ಬೆಳ್ತಂಗಡಿ : ವಿದ್ಯುತ್ ಅವಘಡದಿಂದ ಯುವಕ ಮೃತ್ಯು

ಬೆಳ್ತಂಗಡಿ : ಮನೆಯಲ್ಲಿ ವಿದ್ಯುತ್ ಅವಘಡದಿಂದಾಗಿ ಯುವಕನೋರ್ವ ಮೃತಪಟ್ಟ ಘಟನೆ ಕಡಿರುದ್ಯಾವರ ಗ್ರಾಮದಲ್ಲಿ ಇಂದು ಸಂಜೆಯ ಸುಮಾರಿಗೆ ನಡೆದಿದೆ.
ಮೃತ ಯುವಕನನ್ನು ಇಲ್ಲಿನ ಅವಿನಾಶ್ ಗೌಡ (23) ಎಂದು ಗುರುತಿಸಲಾಗಿದೆ. ಅವಿನಾಶ್ ಮೇಸ್ತ್ರಿ ಕೆಲಸದ ಜೊತೆಗೆ ಇಲೆಕ್ಟ್ರಿಷಿಯನ್ ಸಹಾಯಕನಾಗಿ ಕೂಡ ಕೆಲಸ ಮಾಡುತ್ತಿದ್ದರು. ಸಂಜೆ ವೇಳೆ ಅವರಿಗೆ ವಿದ್ಯುತ್ ಶಾಕ್ ತಗುಲಿ ಗಂಭೀರ ಗಾಯಗೊಂಡಿದ್ದು, ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





