ಫೆ. 22: ಮೀಫ್ ಮಹಾಸಭೆ
ಮಂಗಳೂರು, ಫೆ.19: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್)ದ ವಾರ್ಷಿಕ ಮಹಾಸಭೆಯು ಫೆ.22ರಂದು ಬೆಳಗ್ಗೆ 10ಕ್ಕೆ ನಗರದ ಕಂಕನಾಡಿಯ ಜಮೀಯ್ಯತುಲ್ ಫಲಾಹ್ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಬಳಿಕ ದ.ಕ.ಜಿಲ್ಲಾ ಡಿಡಿಪಿಐ ಮಲ್ಲೇಸ್ವಾಮಿ ಮತ್ತು ಅಗ್ನಿಶಾಮಕ ದಳದ ಅಧಿಕಾರಿ ಭರತ್‌ಕುಮಾರ್ ಪಾಲ್ಗೊಂಡು ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅಧ್ಯಕ್ಷ ಮೂಸಬ್ಬ ಬ್ಯಾರಿ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಎ.ನಝೀರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





