ಲೇಖಕಿ ವಸುಮತಿ ಉಡುಪರಿಗೆ ಡಾ.ಬಿ.ಸರೋಜಾದೇವಿ ಸಾಹಿತ್ಯ ಪ್ರಶಸ್ತಿ
ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಎಸ್.ಎಸ್.ಪಾಟೀಲ ಆಯ್ಕೆ

ವಸುಮತಿ ಉಡುಪ
ಬೆಂಗಳೂರು, ಫೆ.17: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೊಡಮಾಡುವ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಶಿಕ್ಷಣ ಕ್ಷೇತ್ರದ ಹಿರಿಯ ಧುರೀಣ ಎಸ್.ಎಸ್.ಪಾಟೀಲ ಹಾಗೂ ಡಾ.ಬಿ.ಸರೋಜಾದೇವಿ ಸಾಹಿತ್ಯ ಪ್ರಶಸ್ತಿಗೆ ಲೇಖಕಿ ವಸುಮತಿ ಉಡುಪರನ್ನು ಆಯ್ಕೆ ಮಾಡಲಾಗಿದೆ.
ಬುಧವಾರ ಕಸಾಪ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ, ಈ ಮೇಲಿನ ಪ್ರಶಸ್ತಿಗಳನ್ನು ಆಯ್ಕೆ ಮಾಡಲಾಗಿದೆ. ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ 25 ಸಾವಿರ ರೂ. ಹಾಗೂ ಡಾ.ಬಿ.ಸರೋಜಾದೇವಿ ಸಾಹಿತ್ಯ ಪ್ರಶಸ್ತಿಯು 15 ಸಾವಿರ ರೂ.ನಗದು, ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಕಸಾಪ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.
Next Story





