ಫೆ.19: ಐಒಸಿ ಸೌದಿ ಘಟಕ ವತಿಯಿಂದ ದ.ಕ.ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

ಮಂಗಳೂರು : ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಸೌದಿ ಅರೇಬಿಯಾ ಘಟಕದ ಕಾರ್ಯಕರ್ತರ ಸಭೆ ಹಾಗೂ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಲುಕ್ಮಾನ್ ಬಂಟ್ವಾಳ್, ಉಪಾಧ್ಯಕ್ಷ ಗಿರೀಶ್ ಆಳ್ವ, ಕೆಪಿವೈಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೋ ಅವರಿಗೆ ಅಭಿನಂದನಾ ಕಾರ್ಯಕ್ರಮವು ಫೆ.19ರಂದು ಸಂಜೆ 3:30ಕ್ಕೆ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ.
ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಕಟನೆಯಲ್ಲಿ ತಿಳಿಸಿದೆ.
Next Story





