ಸ್ವಯಂ ಉದ್ಯೋಗಕ್ಕೆ ಅರ್ಜಿ ಆಹ್ವಾನ
ಮಂಗಳೂರು, ಫೆ.19: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿ ಪ್ರಸ್ತುತ ಸಾಲಿನಲ್ಲಿ ಗ್ರಾಮೀಣ ಭಾಗದ ಪರಿಶಿಷ್ಟ ಪಂಗಡವರಿಗಾಗಿ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಕುರಿ ಅಥವಾ ಮೇಕೆ ಘಟಕ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾ.10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಗ್ರಾಮೀಣ ಭಾಗದ ಪರಿಶಿಷ್ಟ ಪಂಗಡದವರು ಸಂಬಂಧಪಟ್ಟ ತಾಲೂಕಿನ ಸಹಾಯಕ ನಿರ್ದೇಶಕರು, (ಗ್ರೇಡ್-12) ಸಮಾಜ ಕಲ್ಯಾಣ ಇಲಾಖೆ, ಇವರಿಂದ ಪಡೆದು ಭರ್ತಿ ಮಾಡಿ ಸಲ್ಲಿಸುವಂತೆ ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





