Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ:...

ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ: ಮುಂದಿನ ವಿಚಾರಣೆ ವೇಳೆ ಹಾಜರಿರಲು ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ18 Feb 2021 11:34 PM IST
share
ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ: ಮುಂದಿನ ವಿಚಾರಣೆ ವೇಳೆ ಹಾಜರಿರಲು ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು, ಫೆ.18: ಕೋರ್ಟ್ ಆದೇಶದ ಬಳಿಕವೂ ವ್ಯಕ್ತಿಯೊಬ್ಬರಿಗೆ ಜಮೀನಿನ ಖಾತೆ ಮಾಡಿಕೊಡದ ಹಿನ್ನೆಲೆಯಲ್ಲಿ ದಾಖಲಿಸಿರುವ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಹೈಕೋರ್ಟ್ ಮಾ.8ರಂದು ಆರೋಪ ನಿಗದಿಪಡಿಸಲಿದೆ.

ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿದ್ದರೂ ಭೂಮಿಯ ಖಾತೆ ಮಾಡಿಕೊಟ್ಟಿಲ್ಲ ಎಂದು ಆರೋಪಿಸಿ ಮೈಸೂರಿನ ಎಚ್.ಬಿ.ಅಶೋಕ್ ಸೇರಿ 5 ಮಂದಿ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಆರೋಪಿತ ಅಧಿಕಾರಿ ರೋಹಿಣಿ ಸಿಂಧೂರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ, ಜಮೀನು ಖಾತೆ ಮಾಡಿಕೊಡಲು ಹಲವು ಸಮಸ್ಯೆಗಳಿವೆ. ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ. ವಿವಾದಿತ ಭೂಮಿಗೆ ಹಲವರು ಹಕ್ಕು ಸಾಧನೆ ಮಾಡಲು ಮುಂದಾಗಿದ್ದಾರೆ. ಹೀಗಾಗಿ ಈ ಸಂಬಂಧ ದಾಖಲೆಗಳನ್ನು ಸಲ್ಲಿಸಲು ಹಾಗೂ ನ್ಯಾಯಾಲಯದ ಆದೇಶ ಪಾಲಿಸಲು 3 ತಿಂಗಳ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಇದೀಗ ನೀವು ದಾಖಲೆಗಳನ್ನು ಏಕೆ ಸಲ್ಲಿಸುತ್ತೀರಿ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆದೇಶ ನೀಡಿದೆ. ಈ ಹಂತದಲ್ಲಿ ನೀವು ದಾಖಲೆಗಳನ್ನು ಪರಿಶೀಲಿಸುವುದು, ಸಲ್ಲಿಸುವುದು ಎಂದರೆ ಏನರ್ಥ. ಇಂಥ ಅಧಿಕಾರ ನಿಮಗೆ ಹೇಗೆ ಲಭ್ಯವಿದೆ. ನಿಮಗೆ ನ್ಯಾಯಾಲಯದ ಆದೇಶ ಪಾಲಿಸಬೇಕೆಂಬ ಇಚ್ಚೆಯೇ ಇದ್ದಂತಿಲ್ಲ ಎಂದಿತು.

ಅಧಿಕಾರಿಗಳಿಗೆ ನ್ಯಾಯಾಲಯದ ಆದೇಶಗಳ ಬಗ್ಗೆ ತಿಳಿದಂತೆ ಕಾಣುವುದಿಲ್ಲ. ಜತೆಗೆ ತಾವು ಅಂದುಕೊಂಡದ್ದು ಹಾಗೂ ನಡೆದುಕೊಂಡದ್ದೇ ಸರಿ ಎಂದು ಭಾವಿಸಿದ್ದಾರೆ. ಅಧಿಕಾರಿಗಳು ನ್ಯಾಯಾಲಯದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸಿಕೊಡಿ ಎಂದು ಪೀಠ ಬೇಸರ ವ್ಯಕ್ತಪಡಿಸಿತು.

ಪ್ರಕರಣದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ತಹಶೀಲ್ದಾರ್ ಕೆ.ಆರ್. ರಕ್ಷಿತ್ ನ್ಯಾಯಾಲಯದ ಆದೇಶವನ್ನು ತಿಳಿದಿದ್ದೂ ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಈ ಇಬ್ಬರೂ ಆರೋಪಿತರ ಅಧಿಕಾರಿಗಳ ವಿರುದ್ಧ ಮಾರ್ಚ್ 8ರಂದು ಆರೋಪ ನಿಗದಿಪಡಿಸಲಾಗುವುದು. ಹೀಗಾಗಿ, ಇಬ್ಬರೂ ಅಧಿಕಾರಿಗಳು ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಿರಬೇಕು ಎಂದು ಪೀಠ ಆದೇಶಿಸಿತು. ಇದೇ ವೇಳೆ ಇತರೆ ಮೂರು ನ್ಯಾಯಾಂಗ ನಿಂದನೆ ಅರ್ಜಿಗಳಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿತು.

ಪ್ರಕರಣವೇನು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಕುರುಬಾರಹಳ್ಳಿಯಲ್ಲಿ ಅರ್ಜಿದಾರ ಅಶೋಕ್ ಸೇರಿದಂತೆ ಕೆಲ ವ್ಯಕ್ತಿಗಳು ಬಿ ಖರಾಬ್ ಜಮೀನು ಖಾತೆಗೆ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಜಿಲ್ಲಾಧಿಕಾರಿ ಅರ್ಜಿಗಳನ್ನು ತಿರಸ್ಕರಿಸಿದ್ದರಿಂದ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಸುನಿಲ್ ದತ್ ಯಾದವ್ ಅವರಿದ್ದ ಪೀಠ ಅರ್ಜಿದಾರರಿಗೆ ಖಾತೆ ಮಾಡಿಕೊಡುವಂತೆ 2020ರ ಜೂನ್ 19ರಂದು ಆದೇಶಿಸಿತ್ತು.

ಆದರೆ, ಅಧಿಕಾರಿಗಳು ಖಾತೆ ಮಾಡಿಕೊಟ್ಟಿರಲಿಲ್ಲ. ಬದಲಿಗೆ ಜಿಲ್ಲಾಧಿಕಾರಿ ಖಾತೆ ಮಾಡಿಕೊಡುವ ಸಂಬಂಧ ಸರಕಾರಕ್ಕೆ ಅನುಮತಿ ಕೋರಿ ಪತ್ರ ಬರೆದಿದ್ದರು. ಆದರೆ, ಸರಕಾರ ಈ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಜತೆಗೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿಯನ್ನೂ ಸಲ್ಲಿಸಿರಲಿಲ್ಲ. ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಬಳಿಕ ಜಿಲ್ಲಾಧಿಕಾರಿ ಕೇವಲ ಮೌಖಿಕವಾಗಿ ಕಾರಣಗಳನ್ನು ನೀಡುತ್ತಿರುವುದು ಹೈಕೋರ್ಟ್ ಅಸಮಾಧಾನಕ್ಕೆ ಕಾರಣವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X