Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ನಮ್ಮ ಕುಡ್ಲ ಟಾಕೀಸ್’ ಶುಭಾರಂಭ

‘ನಮ್ಮ ಕುಡ್ಲ ಟಾಕೀಸ್’ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ18 Feb 2021 8:21 PM IST
share
‘ನಮ್ಮ ಕುಡ್ಲ ಟಾಕೀಸ್’ ಶುಭಾರಂಭ

ಮಂಗಳೂರು, ಫೆ.18: ನಗರದ ಟಿವಿವಾಹಿನಿ ‘ನಮ್ಮ ಕುಡ್ಲ’ ಸಂಸ್ಥೆಯ ಹೊಸ ಪರಿಕಲ್ಪನೆ ‘ನಮ್ಮ ಕುಡ್ಲ ಟಾಕೀಸ್’ ಶುಭಾರಂಭ, ಲೋಗೊ ಬಿಡುಗಡೆ, ಪ್ರಥಮ ಚಿತ್ರದ ಘೋಷಣೆ, ತುಳು ಚಿತ್ರರಂಗದ 50ನೇ ವರ್ಷದ ಸಂಭ್ರಮ ಕಾರ್ಯಕ್ರಮ ನಗರದ ಓಶಿಯನ್ ಪರ್ಲ್ ಹೋಟೆಲ್‌ನಲ್ಲಿ ಗುರುವಾರ ನಡೆಯಿತು.

ನಟ, ನಿರ್ದೇಶಕ ದೇವದಾಸ್ ಕಾಪಿಕಾಡ್ ಮಾತನಾಡಿ, ನಮ್ಮ ಕುಡ್ಲ ಟಾಕೀಸ್ ಒಂದು ವಿಶೇಷ ಪ್ರಯೋಗ. ತುಳು ಚಿತ್ರರಂಗ ಬೆಳೆಯಲು ಇದು ಸಹಕಾರಿ. ಇದೊಂದು ಒಳ್ಳೆಯ ಪರಿಕಲ್ಪನೆಯಾಗಿದ್ದು, ಚಿತ್ರ ಬೆಳೆದರೆ ಮಾತ್ರ ನಿರ್ಮಾಪಕ ಬೆಳೆಯಲು ಸಾಧ್ಯ. ಈ ನಿಟ್ಟಿನಲ್ಲಿ ನಮ್ಮ ಕುಡ್ಲ ಸಂಸ್ಥೆ ಉತ್ತಮ ಹೆಜ್ಜೆ ಇಡುತ್ತಿದೆ. ತುಳು ಚಿತ್ರಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತಿದೆ ಎಂದು ಶುಭ ಹಾರೈಸಿದರು.

ನಟ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಮಾತನಾಡಿ, ತುಳುನಾಡಿನಲ್ಲಿ ಚಿತ್ರಮಂದಿರದ ಸಮಸ್ಯೆ ಇದ್ದು, ನಮ್ಮ ಕುಡ್ಲ ಹೊಸ ದಿಕ್ಕು ತೋರಿಸಿದೆ. ನಮ್ಮ ಕುಡ್ಲ ಟಾಕೀಸ್ ಶುಭಾರಂಭಗೊಂಡಿದ್ದು, ಅನೇಕ ನಿರ್ಮಾಪಕರಿಗೆ ಸಹಕಾರಿಯಾಗಲಿದೆ ಎಂದರು.

ಕಾರ್ಯಕ್ರಮ ಉದ್ಘಾಟನೆ ಸಮಾರಂಭದಲ್ಲಿ ಪ್ರಮುಖರಾದ ಪ್ರದೀಪ್ ಕುಮಾರ್ ಕಲ್ಕೂರ, ಧರ್ಮಪಾಲ ದೇವಾಡಿಗ, ಶ್ರೀನಿವಾಸ ಚಂದ್ರ ಶೇಖರ್ ಕಿಣಿ, ರಿಚರ್ಡ್ ಕ್ಯಾಸ್ಟಲಿನೊ, ಆರ್. ಪದ್ಮರಾಜ್ ಕುದ್ರೋಳಿ, ಸಂಜೀವ ದಂಡಕೇರಿ, ಚಂದ್ರಶೇಖರ ಶೆಟ್ಟಿ, ನಮ್ಮ ಕುಡ್ಲ ನಿರ್ದೇಶಕ ಹರೀಶ್ ಬಿ. ಕರ್ಕೇರ ಉಪಸ್ಥಿತರಿದ್ದರು.

ಉದ್ಘಾಟನೆಯ ಬಳಿಕ ಹಿರಿಯ ನಿರ್ಮಾಪಕ ಬಾಲಕೃಷ್ಣ ಶೆಟ್ಟಿ ಮೇಗಿನ ಮಾಲಾಡಿ ಲೋಗೊ ಬಿಡುಗಡೆಗೊಳಿಸಿದರು. ಪ್ರಮುಖರಾದ ಕಿಶೋರ್ ಡಿ. ಶೆಟ್ಟಿ, ಪ್ರಕಾಶ್ ಪಾಂಡೇಶ್ವರ, ರವಿ ರೈ ಕಳಸ, ಮೋಹನ್ ಕೊಪ್ಪಳ, ಉದಯ ಪೂಜಾರಿ, ಆರ್.ಧನರಾಜ್, ಅಡ್ಯಾರ್ ಮಾಧವ ನಾಯಕ್, ವಿಶ್ವಾಸ್ ಕುಮಾರ್ ದಾಸ್ ಉಪಸ್ಥಿತರಿದ್ದರು.

ನಮ್ಮ ಕುಡ್ಲ ಟಾಕೀಸ್‌ನಲ್ಲಿ ಪ್ರಸಾರವಾಗುವ ಪ್ರಥಮ ಚಿತ್ರ ಘೋಷಣೆ ಕಾರ್ಯಕ್ರಮದಲ್ಲಿ ಭೋಜರಾಜ ವಾಮಂಜೂರು, ಅರವಿಂದ ಬೋಳಾರ್, ಅರ್ಜುನ್ ಕಾಪಿಕಾಡ್, ಅನ್ವಿತಾ ಸಾಗರ್, ಸಂದೀಪ್ ಶೆಟ್ಟಿ, ರಾಹುಲ್ ಅಮೀನ್, ಮಧು ಸುರತ್ಕಲ್, ಉಮೇಶ್ ಮಿಜಾರ್, ಚೈತ್ರಾ ಶೆಟ್ಟಿ, ವಿನೀತ್, ನವ್ಯ ಪೂಜಾರಿ, ಅಶ್ವಿನಿ, ಅನ್ವಿತಾ ಸಾಗರ್, ಯತೀಶ್ ನಾಯಕ್, ಹಿತೇಶ್ ನಾಯಕ್, ಗಾನಾ ಭಟ್, ನಿಶಾಂತ್, ಸೂರಜ್ ಬೋಳಾರ್ ಉಪಸ್ಥಿತರಿದ್ದರು.

ತುಳು ಚಲನಚಿತ್ರ 50ನೇ ವರ್ಷಕ್ಕೆ ಪಾದಾರ್ಪಣೆಗೈಯುವ ಹಿನ್ನೆಲೆಯಲ್ಲಿ ನಡೆದ ಪುತ್ಥೊಳಿ ಪರ್ಬ ಕಾರ್ಯಕ್ರಮದಲ್ಲಿ ಪ್ರಮುಖರಾದ ವಿ.ಜಿ. ಪಾಲ್, ತಮ್ಮ ಲಕ್ಷ್ಮಣ, ಸರೋಜಿನಿ ಶೆಟ್ಟಿ, ಶರ್ಮಿಳಾ ಕಾಪಿಕಾಡ್, ಜಗನ್ನಾಥ ಶೆಟ್ಟಿ ಬಾಳ, ಯಜ್ಞೇಶ್ವರ ಬರ್ಕೆ, ಬಿ.ಆರ್. ಬಾಳಿಗ, ಮಣಿಕಾಂತ್ ಕದ್ರಿ, ಲಕ್ಷ್ಮಣ್ ಕುಮಾರ್ ಮಲ್ಲೂರು, ಗಂಗಾಧರ ಶೆಟ್ಟಿ, ಇಸ್ಮಾಯಿಲ್ ಮೂಡುಶೆಡ್ಡೆ, ಪಮ್ಮಿ ಕೊಡಿಯಾಲ್‌ಬೈಲ್, ರಣದೀಪ ಕಾಂಚನ್, ಮಂಗೇಶ್ ಭಟ್, ಸಂತೋಷ್, ಹರೀಶ್ ಬಿ. ಕರ್ಕೇರ, ಲೀಲಾಕ್ಷ ಕರ್ಕೇರ, ಮೋಹನ್ ಕರ್ಕೇರ, ಸುರೇಶ್ ಕರ್ಕೇರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಧರ್ಮಸ್ಥಳ ಧರ್ಮಾಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮತ್ತು ಹಿರಿಯ ಚಿತ್ರವಿತರಕ ಟಿ.ಎ. ಶ್ರೀನಿವಾಸ್ ವೀಡಿಯೊ ಮುಖೇನ ನಮ್ಮ ಕುಡ್ಲ ಟಾಕೀಸ್‌ಗೆ ಶುಭಹಾರೈಸಿದರು. ನಮ್ಮ ಕುಡ್ಲ ಚೀಫ್ ಆಪರೇಟಿಂಗ್ ಆಫೀಸರ್ ಕದ್ರಿ ನವನೀತ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿತಿನ್ ಬಿ. ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು.

‘ಪೆಪ್ಪೆರೆರೆ ಪೆರೆರೆರೆ’ ಮೊದಲ ಪ್ರದರ್ಶನ: ನಮ್ಮ ಕುಡ್ಲ ಟಾಕೀಸ್‌ನಲ್ಲಿ ಮಾ.7ರಂದು ಪೆಪ್ಪೆರೆರೆ ಪೆರೆರೆರೆ ತುಳು ಚಿತ್ರ ಮೊದಲ ಬಾರಿಗೆ ಬಿಡುಗಡೆ ಗೊಳ್ಳಲಿದೆ. ನಮ್ಮ ಕುಡ್ಲ ಟಾಕೀಸ್‌ನಲ್ಲಿ ಈ ಚಿತ್ರ ಒಂದು ತಿಂಗಳ ಕಾಲ ಪ್ರಸಾರ ಮಾಡಲಾಗುತ್ತದೆ. ಭಾನುವಾರ ದಿನಕ್ಕೆ 3 ಬಾರಿ ಪ್ರಸಾರವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X