Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಲೆಗಳ ಪುನಾರಂಭ: ಕೋವಿಡ್ ನಿಯಮಗಳನ್ನು...

ಶಾಲೆಗಳ ಪುನಾರಂಭ: ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸುರೇಶ್‍ ಕುಮಾರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ19 Feb 2021 8:22 PM IST
share
ಶಾಲೆಗಳ ಪುನಾರಂಭ: ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸುರೇಶ್‍ ಕುಮಾರ್ ಸೂಚನೆ

ಬೆಂಗಳೂರು, ಫೆ.19: ಫೆ.22ರಿಂದ 6 ರಿಂದ 8ನೆ ತರಗತಿಗಳ ಪುನರರಾಂಭ ಹಿನ್ನೆಲೆ ಶಾಲೆಗಳಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ಸೂಚನೆ ನೀಡಿದ್ದಾರೆ.

ಶುಕ್ರವಾರ ಸುತ್ತೋಲೆ ಹೊರಡಿಸಿರುವ ಅವರು, ಬಿಬಿಎಂಪಿ ವ್ಯಾಪ್ತಿ ಮತ್ತು ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡ ಶಾಲೆಗಳು ಸೇರಿದಂತೆ ರಾಜ್ಯದೆಲ್ಲೆಡೆ 6ರಿಂದ 12ನೆ ತರಗತಿಗಳು ಪೂರ್ಣಾವಧಿಯಲ್ಲಿ ನಡೆಯಲಿವೆ. ಹಾಗಾಗಿ, ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಬಿಬಿಎಂಪಿ ಮತ್ತು ಕೇರಳ ಗಡಿಯ ಶಾಲೆಗಳಲ್ಲಿ 6 ಮತು 7ನೇ ತರಗತಿಗಳಿಗೆ ಎಂದಿನಂತೆ ಪರಿಷ್ಕೃತ ವಿದ್ಯಾಗಮ ತರಗತಿಗಳು ನಡೆಯಲಿವೆ. 6ರಿಂದ ಮೇಲಿನ ತರಗತಿಗಳ ವಿದ್ಯಾರ್ಥಿಗಳು ಮನೆಯಿಂದ ಮಧ್ಯಾಹ್ನದ ಊಟ ತರಬಹುದಾಗಿದೆ. ಸುರಕ್ಷಿತ ಅಂತರ ಮತ್ತು ಶುಚಿತ್ವ ಕಾಪಾಡುವುದು ಮತ್ತು ಮಾಸ್ಕ್ ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ವೇಳೆ: ವಾರದ ಐದು ದಿನಗಳು 6ರಿಂದ ಮೇಲಿನ ತರಗತಿಗಳು ಬೆಳಗ್ಗೆ 10ರಿಂದ 4:30 ಗಂಟೆವರೆಗೆ ಮತ್ತು ಶನಿವಾರ ಬೆಳಗ್ಗೆ 10:30ರಿಂದ 12:30 ಗಂಟೆರವರೆಗೆ ನಡೆಯಲಿವೆ ಎಂದು ಸಲಹಾತ್ಮಕ ವೇಳಾಪಟ್ಟಿ ನಿಗದಿಪಡಿಲಾಗಿದೆ. ಬಿಬಿಎಂಪಿ ಮತ್ತು ಕೇರಳ ಗಡಿ ಭಾಗದ ಶಾಲೆಗಳಲ್ಲಿ 6 ಮತ್ತು 7ನೇ ತರಗತಿಗಳ ವಿದ್ಯಾಗಮ ಕಾರ್ಯಕ್ರಮಗಳು ವಾರದಲ್ಲಿ ಪ್ರತ್ಯೇಕ ಮೂರು ದಿನಗಳ ಕಾಲ ನಡೆಯಲಿವೆ ಅವರು ಮಾಹಿತಿ ನೀಡಿದರು.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವಸತಿ ನಿಲಯಗಳು ಹಾಗೂ ಇತರೆ ವಸತಿ ನಿಲಯಗಳ ವಿದ್ಯಾರ್ಥಿಗಳ ಪಾಲನೆಗಾಗಿ ಆರೋಗ್ಯ ಇಲಾಖೆ ನಿಗದಿಪಡಿಸಿರುವ ಎಸ್‍ಒಪಿ ಅನುಸರಿಸಬೇಕಿದೆ. ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ನಡೆಸಲು ಆಯಾ ಶಾಲಾ ಹಂತದಲ್ಲಿ ಕೊಠಡಿಗಳ ಲಭ್ಯತೆ, ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಶಿಕ್ಷಕರ ಸಂಖ್ಯೆಗಳ ಆಧಾರದಲ್ಲಿ ಎಸ್‍ಒಪಿ ಪಾಲನೆಗಾಗಿ ಶಾಲಾ ವೇಳಾಪಟ್ಟಿ ಪರಿಷ್ಕರಿಸಿ ತರಗತಿಗಳನ್ನು ನಡೆಸಲೂ ಅವಕಾಶವಿದೆ ಎಂದು ಸುರೇಶ್‍ ಕುಮಾರ್ ತಿಳಿಸಿದ್ದಾರೆ.

ಪೋಷಕರಿಂದ ಪತ್ರ ಕಡ್ಡಾಯ

ರಾಜ್ಯದ ಎಲ್ಲ ಜಿಲ್ಲೆಗಳ ಆಯ್ದ ಶಾಲೆಗಳು ಮತ್ತು ವಿದ್ಯಾರ್ಥಿನಿಲಯಗಳಲ್ಲಿ ಆರೋಗ್ಯ ಇಲಾಖೆ ವಿದ್ಯಾರ್ಥಿಗಳ ಯಾದೃಚ್ಛಿಕ (ರ್‍ಯಾಂಡಮ್) ಪರೀಕ್ಷೆ ನಡೆಸಲಿದೆ. ವಿದ್ಯಾರ್ಥಿಗಳು ತಮ್ಮ ಪೋಷಕರಿಂದ ಶಾಲೆಗೆ ಬರಲು ಅನುಮತಿ ಪತ್ರ ತರಬೇಕಿದ್ದು, ಪೋಷಕರು ತಮ್ಮ ಪುತ್ರ, ಪುತ್ರಿ ಕೋವಿಡ್ ಲಕ್ಷಣಗಳಿಂದ ಮುಕ್ತವಾಗಿದ್ದಾರೆಂದು ಅದರಲ್ಲಿ ತಿಳಿಸುವುದು ಕಡ್ಡಾಯವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ದಾಖಲಾತಿ ವಿಸ್ತರಣೆ

ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಪೂರ್ಣಪ್ರಮಾಣದಲ್ಲಿ ವಿದ್ಯಾರ್ಥಿಗಳು ದಾಖಲಾಗದ ಹಿನ್ನೆಲೆಯಲ್ಲಿ ದಾಖಲಾತಿ ಅವಧಿಯನ್ನು ಮಾ.30ರವರೆಗೆ ವಿಸ್ತರಿಸಲಾಗಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸುರೇಶ್‍ಕುಮಾರ್ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X