ಮರವಂತೆ ಗ್ರಾಮ ಪಂಚಾಯತ್: ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಲೋಕೇಶ್

ಬೈಂದೂರು, ಫೆ.17: ಮರವಂತೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ರುಕ್ಕು ಯಾನೆ ರುಕ್ಮಿಣಿ ಹಾಗೂ ಬಿಜೆಪಿ ಬೆಂಬಲಿತ ಲೋಕೇಶ್ ಖಾರ್ವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 14 ಸದಸ್ಯರ ಬಲದ ಪಂಚಾಯತ್‌ನಲ್ಲಿ 11 ಬಿಜೆಪಿ ಬೆಂಬಲಿತ, 2 ಕಾಂಗ್ರೆಸ್ ಬೆಂಬಲಿತ ಹಾಗೂ ಒಬ್ಬರು ಜೆಡಿಎಸ್ ಬೆಂಬಲಿತ ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆಗೆ ಮೀಸಲಾಗಿದ್ದ ಹಿನ್ನೆಲೆಯಲ್ಲಿ ರುಕ್ಮಿಣಿಗೆ ಅಧ್ಯಕ್ಷ ಸ್ಥಾನ ನಿರಾಯಸವಾಗಿ ದೊರೆತಿದೆ.
Next Story





