ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ

ಬೆಂಗಳೂರು, ಫೆ. 19: ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಸರಕಾರಿ ಕಾರಿಗೆ, ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದ ಘಟನೆ ಇಲ್ಲಿನ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಸಚಿವ ಕೋಟ ಪೂಜಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸರಕಾರಿ ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರಿನ ಚಾಲಕ ಸಣ್ಣ-ಪುಟ್ಟ ಗಾಯಗಳಾಗಿವೆ. ಆದರೆ, ಇಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ರಸ್ತೆ ಅಪಘಾತ ಬೆಂಗಳೂರು ಹೊರ ವಲಯದ ನೈಸ್ ರಸ್ತೆಯಲ್ಲಿ ಸಂಭವಿಸಿದ್ದು, ಸಚಿವರು ಪ್ರಯಾಣಿಸುತ್ತಿದ್ದ ಕಾರಿಗೆ ಭಾಗಶಃ ಹಾನಿಯಾಗಿದೆ. ಪ್ರಕರಣ ಸಂಬಂಧ ಇಲ್ಲಿನ ಬಿಡದಿ ಸಮೀಪದ ಕುಂಬಳಗೋಡು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.
Next Story





