Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವ್ಯಾಪಾರ-ಬಂಡವಾಳ ಆಕರ್ಷಣೆಗೆ ಥೈಲ್ಯಾಂಡ್...

ವ್ಯಾಪಾರ-ಬಂಡವಾಳ ಆಕರ್ಷಣೆಗೆ ಥೈಲ್ಯಾಂಡ್ ದೇಶದ ಜೊತೆ ಒಡಂಬಡಿಕೆ: ಸಚಿವ ಜಗದೀಶ ಶೆಟ್ಟರ್

ಚೆನ್ನೈನ ರಾಯಲ್ ಥಾಯ್ ಕೌನ್ಸಲ್ ಜೆನೆರಲ್ ನೇತೃತ್ವದ ನಿಯೋಗ ಭೇಟಿ

ವಾರ್ತಾಭಾರತಿವಾರ್ತಾಭಾರತಿ19 Feb 2021 8:29 PM IST
share
ವ್ಯಾಪಾರ-ಬಂಡವಾಳ ಆಕರ್ಷಣೆಗೆ ಥೈಲ್ಯಾಂಡ್ ದೇಶದ ಜೊತೆ ಒಡಂಬಡಿಕೆ: ಸಚಿವ ಜಗದೀಶ ಶೆಟ್ಟರ್

ಬೆಂಗಳೂರು, ಫೆ. 19: ‘ವ್ಯಾಪಾರ ಹಾಗೂ ಬಂಡವಾಳ ಹೂಡಿಕೆ ಸಂಬಂಧ ಥೈಲ್ಯಾಂಡ್ ವಾಣಿಜ್ಯ ಇಲಾಖೆಯ ಜೊತೆ ಶೀಘ್ರದಲ್ಲೇ ಒಡಂಬಡಿಕೆಗೆ ಸಹಿ ಹಾಕಲಾಗುವುದು' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಇಂದಿಲ್ಲಿ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ತಮ್ಮನ್ನು ಭೇಟಿಯಾದ ಚೆನ್ನೈನಲ್ಲಿರುವ ರಾಯಲ್ ಥಾಯ್ ಕೌನ್ಸಲ್ ಜನರಲ್ ನೇತೃತ್ವದ ನಿಯೋಗಕ್ಕೆ ಈ ಭರವಸೆಯನ್ನು ನೀಡಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಕೈಗಾರಿಕಾ ಸ್ನೇಹಿ ರಾಜ್ಯವಾಗಿದೆ. ರಾಜ್ಯದಲ್ಲಿ ಹೂಡಿಕೆಗೆ ವ್ಯಾಪಕವಾದ ಅವಕಾಶಗಳಿದ್ದು, ಹೂಡಿಕೆಗೆ ಥೈಲ್ಯಾಂಡಿನ ಹೂಡಿಕೆದಾರರಿಗೆ ರಾಜ್ಯದಲ್ಲಿರುವ ಅವಕಾಶಗಳ ಬಗ್ಗೆ ತಿಳಿಸಿಕೊಡುವಂತೆ ಸಚಿವರು ಕೌನ್ಸಲ್ ಜನರಲ್ ಆಫ್ ಥಾಯ್ ಅವರಿಗೆ ತಿಳಿಸಿದರು.

ಥೈಲ್ಯಾಂಡ್ ಹಾಗೂ ಕರ್ನಾಟಕದ ನಡುವೆ ಬಂಡವಾಳ ಹೂಡಿಕೆ, ವ್ಯಾಪಾರ ಮತ್ತು ವಾಣಿಜ್ಯ ವಿನಿಮಯಕ್ಕೆ ಹಲವಾರು ಅವಕಾಶಗಳಿವೆ. ಇವುಗಳಿಗೆ ಸಂಬಂಧಿಸಿದಂತೆ ಒಡಂಬಡಿಕೆ ಮಾಡಿಕೊಳ್ಳುವಂತೆ ಥಾಯ್ ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಗದೀಶ್ ಶೆಟ್ಟರ್, ಒಡಂಬಡಿಕೆಯನ್ನು ಪರಿಶೀಲಿಸಿ ಶೀಘ್ರ ದಿನಾಂಕ ನಿಗದಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೌನ್ಸಲ್ ಜನರಲ್ ನಿಟಿರೋಜೆ ಪೋನೇಪ್ರಾಸೆರ್ಟ್ ಮಾತನಾಡಿ, ಐಟಿ, ಫುಡ್‍ಪಾರ್ಕ್ ಗಳ ನಿರ್ಮಾಣ, ಶೈಕ್ಷಣಿಕ ಸಂಸ್ಥೆಗಳ ವಿನಿಮಯ, ಸಂಶೋಧನಾ ಕೇಂದ್ರಗಳ ಸ್ಥಾಪನೆ, ಇನ್‍ಕ್ಯೂಬೇಟರ್ಸ್ ಗಳ ನಿರ್ಮಾಣ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆ ಹಾಗೂ ವ್ಯಾಪಾರ ಮತ್ತು ವಾಣಿಜ್ಯ ವಿನಿಮಯ ಮಾಡಬಹುದಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಗೌರವ್ ಗುಪ್ತಾ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಹಾಗೂ ಕೌನ್ಸಲೇಟ್‍ನ ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X