Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಮ್ಮ ಭರವಸೆಗಳು ಸುಳ್ಳಾಗಿವೆ, ನೀವೂ...

ನಮ್ಮ ಭರವಸೆಗಳು ಸುಳ್ಳಾಗಿವೆ, ನೀವೂ ವಿಫಲರಾಗಿದ್ದೀರಿ: ಪ್ರಧಾನಿ ಮೋದಿ ಬಗ್ಗೆ ಶಂಕರ್ ಬಿದರಿ

'ಅಂದು ಬೆಂಬಲಿಸಿದ್ದೆ, ಇಂದು ಬೇಸರವಾಗುತ್ತಿದೆ' ಎಂದ ನಿವೃತ್ತ ಪೊಲೀಸ್ ಮಹಾನಿರ್ದೇಶಕ

ವಾರ್ತಾಭಾರತಿವಾರ್ತಾಭಾರತಿ18 Feb 2021 10:51 PM IST
share
ನಮ್ಮ ಭರವಸೆಗಳು ಸುಳ್ಳಾಗಿವೆ, ನೀವೂ ವಿಫಲರಾಗಿದ್ದೀರಿ: ಪ್ರಧಾನಿ ಮೋದಿ ಬಗ್ಗೆ ಶಂಕರ್ ಬಿದರಿ

ಬೆಂಗಳೂರು, ಫೆ,18: ಮೋದಿಯವರು 2014ರಲ್ಲಿ ಅಧಿಕಾರಕ್ಕೆ ಬಂದಾಗ ನಾನು ಉತ್ಸಾಹದಲ್ಲಿದ್ದೆ. ಮೋದಿ ಜನರನ್ನು ತನ್ನೊಂದಿಗೆ ಕೊಂಡೊಯ್ದು ದೇಶದ ಹಣೆಬರಹವನ್ನು ಬದಲಾಯಿಸುತ್ತಾರೆ ಎಂದು ನಂಬಿಕೊಂಡಿದ್ದೆ. ಈ ಕಾರಣಕ್ಕೇ ನಾನು ಅವರಿಗೆ ನೋಟ್ ಬ್ಯಾನ್ ಹಾಗೂ 370ರ ವಿಧಿ ಸಂಬಂಧ ಬೆಂಬಲ ವ್ಯಕ್ತಪಡಿಸಿದ್ದೆ. ಆದರೆ ಇಂದು ನನಗೆ ತುಂಬಾ ಬೇಸರವಾಗುತ್ತಿದೆ. ಮೋದಿ ಕೂಡ ಸೋತಿದ್ದಾರೆ'' ಎಂದು ರಾಜ್ಯ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಫೇಸ್‌ಬುಕ್‌ನಲ್ಲಿ ಹಲವು ಪೋಸ್ಟ್‌ಗಳನ್ನು ಮಾಡಿರುವ ಶಂಕರ್ ಬಿದರಿ ಅವರು, ನೆಹರೂ, ಶಾಸ್ತ್ರಿ, ಇಂದಿರಾ, ಮೊರಾರ್ಜಿಯವರು ಮೂರ್ಖರೇ? ದೇಶ ಬಡತನದಲ್ಲಿದ್ದಾಗ ವಿದೇಶಿ ತೈಲ, ವಿಮಾ ಕಂಪನಿಗಳು, ಪಿಎಸ್‌ಯುಗಳಂತಹ ರಾಷ್ಟ್ರೀಯ ಸೊತ್ತುಗಳನ್ನು ಅವರು ನಿರ್ಮಿಸಿದ್ದರು. ಆದರೆ ಅವರು ಮಾಡಿದ ಈ ರಾಷ್ಟ್ರೀಯ ಸೊತ್ತುಗಳು ಇಷ್ಟು ಬೇಗ ವಿದೇಶಿ ಕಂಪನಿಗಳಿಗೆ ಮಾರಾಟಕ್ಕೆ ಬರಲಿವೆ ಎಂದು ಊಹಿಸಿರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ನೋಟ್ ಬ್ಯಾನ್ ನಂತರ ಕೋಟಿಗಟ್ಟಲೆ ಹಣ ಕರ್ನಾಟಕದ ಕೋ ಆಪರೇಟಿವ್ ಬ್ಯಾಂಕ್‌ಗಳಲ್ಲಿ ಹಾಗೂ ಇನ್ನಿತರ ರಾಜ್ಯಗಳಲ್ಲಿ ಕಾನೂನು ಬಾಹಿರವಾಗಿ  ವಿನಿಯಮವಾಗಿದೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಆರ್ಬಿಐ ತೆಗೆದುಕೊಂಡ ಕ್ರಮವಾದರೂ ಏನು ಎಂದು ಪ್ರಶ್ನಿಸಿರುವ ಅವರು, 1999ರಿಂದಲೂ ಕೃಷ್ಣಾ ನದಿ ಕಣಿವೆ ಬಿಜೆಪಿಗೆ ನಿರಂತರವಾಗಿ ಬೆಂಬಲ ನೀಡಿದೆ. ಆ ಸಂದರ್ಭ ಮೋದಿಯವರು ಒಂದು ಹನಿ ನೀರನ್ನೂ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿದ್ದರು. ನಾವು ಅವರನ್ನು ನಂಬಿದ್ದೆವು. ಆದರೆ ಏಳು ವರ್ಷಗಳು ಕಳೆದವು. ಇಂದಿಗೂ ಕರ್ನಾಟಕಕ್ಕೆ ಮೀಸಲಾದ 300 ಟಿಎಂಸಿ ನೀರು ವ್ಯರ್ಥವಾಗಿ ಹೋಗುತ್ತಿದೆ ಎಂದು ಬಿದರಿ ಬೇಸರ ವ್ಯಕ್ತಪಡಿಸಿದ್ದಾರೆ.

ನೀವೂ ವಿಫಲರಾದಿರಿ ಮೋದಿ: ಭ್ರಷ್ಟಾಚಾರ ಹಾಗೂ ಗಂಭೀರ ಅಪರಾಧಗಳ ಆರೋಪ ಎದುರಿಸುತ್ತಿರುವ ರಾಜಕೀಯ ವ್ಯಕ್ತಿಗಳನ್ನು ಈ ವ್ಯವಸ್ಥೆಯಿಂದ ಮೋದಿಯವರು ತೆಗೆದು ಹಾಕುತ್ತಾರೆ ಎಂದು ನಿರೀಕ್ಷಿಸಿದ್ದೆ. ಆದರೆ ಏಳು ವರ್ಷಗಳು ಕಳೆದು ಹೋದವು. ನಮ್ಮ ಭರವಸೆಗಳು ಸುಳ್ಳಾಗಿವೆ. ನೀವೂ ವಿಫಲರಾಗಿದ್ದೀರಿ ಎಂದು ಅವರು ಪೋಸ್ಟ್‌ ಮಾಡಿದ್ದಾರೆ.

SB 75/ 2021. After demonetisation, it was reported that thousands of crores of Demonetised Notes were exchanged for...

Posted by Shankar Mahadev Bidari on Thursday, 18 February 2021

Nehru , Shastri , Indira , Morarji were fools (? ) , never realised that National assets they made by nationalising...

Posted by Shankar Mahadev Bidari on Wednesday, 17 February 2021

SB 73 / 2021 . I was elated in 2014,when Shri Modi came to power. I believed that he will carry 130 Crores with him &...

Posted by Shankar Mahadev Bidari on Wednesday, 17 February 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X