ಫೆ.20ಕ್ಕೆ ಉದ್ಯೋಗ ಮೇಳ
ಬೆಂಗಳೂರು, ಫೆ. 17: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿ ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕೇಂದ್ರ ಮತ್ತು ಸರಕಾರಿ ಪ್ರಥಮ ದರ್ಜೆ ಲಾಲ್ ಬಹುದ್ದೂರ್ ಶಾಸ್ತ್ರಿ ಕಾಲೇಜು ಸಹಯೋಗದಲ್ಲಿ ಫೆ.20ರ ಬೆಳಗ್ಗೆ 10 ಗಂಟೆಗೆ ಆರ್.ಟಿ.ನಗರದ ದಿಣ್ಣೂರು ಮುಖ್ಯರಸ್ತೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಲಾಲ್ ಬಹುದ್ದೂರ್ ಶಾಸ್ತ್ರಿ ಕಾಲೇಜಿನಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳಿಗೆ ನೇರವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ಎಸೆಸೆಲ್ಸಿ ಉತ್ತೀರ್ಣ ಅಥವಾ ಅನುತ್ತೀರ್ಣ, ಪಿಯುಸಿ, ಐಟಿಐ (ಎಲ್ಲ ಟ್ರೇಡ್‌ಗಳು), ಡಿಪ್ಲೋಮೋ, ಪದವೀಧರರು ಹಾಗೂ ಸ್ನಾತಕೋತ್ತರ ಪದವಿ ಹೊಂದಿದವರು ತಮ್ಮ ಸ್ವವಿವರಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದು.
ಹೆಚ್ಚಿನ ವಿವರಗಳಿಗೆ ಅಂಗವಿಕಲ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ಡೈರಿ ಸರ್ಕಲ್ ಹತ್ತಿರ, ಬನ್ನೇರುಘಟ್ಟ ರಸ್ತೆ, ಬೆಂಗಳೂರು-29 ಅಥವಾ 8197239971, 9686922982, 8073741245, 8296892750 ಗೆ ಸಂಪರ್ಕಿಸಬಹುದು ಎಂದು ಅಂಗವಿಕಲ ವಿಶೇಷ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕ ಮಂಜುನಾಥ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





