Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಂಚಮಸಾಲಿ ಸಮುದಾಯದ ‘2ಎ' ಮೀಸಲಾತಿಗೆ...

ಪಂಚಮಸಾಲಿ ಸಮುದಾಯದ ‘2ಎ' ಮೀಸಲಾತಿಗೆ ನನ್ನ ಬೆಂಬಲವಿದೆ: ಡಿಸಿಎಂ ಲಕ್ಷ್ಮಣ ಸವದಿ

ವಾರ್ತಾಭಾರತಿವಾರ್ತಾಭಾರತಿ19 Feb 2021 10:03 PM IST
share
ಪಂಚಮಸಾಲಿ ಸಮುದಾಯದ ‘2ಎ ಮೀಸಲಾತಿಗೆ ನನ್ನ ಬೆಂಬಲವಿದೆ: ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು, ಫೆ. 19: ‘ನಿನ್ನೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ‘2ಎ' ಮೀಸಲಾತಿ ನೀಡಬೇಕೆಂಬ ವಿಚಾರಕ್ಕೆ ನಾನು ವಿರೋಧ ವ್ಯಕ್ತಪಡಿಸಿಲ್ಲ. ಪಂಚಮಸಾಲಿ ಮೀಸಲಿಗೆ ನಾನು ಆಗ್ರಹಿಸುವೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.

ಶುಕ್ರವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ನಾನು ಪಂಚಮಸಾಲಿ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿದ್ದೇನೆ ಎಂದು ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾಗಿದೆ. ನನ್ನ ವಿರುದ್ಧ ಸಮಾಜದಲ್ಲಿ ತಪ್ಪು ಭಾವನೆ ಸೃಷ್ಟಿಸಬೇಕೆಂಬ ದುರುದ್ದೇಶದಿಂದ ಸತ್ಯಕ್ಕೆ ದೂರವಾದ ಈ ಸಂಗತಿಯನ್ನು ಬಿತ್ತರಿಸುತ್ತಿರುವುದು ಇದರಿಂದ ಸ್ಪಷ್ಟವಾಗುತ್ತದೆ.

ನಾನು ಮೊದಲಿನಿಂದಲೂ ಪಂಚಮಸಾಲಿ ಸಮುದಾಯಕ್ಕೆ ಮೀಸಲು ನೀಡಬೇಕೆಂಬ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸುತ್ತಲೇ ಬಂದಿದ್ದೇನೆ. ಹಿಂದೆ ಬೆಳಗಾವಿಯ ಸುವರ್ಣಸೌಧದ ಎದುರು ಪಂಚಮಸಾಲಿಗೆ ‘2ಎ' ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ನಡೆಸಿದ್ದ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ನಾನೂ ಭೇಟಿ ಕೊಟ್ಟು ಅವರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದೇನೆ. ಅವರಿಗೆ ಬೆಂಬಲ ಸೂಚಿಸಿ ಆ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ಮನವಿ ಮಾಡಿಕೊಂಡು ಶ್ರೀಗಳಿಗೆ ಎಳೆನೀರನ್ನು ಸೇವಿಸಲು ವಿನಂತಿಸಿಕೊಂಡಿದ್ದೆ. ಅದರಂತೆ ಶ್ರೀಗಳು ಅಂದು ಉಪವಾಸ ಸತ್ಯಾಗ್ರಹ ಕೈಬಿಟ್ಟಿದ್ದರು.

ವಾಸ್ತವ ಸ್ಥಿತಿ ಹೀಗಿರುವಾಗ ನಾನು ಇದಕ್ಕೆ ವ್ಯತಿರಿಕ್ತವಾಗಿ ಹೇಳಿಕೆ ನೀಡಲು ಹೇಗೆ ಸಾಧ್ಯ. ಮೊದಲಿನಿಂದಲೂ ನಾನು ಅನೇಕ ಸಂದರ್ಭಗಳಲ್ಲಿ ಪಂಚಮಸಾಲಿ ಸಮುದಾಯವು ‘2ಎ'ಗೆ ಸೇರಬೇಕು ಎಂದು ಪ್ರತಿಪಾದಿಸುತ್ತಿದ್ದೇನೆ. ಅಲ್ಲದೆ, ಸರಕಾರವೂ ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ಈ ದಿಶೆಯಲ್ಲಿ ಗಂಭೀರ ಪರಾಮರ್ಶೆ ನಡೆಸುತ್ತಿದೆ. ಆದಾಗ್ಯೂ ನನ್ನ ವಿರುದ್ಧ ಅನವಶ್ಯಕವಾಗಿ ಇಲ್ಲಸಲ್ಲದ ಅಭಿಪ್ರಾಯಗಳನ್ನು ಸೃಷ್ಟಿಸಿ ಅಪಪ್ರಚಾರಕ್ಕೆ ಪ್ರಯತ್ನಿಸುತ್ತಿರುವ ಕಾಣದ ಕೈಗಳ ಕುತಂತ್ರವನ್ನು ನಂಬಬಾರದು ಎಂದು ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X