ಫೆ. 22: ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷರ ಪದಗ್ರಹಣ
ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಭಾವೈಕ್ಯತಾ ಸಮಾವೇಶ
ಮಂಗಳೂರು : ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವು ಫೆ.22ರಂದು ಅಪರಾಹ್ನ 2:30ಕ್ಕೆ ನಗರದ ಪುರಭವನದಲ್ಲಿ ನಡೆಯಲಿದೆ ಎಂದು ಘಟಕದ ನೂತನ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್ ತಿಳಿಸಿದ್ದಾರೆ.
ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಭಾವೈಕ್ಯತಾ ಸಮಾವೇಶವಾಗಿ ರೂಪಿಸಲಾಗುವುದು ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಸಈದ್ ಅಹ್ಮದ್, ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರಾದ ರಮಾನಾಥ ರೈ, ಯು.ಟಿ.ಖಾದರ್, ಅಭಯಚಂದ್ರ ಜೈನ್, ವಿನಯ ಕುಮಾರ್ ಸೊರಕೆ, ಗಂಗಾಧರ ಗೌಡ, ಮಾಜಿ ಮುಖ್ಯ ಸಚೇತಕರಾದ ಹಾಜಿ ಕೆ.ಎಸ್. ಮಹಮ್ಮದ್ ಮಸೂದ್, ಮಾಜಿ ರಾಜ್ಯ ಸಭಾ ಸದಸ್ಯ ಹಾಜಿ ಬಿ.ಇಬ್ರಾಹೀಂ, ಮಾಜಿ ಮೂಡಾ ಅಧ್ಯಕ್ಷರಾದ ಹಾಜಿ ಇಬ್ರಾಹೀಂ ಕೋಡಿಜಾಲ್, ಪಕ್ಷದ ಮುಖಂಡರಾದ ಬಿ.ಎಚ್ ಖಾದರ್, ಮಿಥುನ್ ರೈ, ಮಾಜಿ ಶಾಸಕರಾದ ಐವನ್ ಡಿಸೋಜ, ಜೆ.ಆರ್.ಲೋಬೊ, ಮೊಯ್ದಿನ್ ಬಾವ, ವಸಂತ ಬಂಗೇರಾ, ಶಕುಂತಳಾ ಶೆಟ್ಟಿ, ಪಕ್ಷದ ಮುಖಂಡರಾದ ಡಾ.ರಘು ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಮನಪಾ ಪ್ರತಿಪಕ್ಷ ನಾಯಕ ರವೂಫ್ ಬಜಾಲ್, ಕಾರ್ಪೊರೇಟರ್‌ಗಳಾದ ಶಂಶುದ್ದೀನ್ ಕುದ್ರೋಳಿ, ಅಶ್ರಫ್ ಬಜಾಲ್, ದ.ಕ.ಜಿಲ್ಲಾ ಹಿಂದುಳಿದ ಘಟಕದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಮಂಗಳೂರು ನಗರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಶಬೀರ್ ಸಿದ್ಧಕಟ್ಟೆ, ನಝೀರ್ ಬಜಾಲ್ ಉಪಸ್ಥಿತರಿದ್ದರು.





