ಉಡುಪಿ: ಛತ್ರಪತಿ ಶಿವಾಜಿ, ಸರ್ವಜ್ಞ ಜಯಂತಿ ಆಚರಣೆ

ಉಡುಪಿ, ಫೆ.19: ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸವಿತಾ ಮಹರ್ಷಿ ಜಯಂತಿ, ಛತ್ರಪತಿ ಶಿವಾಜಿ ಜಯಂತಿ ಹಾಗೂ ಸಂತಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ಜಿಲ್ಲಾಧಿಕಾರಿ ಜಿ. ಜಗದೀಶ್ ಮೂವರು ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಸವಿತಾ ಸಮಾಜದ ಪ್ರಧಾನ ಕಾರ್ಯದರ್ಶಿ ಸದಾಶಿವ ಬಂಗೇರ, ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್‌ನ ಜಿಲ್ಲಾ ಅಧ್ಯಕ್ಷ ಪ್ರಕಾಶ್ ರಾವ್ ಕಾವಡೆ, ಸಮಾಜದ ಮುಖಂಡ ಕೇಶವ ರಾವ್ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಸ್ವಾಗತಿಸಿ, ವಂದಿಸಿ ಕಾರ್ಯಕ್ರಮ ನಿರೂಪಿಸಿದರು.
Next Story





