ಹಿರಿಯ ಪತ್ರಕರ್ತ ನಿರಂಜನ್ ನಿಕ್ಕಂ ನಿಧನ

ಮೈಸೂರು,ಫೆ.17: ಹಿರಿಯ ಪತ್ರಕರ್ತ ನಿರಂಜನ್ ನಿಕ್ಕಂ(66)ಅವರು ಮಂಗಳವಾರ ರಾತ್ರಿ 11.15ಕ್ಕೆ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ನಿಧನರಾದರು.
ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ.
ಮೃತರು ಹಲವಾರು ಇಂಗ್ಲೀಷ್ ಪತ್ರಿಕೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಜೊತೆಗೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ಮೃತರು ಪತ್ನಿ, ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಬುಧವಾರ ಸಂಜೆ ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ವಿದ್ಯುತ್ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು.
ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ: ಹಿರಿಯ ಪತ್ರಕರ್ತರಾದ ನಿರಂಜನ್ ನಿಕ್ಕಂ ಅವರ ನಿಧನ ತೀವ್ರ ದುಃಖ ತಂದಿದೆ. ಅವರು ವರದಿಗಾರಿಕೆಯಲ್ಲಿ ನಿಷ್ಪಕ್ಷಪಾತ ಧೋರಣೆಯನ್ನು ಹೊಂದಿದ್ದರು. ಸಮಾಜದ ಅಂಕುಡೊಂಕುಗಳನ್ನು ತೋರಿಸುವ ಅವರ ಅನೇಕ ವರದಿಗಳು ಸರ್ಕಾರದ ಗಮನ ಸೆಳೆದಿದ್ದವು. ಪತ್ರಿಕಾ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಿರಂಜನ್ ಅವರು, ಹಲವರಿಗೆ ಮಾರ್ಗದರ್ಶಕರಾಗಿದ್ದರು ಎಂದು ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ ವ್ಯಕ್ತಪಡಿಸಿದ್ದಾರೆ.







