Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊದಲ ಹಂತದ ಸೇನೆ ಹಿಂದೆಗೆತ ಪ್ರಕ್ರಿಯೆ...

ಮೊದಲ ಹಂತದ ಸೇನೆ ಹಿಂದೆಗೆತ ಪ್ರಕ್ರಿಯೆ ಸಂಪೂರ್ಣ: ಶನಿವಾರ ಭಾರತ-ಚೀನಾ ಕಮಾಂಡರ್ ಮಟ್ಟದ ಮಾತುಕತೆ

ವಾರ್ತಾಭಾರತಿವಾರ್ತಾಭಾರತಿ19 Feb 2021 9:58 PM IST
share

ಹೊಸದಿಲ್ಲಿ, ಫೆ.19: ಪಾಂಗ್ಯಾಂಗ್ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಯಿಂದ ಭಾರತ- ಚೀನೀ ಸೇನೆ ಹಿಂದೆಗೆತ ಪ್ರಕ್ರಿಯೆ ಪೂರ್ಣಗೊಂಡಿದೆ. ಈಗ ಪೂರ್ವ ಲಡಾಖ್‌ನ ಹಾಟ್‌ಸ್ಪ್ರಿಂಗ್ಸ್, ಗೋಗ್ರ ಮತ್ತು ಡೆಪ್ಸಾಂಗ್‌ನಲ್ಲಿ ಸೇನೆ ಹಿಂದೆಗೆತ ಪ್ರಕ್ರಿಯೆ ಮುಂದುವರಿಸುವ ನಿಟ್ಟಿನಲ್ಲಿ ಫೆ.20ರಂದು (ಶನಿವಾರ) ಉಭಯ ಸೇನೆಗಳ ಕಮಾಂಡರ್ ಮಟ್ಟದ ಮಾತುಕತೆ ಆರಂಭವಾಗಲಿದೆ ಎಂದು ಅಧಿಕೃತ ಮೂಲಗಳು ಹೇಳಿವೆ.

ಸೇನಾ ಕಮಾಂಡರ್ ಮಟ್ಟದ 10ನೇ ಸುತ್ತಿನ ಮಾತುಕತೆ ವಾಸ್ತವಿಕ ನಿಯಂತ್ರಣ ರೇಖೆ(ಎಲ್‌ಎಸಿ)ಯ ಚೀನಾದ ಭಾಗದಲ್ಲಿರುವ ಮೋಲ್ಡೊ ಗಡಿಕೇಂದ್ರದಲ್ಲಿ ಶನಿವಾರ ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿದೆ. ಪಾಂಗ್ಯಾಂಗ್ ಸರೋವರ ಪ್ರದೇಶದಿಂದ ಸೇನೆ ಹಿಂದೆಗೆತ ಪೂರ್ಣಗೊಂಡ ಬಳಿಕ ಹಿರಿಯ ಅಧಿಕಾರಿಗಳ ಮಟ್ಟದಲ್ಲಿ ನಡೆಯುವ ಮೊದಲ ಮಾತುಕತೆ ಇದಾಗಿದೆ. ಪಾಂಗ್ಯಾಂಗ್‌ನ ದಕ್ಷಿಣ ದಂಡೆಯಿಂದ ಸೇನಾಪಡೆ, ಆಯುಧಗಳು ಹಾಗೂ ಇನ್ನಿತರ ಸೇನಾ ಸಾಮಾಗ್ರಿಗಳನ್ನು ಹಿಂದೆಗೆದುಕೊಳ್ಳುವ, ಬಂಕರ್‌ಗಳು, ಟೆಂಟ್‌ಗಳು ಹಾಗೂ ಇತರ ತಾತ್ಕಾಲಿಕ ನಿರ್ಮಾಣಗಳನ್ನು ಕಳಚುವ ಪ್ರಕ್ರಿಯೆ ಗುರುವಾರ ಮುಕ್ತಾಯಗೊಂಡಿದ್ದು ಶುಕ್ರವಾರ ಉಭಯ ದೇಶಗಳ ಅಧಿಕಾರಿಗಳು ಈ ವಿಷಯವನ್ನು ಪರಿಶೀಲಿಸಿ ಖಾತರಿ ಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಲಡಾಕ್ ವಲಯದಲ್ಲಿ ಉದ್ವಿಗ್ನತೆ ಶಮನಗೊಳಿಸುವ ನಿಟ್ಟಿನಲ್ಲಿ ಉಳಿದ ಪ್ರದೇಶದಿಂದ ಸೇನೆ ಹಿಂದೆಗೆತ ಪ್ರಕ್ರಿಯೆ ತ್ವರಿತವಾಗಿ ನಡೆಯಬೇಕೆಂದು ಶನಿವಾರದ ಮಾತುಕತೆಯಲ್ಲಿ ಭಾರತ ಬಲವಾಗಿ ಪ್ರತಿಪಾದಿಸಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಮಾತುಕತೆಯಲ್ಲಿ ಲೇಹ್‌ನಲ್ಲಿ ನೆಲೆಯಾಗಿರುವ 14 ಕಾರ್ಪ್ಸ್ ತುಕಡಿಯ ಕಮಾಂಡರ್ ಲೆಜ ಪಿಜಿಕೆ ಮೆನನ್ ಭಾರತದ ನಿಯೋಗದ ನೇತೃತ್ವ ವಹಿಸಲಿದ್ದರೆ ಚೀನೀ ನಿಯೋಗದ ನೇತೃತ್ವವನ್ನು ಮೇಜರ್ ಜನರಲ್ ಲಿಯು ಲಿನ್ ವಹಿಸುತ್ತಾರೆ ಎಂದು ವರದಿಯಾಗಿದೆ. ಪಾಂಗ್ಯಾಂಗ್ ಸರೋವರ ಪ್ರದೇಶದಿಂದ ಸೇನೆ ಹಿಂದೆಗೆತ ಪ್ರಕ್ರಿಯೆ ಪೂರ್ಣಗೊಂಡ 48 ಗಂಟೆಯೊಳಗೆ, ಉಳಿದ ಎಲ್ಲಾ ಬಿಕ್ಕಟ್ಟಿನ ಇತ್ಯರ್ಥದ ಬಗ್ಗೆ ಚರ್ಚಿಸಲು ಉಭಯ ಸೇನೆಗಳ ಹಿರಿಯ ಕಮಾಂಡರ್‌ಗಳ ಮಟ್ಟದ ಸಭೆ ನಡೆಯಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದರು.

ಈ ಮಧ್ಯೆ, ಕಳೆದ ವರ್ಷದ ಜೂನ್‌ನಲ್ಲಿ ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಭಾರತೀಯ ಯೋಧರೊಂದಿಗೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ತನ್ನ ನಾಲ್ವರು ಯೋಧರು ಮೃತಪಟ್ಟಿರುವುದಾಗಿ ಶುಕ್ರವಾರ ಚೀನಾ ಅಧಿಕೃತವಾಗಿ ಘೋಷಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X