ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು
ಕುಂದಾಪುರ, ಫೆ.19: ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಫೆ.18ರಂದು ರಾತ್ರಿ ವೇಳೆ ಕೊಟೇಶ್ವರ- ಹಾಲಾಡಿ ರಸ್ತೆಯ ಪ್ರೀತಮ್ ಬಾರ್ ಬಳಿ ನಡೆದಿದೆ.
ಮೃತರನ್ನು ಪ್ರವೀಣ್ ಎಂದು ಗುರುತಿಸಲಾಗಿದೆ. ಕೊಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಹೋಗುತ್ತಿದ್ದ ಬಸ್, ಕೋಣಿ-ಕಟ್ಗೇರಿ ಕಡೆಯಿಂದ ಕೊಟೇಶ್ವರ ಕಡೆಗೆ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಪ್ರವೀಣ್ ಕೊಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





