕೆ ಕುರಿತ ಹಿಂಜರಿಕೆಯನ್ನು ಹೋಗಲಾಡಿಸುವುದರ ಜೊತೆಗೆ, ಜನರು ಲಸಿಕೆ ಪಡೆಯಲು ಮುಂದೆ ಬರುವಂತೆ ಪ್ರೋತ್ಸಾಹಿಸಿ, ಗುರಿ ಮುಟ್ಟಲು ಸಹಕರಿಸಬೇಕೆಂದರು.

ಲಸಿಕಾ ಅಭಿಯಾನದ ನಿರ್ದೇಶಕರಾದ ಶ್ರೀಮತಿ ಡಾ. ಅರುಂಧತಿ ಚಂದ್ರಶೇಖರ್ ಅವರು ಮಾತನಾಡಿ, ಕೊರೊನಾ ಲಸಿಕಾ ಅಭಿಯಾನ ಪ್ರಾರಂಭವಾಗಿ ಒಂದು ತಿಂಗಳಾಗಿದ್ದು, ಪ್ರಾರಂಭದ ಹಂತದಲ್ಲಿ ಶೇ.50 ರಷ್ಟು ಪ್ರಗತಿಯನ್ನು ಸಾಧಿಸಲಾಗಿತ್ತು.  ತದನಂತರ ಪ್ರಗತಿಯು ಕಡಿಮೆಯಾಗುತ್ತಿದೆ. ಜನರಿಗೆ ಲಸಿಕೆ ಕುರಿತಂತೆ ವಿಶ್ವಾಸ ಮೂಡಿಸಲು ಮಾಧ್ಯಮವು ಪ್ರಮುಖ ಪಾತ್ರ ವಹಿಸುವುದರಿಂದ, ಮಾಧ್ಯಮದವರು ಪಾರದರ್ಶಕವಾಗಿ ಸರಿಯಾದ ಸುದ್ದಿಯನ್ನು ಜನತೆಗೆ ಮುಟ್ಟಿಸಿದರೆ, ನಮ್ಮ ರಾಜ್ಯದಲ್ಲಿ ಯಶಸ್ಸು ಕಾಣಬಹುದು ಎಂದರು.  

ಮಾಧ್ಯಮದವರು ಬೇರೆ ಸುದ್ದಿಗಳಿಗೆ ಆದ್ಯತೆ ನೀಡದೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನೀಡುವ ಸುದ್ದಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದರು.

ಈಗಾಗಲೇ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರಿಗೂ ಸಹ ಕಾರ್ಯಾಗಾರವನ್ನು ನಡೆಸಲಾಗಿದ್ದು, ಇಂದು ಮಾದ್ಯಮದವರಿಗೆ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ ಎಂದರು.  

ಕಾರ್ಯಾಗಾರದಲ್ಲಿ  ಲಸಿಕಾ ವಿಭಾಗದ ಉಪನಿರ್ದೇಶಕರಾದ ಶ್ರೀಮತಿ ಡಾ. ರಜನಿ ಸ್ವಾಗತಿಸಿದರು. ಕಾರ್ಯಾಗಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರಾದ ಓಂ ಪ್ರಕಾಶ್ ಪಾಟೀಲ್, ಇತರ ಹಿರಿಯ ಅಧಿಕಾರಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X