ರಾಜ್ಯದಲ್ಲಿಂದು 386 ಕೊರೋನ ಪ್ರಕರಣಗಳು ದೃಢ: ಐವರು ಮೃತ್ಯು

ಬೆಂಗಳೂರು, ಫೆ.19: ರಾಜ್ಯದಲ್ಲಿ ಶುಕ್ರವಾರ 386 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 5 ಜನರು ಸೋಂಕಿಗೆ ಬಲಿಯಾಗಿದ್ದು, 291 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 9,47,246ಕ್ಕೆ ತಲುಪಿದ್ದು, 125 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.
ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 12,287ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 5,882ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
ಐದು ಸೋಂಕಿತರು ಬಲಿ: ಬೆಂಗಳೂರು ನಗರ 4, ಕೊಡಗು 1 ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 386 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 3, ಬಳ್ಳಾರಿ 6, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 209, ಚಾಮರಾಜನಗರ 2, ಚಿಕ್ಕಬಳ್ಳಾಪುರ 6, ಚಿತ್ರದುರ್ಗ 2, ದಕ್ಷಿಣ ಕನ್ನಡ 20, ದಾವಣಗೆರೆ 5, ಧಾರವಾಡ 2, ಕಲಬುರಗಿ 23, ಕೋಲಾರ 6, ಮಂಡ್ಯ 4, ಮೈಸೂರು 34, ಶಿವಮೊಗ್ಗ 6, ತುಮಕೂರು 11, ಉಡುಪಿ 4, ಉತ್ತರ ಕನ್ನಡ 3, ವಿಜಯಪುರ 9, ಯಾದಗಿರಿ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿವೆ.
ರಾಜಧಾನಿಯಲ್ಲಿ 209 ಕೊರೋನ ಪ್ರಕರಣ ದೃಢ
ರಾಜಧಾನಿಯಲ್ಲಿ ಶುಕ್ರವಾರದಂದು 209 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ನಾಲ್ವರು ಮೃತಪಟ್ಟಿದ್ದಾರೆ. 111 ಸೋಂಕಿತರು ಬಿಡುಗಡೆಯಾಗಿದ್ದಾರೆ.
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 403236 ಕೊರೋನ ಸೋಂಕಿತರು ದೃಢಪಟ್ಟಿದ್ದು, 4,445 ಜನರು ಸೋಂಕಿಗೆ ಬಲಿಯಾಗಿದ್ದಾರೆ. 3,94,583 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.







