ಲೇಖಕಿ ಎಚ್.ಎಸ್.ಸುಜಾತಾ, ಪತ್ರಕರ್ತ ವಿಶ್ವೇಶ್ವರ ಭಟ್‍ಗೆ ಕಸಾಪ ದತ್ತಿ ಪ್ರಶಸ್ತಿ

ಬೆಂಗಳೂರು, ಫೆ.17: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೊಡಮಾಡುವ ಗಿರಿಜಾ ಸಾಹಿತ್ಯ ದತ್ತಿ ಪ್ರಶಸ್ತಿಗೆ ಕನ್ನಡದ ಹಿರಿಯ ಲೇಖಕಿ ಡಾ.ಎಚ್.ಎಸ್.ಸುಜಾತಾ ಹಾಗೂ ನಾಗಡಿಕೆರೆ-ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಆಯ್ಕೆಯಾಗಿದ್ದಾರೆ.
ಟಿ.ಗಿರಿಜಾ ಸಾಹಿತ್ಯ ದತ್ತಿ ಪ್ರಶಸ್ತಿಯು 15 ಸಾವಿರ ರೂ. ಹಾಗೂ ನಾಗಡಿಕೆರೆ-ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿ 10 ಸಾವಿರ ರೂ. ನಗದು, ಸ್ಮರಣಿಕೆಯನ್ನು ಒಳಗೊಂಡಿದೆ.
ಕಸಾಪ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಸದಸ್ಯರಾದ ಅರುಂಧತಿ ರಮೇಶ್, ಕಸಾಪ ಗೌರವ ಕಾರ್ಯದರ್ಶಿ ಡಾ.ಪದ್ಮರಾಜ ದಂಡಾವತಿ, ಕೆ.ರಾಜಕುಮಾರ್, ಕೋಶಾಧ್ಯಕ್ಷ ಮಲ್ಲಿಕಾರ್ಜುನಪ್ಪ ಉಪಸ್ಥಿತರಿದ್ದರೆಂದು ಕಸಾಪ ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story





