Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ ರಂಗಮನೆ ಪ್ರಶಸ್ತಿ'ಗೆ...

ಸುಳ್ಯ ರಂಗಮನೆ ಪ್ರಶಸ್ತಿ'ಗೆ ಮುಖ್ಯಮಂತ್ರಿ ಚಂದ್ರು ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ19 Feb 2021 3:08 PM IST
share

ಸುಳ್ಯ: ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಸಂಸ್ಥೆಯು ಪ್ರತಿವರ್ಷ ಕೊಡಮಾಡುವ 2021 ನೇ ಸಾಲಿನ 'ಸುಳ್ಯ ರಂಗಮನೆ ಪ್ರಶಸ್ತಿ'ಗೆ ಹಿರಿಯ ರಂಗಭೂಮಿ ಮತ್ತು ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಅವರನ್ನು ಆಯ್ಕೆ ಮಾಡಲಾಗಿದೆ.

ನಲವತ್ತು ವರ್ಷಗಳಿಂದ ರಂಗಭೂಮಿ ಮತ್ತು ಚಲನ ಚಿತ್ರರಂಗದಲ್ಲಿ ನಟ, ನಿರ್ದೇಶಕನಾಗಿ ಮಿಂಚಿದ ಚಂದ್ರು ಅವರು ತನ್ನದೇ ಆದ ಅಭಿನಯ ಶೈಲಿ, ಮಾತಗಾರಿಕೆಯಿಂದ ಪ್ರಸಿದ್ಧರಾದವರು. ಹಾಸ್ಯ ಮತ್ತು ಖಳನಾಯಕನಾಗಿ ಮಿಂಚಿದ ಚಂದ್ರು ಅವರ ಮುಖ್ಯಮಂತ್ರಿ ನಾಟಕ ದೇಶ ವಿದೇಶಗಳಲ್ಲಿ ಪ್ರದರ್ಶನಗೊಂಡ ಜನಪ್ರಿಯ ರಾಜಕೀಯ ನಾಟಕವಾಗಿರುತ್ತದೆ.

ಗೌರಿಬಿದನೂರಿನಲ್ಲಿ ಶಾಸಕರಾಗಿಯೂ ಸೇವೆ ಸಲ್ಲಿಸಿದ ಇವರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಕಾಲದಲ್ಲಿ ಕನ್ನಡ ನಾಡು ನುಡಿ ಗಡಿ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅದನ್ನು ಅನುಷ್ಠಾನಗೊಳಿಸಲು ಶ್ರಮಿಸಿದ್ದಾರೆ.

ಇಂಗ್ಲೇಂಡ್, ಮ್ಯಾಂಚಿಸ್ಟೇರ್ ನಲ್ಲಿ ನಡೆದ ವಿಶ್ವ ಕನ್ನಡ ಸಮ್ಮೇಳನ, ಪ್ಯಾರೀಸ್ ನಲ್ಲಿ ನಡೆದ ವಿಶ್ವಶಾಂತಿ ಸಮ್ಮೇಳನ,ಅಮೇರಿಕದ ಅಕ್ಕ ಸಮ್ಮೇಳನ ಮುಂತಾದೆಡೆ ಕನ್ನಡದ ಪ್ರತಿನಿಧಿಯಾಗಿ ಭಾಗವಹಿಸಿದ್ದಾರೆ. ಇವರ ರಂಗಭೂಮಿ ಮತ್ತು ಕನ್ನಡ ಸೇವೆಯನ್ನು ಗುರುತಿಸಿ  ಗುಲ್ಬರ್ಗ ವಿಶ್ವವಿದ್ಯಾಲಯವು ಇವರಿಗೆ ಗೌರವ ಡಾಕ್ಟರೇಟ್  ನೀಡಿ ಗೌರವಿಸಿದೆ.

ಇವರು ಅಭಿನಯಿಸಿದ ನಾಟಕಗಳು ಸಾವಿರಾರು ಪ್ರದರ್ಶನ ಕಂಡಿರುತ್ತದೆ.ಐನೂರಕ್ಕೂ ಅಧಿಕ ಚಲನಚಿತ್ರದಲ್ಲಿ ಅಭಿನಯಿಸಿದ, ಈಗಲೂ ನಾಟಕಗಳಲ್ಲಿ ಅಭಿನಯಿಸುತ್ತಾ ಕೋಟ್ಯಾಂತರ ಕನ್ನಡಿಗರ ಮನಗೆದ್ದ ಚಂದ್ರು ಅವರನ್ನು ಈ ವರ್ಷದ ರಂಗಮನೆ ಪ್ರಶಸ್ತಿಗೆ  ಸಮಿತಿಯು ಆಯ್ಕೆ ಮಾಡಿರುತ್ತದೆ.

ಪ್ರಶಸ್ತಿಯು ಹತ್ತು ಸಾವಿರ ನಗದು ಸೇರಿದಂತೆ ಪ್ರಶಸ್ತಿ ಫಲಕ ಸ್ಮರಣಿಕೆ ಒಳಗೊಂಡಿರುತ್ತದೆ. ಮಾರ್ಚ್ 14 ರಂದು ನಡೆಯುವ 8 ದಿನಗಳ ಬಹುಭಾಷಾ ನಾಟಕೋತ್ಸವದ ಸಮಾರೋಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಂಗಮನೆ ಅಧ್ಯಕ್ಷ ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X