ವೇಣೂರು: ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ವೇಣೂರು ಕತ್ತೋಡಿಬೈಲು ನಿವಾಸಿ ವಿಠಲ ಆಚಾರ್ಯ ಎಂಬವರ ಪುತ್ರಿ ಸೌಮ್ಯಾ (19) ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಭವಿಸಿದೆ.
ಬೆಳ್ತಂಗಡಿ ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ವಿದ್ಯಾರ್ಥಿನಿಯಾಗಿರುವ ಈಕೆ ಲಾಕ್‌ಡೌನ್ ಬಳಿಕ ತರಗತಿಗೆ ತೆರಳದೆ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ. ಬೆಳಗ್ಗೆ ಎದ್ದು ಉಪಹಾರ ಸೇವಿಸಿದ್ದ ಸೌಮ್ಯ ಬಳಿಕ ಮನೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಬೆಳಗ್ಗೆ 9 ಗಂಟೆಯ ಸುಮಾರಿಗೆ ಮನೆಯ ಮೇಲ್ಛಾವಣಿಯನ್ನು ಗಮನಿಸಿದಾಗ ಚೂಡಿದಾರದ ಶಾಲುವಿನಲ್ಲಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೇಣೂರು ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
Next Story





