ಅಕ್ರಮ ಮರ ಸಾಗಾಟ : 5 ಲಕ್ಷ ರೂ. ಮೌಲ್ಯದ ಸೊತ್ತು ವಶ

ಪುತ್ತೂರು : ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿದ ಅರಣ್ಯ ಇಲಾಖೆಯ ಅಧಿಕಾರಿಗಳು ಲಾರಿ ಸಹಿತ 5 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾರ್ಯಾಚರಣೆ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಬೊಳ್ಯಾರ್ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯೊಂದರಲ್ಲಿ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿರುವುದನ್ನು ಖಚಿತ ವರ್ತಮಾನದ ಮೇರೆಗೆ ಪತ್ತೆ ಹಚ್ಚಿದ ಪಾಣಾಜೆ ಉಪವಲಯ ಅರಣ್ಯಾಧಿಕಾರಿ ಲೋಕೇಸ್ ಎಸ್.ಕೆ ಅವರ ತಂಡ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಪುತ್ತೂರು ಶಾಖಾ ಉಪ ವಲಯ ಅರಣ್ಯಾಧಿಕಾರಿ ಶಿವಾನಂದ ಆಚಾರ್ಯು. ಅರಣ್ಯ ರಕ್ಷಕರಾದ ರಾಮಚಂದ್ರ, ಶಶಿಕುಮಾರ್, ವಾಹನ ಚಾಲಕ ಜಗದೀಶ್, ಬಂಟ್ವಾಳ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
Next Story





