Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ ಮೆಡಿಕಲ್ ಕಾಲೇಜ್‍ನಲ್ಲಿ...

ಮಡಿಕೇರಿ ಮೆಡಿಕಲ್ ಕಾಲೇಜ್‍ನಲ್ಲಿ ನರ್ಸಿಂಗ್ ಕೋರ್ಸ್ ಆರಂಭಕ್ಕೆ ಸರ್ಕಾರದಿಂದ ಅನುಮತಿ

ವಾರ್ತಾಭಾರತಿವಾರ್ತಾಭಾರತಿ19 Feb 2021 11:44 PM IST
share
ಮಡಿಕೇರಿ ಮೆಡಿಕಲ್ ಕಾಲೇಜ್‍ನಲ್ಲಿ ನರ್ಸಿಂಗ್ ಕೋರ್ಸ್ ಆರಂಭಕ್ಕೆ ಸರ್ಕಾರದಿಂದ ಅನುಮತಿ

ಮಡಿಕೇರಿ, ಫೆ.19: ಕೊಡಗು ಜಿಲ್ಲೆಯ ಬಹು ದಿನಗಳ ಬೇಡಿಕೆಯಾಗಿದ್ದ ಬಿಎಸ್ಸಿ ನರ್ಸಿಂಗ್ ಕೋರ್ಸ್ ಪ್ರಾರಂಭಿಸಲು ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ(ಮೆಡಿಕಲ್ ಕಾಲೇಜು) ಈ ಕೋರ್ಸ್ ಆರಂಭವಾಗಲಿದ್ದು, 100 ಸರಕಾರಿ ಸೀಟುಗಳ ಪ್ರವೇಶದೊಂದಿಗೆ ಈ ವರ್ಷದಿಂದಲೇ ತರಗತಿ ಪ್ರಾರಂಭವಾಗಲಿದೆ. ಇದು ಕೊಡಗು ಜಿಲ್ಲೆಯಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಒಂದು ಕೊಡುಗೆಯಾಗಿಯೂ ಆಗಿದ್ದು, ಇದರಿಂದ ಜಿಲ್ಲೆಯಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಮತ್ತಷ್ಟು ಅವಕಾಶಗಳು ದೊರಕಿದಂತಾಗಿದೆ. 

ನರ್ಸಿಂಗ್ ಕೋರ್ಸ್‍ನ 100 ಸೀಟುಗಳು ಸರ್ಕಾರಿ ಸೀಟುಗಳಾಗಿರುವ ಹಿನ್ನಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕೌನ್ಸಿಲಿಂಗ್ ಮೂಲಕ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಲಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಕೋರ್ಸ್‍ಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸುವ ಸಾಧ್ಯತೆಯಿದೆ. ಬಡ, ಮಧ್ಯಮ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಈ ಸರಕಾರಿ ಸೀಟುಗಳು ಕೋರ್ಸ್ ಪೂರೈಸಲು ಅನುಕೂಲ ಕಲ್ಪಿಸಲಿವೆ.

ಈ ಹಿಂದೆ ಜಿಲ್ಲೆಯ ವಿದ್ಯಾರ್ಥಿಗಳು ಬಿಎಸ್ಸಿ ನರ್ಸಿಂಗ್ ತರಬೇತಿಗಾಗಿ ಇತರೆ ಜಿಲ್ಲೆಯ ಖಾಸಗಿ ಅಥವಾ ಸರ್ಕಾರಿ ಕಾಲೇಜನ್ನು ಅವಲಂಭಿಸಬೇಕಿತ್ತು. ಇದೀಗ ಕೊಡಗಿನಲ್ಲಿಯೇ ಶಿಕ್ಷಣ ದೊರಕುತ್ತಿರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳಿಗೆ ಅವಕಾಶ ದೊರಕಲಿದೆ. ಜಿಲ್ಲೆಯ ವಿದ್ಯಾರ್ಥಿಗಳಲ್ಲೂ ಕೂಡ ಬಿಎಸ್ಸಿ ನರ್ಸಿಂಗ್ ಕೋರ್ಸ್ ತರಗತಿಗೆ ಸೇರಲು ಆಸಕ್ತಿ ಮೂಡಲಿದ್ದು, ಸರ್ಕಾರಿ ಸೀಟು ಆಗಿರುವುದರಿಂದ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಪ್ರಾರಂಭವಾಗುತ್ತಿರುವ ಬಿಎಸ್ಸಿ ನರ್ಸಿಂಗ್ ಕೋರ್ಸ್‍ನಿಂದ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ತತ್ರೆಯ ಗುಣಮಟ್ಟ ಮತ್ತಷ್ಟು ಏರಿಕೆಯಾಗಲಿದ್ದು, ರೋಗಿಗಳಿಗೆ ಹೆಚ್ಚಿನ ಶುಶ್ರೂಷ ಸೇವೆಯೂ ದೊರೆಯಲಿದೆ. ಈಗಾಗಾಲೇ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಎಂಬಿಬಿಎಸ್ ಕೋರ್ಸ್, ಪ್ಯಾರ ಮೆಡಿಕಲ್ ಕೋರ್ಸ್ ಪ್ರಾರಂಭಿಸಲಾಗಿದ್ದು, ಇದರ ಜೊತೆಗೆ ಸಂಸ್ಥೆಯಲ್ಲಿ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಪ್ರಾರಂಭವಾಗುತ್ತಿರುವುದು ಸಂಸ್ಥೆಯ ಹಿರಿಮೆ ಮತ್ತು ಕ್ಷಮತೆಯನ್ನೂ ಹೆಚ್ಚಿಸಿದ್ದು, ಸಾರ್ವಜನಿಕರಿಗೆ ಹೆಚ್ಚಿನ ಸೇವೆ ನೀಡಲು ಸಹಕಾರಿಯಾಗಿದೆ.

2014ರಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಗೊಂಡು 2016ರಲ್ಲಿ ಕಾಲೇಜು ಆರಂಭವಾಯಿತು. ಪ್ರಸ್ತುತ ಕಾಲೇಜಿನಲ್ಲಿ 750 ಎಂಬಿಬಿಎಸ್ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯನ್ನಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗಿದೆ. ಎಲ್ಲಾ ವಿಭಾಗಗಳಲ್ಲೂ ನುರಿತ ತಜ್ಞ ವೈದ್ಯರಿಂದ ಸೇವೆಯನ್ನು ನೀಡಲಾಗುತ್ತಿದೆ. ಕಾಲೇಜಿನಲ್ಲಿ ಅತ್ಯುತ್ತಮ ದರ್ಜೆಯ ಬೋಧನಾ ಕೊಠಡಿಗಳು, ಆಧುನಿಕ ಪ್ರಯೋಗಾಲಯಗಳು ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದ ಮ್ಯೂಸಿಯಂ ಕೂಡ ಇದೆ.  

ಕೊಡಗು ವೈದ್ಯಕೀಯ ಕಾಲೇಜಿನ  ವ್ಯಾಪ್ತಿಯಲ್ಲಿ ಬಿಎಸ್ಸಿ ನರ್ಸಿಂಗ್ ಕೋರ್ಸ್‍ಗೆ ಸರ್ಕಾರದಿಂದ ಅನುಮತಿ ದೊರಕಿದೆ. ಈ ವರ್ಷದಿಂದಲೇ ತರಗತಿ ಆರಂಭವಾಗಲಿದ್ದು, 100 ಸರಕಾರಿ ಸೀಟುಗಳು ಲಭ್ಯವಿರಲಿದೆ. 4.6 ವರ್ಷದ ಕೋರ್ಸ್ ಇದಾಗಿದ್ದು, ಈಗಾಗಲೇ ಕಾಲೇಜಿನಲ್ಲಿ ನರ್ಸಿಂಗ್ ಆಫೀಸರ್, ಬೋಧಕ ಸಿಬ್ಬಂದಿಗಳಿದ್ದಾರೆ. 

-ಡಾ. ಕಾರ್ಯಪ್ಪ, ಡೀನ್ ಕೊಡಗು ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ

ಮಡಿಕೇರಿಯ ವೈದ್ಯಕೀಯ ಕಾಲೇಜಿನಲ್ಲಿ ಬಿಎಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಿಸುವಂತೆ ಕಳೆದ ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆವು. ಇದೀಗ ಸರ್ಕಾರದಿಂದ ಅನುಮತಿ ದೊರೆತ್ತಿದ್ದು, ಈ ವರ್ಷವೇ ತರಗತಿ ಆರಂಭವಾಗಲಿದೆ. ಮೆಡಿಕಲ್ ಕಾಲೇಜು ಹಾಗೂ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳ ಸಭೆ ಕರೆದು ತರಗತಿಗಳನ್ನು ಎಲ್ಲಿ ನಡೆಸಬೇಕೆಂಬ ಬಗ್ಗೆ ನಿರ್ಧಾರ ಮಾಡಲಾಗುತ್ತದೆ.
-ಅಪ್ಪಚ್ಚು ರಂಜನ್, ಶಾಸಕರು, ಮಡಿಕೇರಿ ಕ್ಷೇತ್ರ

ಈ ಹಿಂದೆ ಕೊಡಗಿಗೆ ಆರೋಗ್ಯ ಸಚಿವರು ಭೇಟಿ ನೀಡಿದ್ದ ಸಂದರ್ಭ ಕೊಡಗು ಮೆಡಿಕಲ್ ಕಾಲೇಜು ವ್ಯಾಪ್ತಿಯಲ್ಲಿ ಬಿಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಿಸುವಂತೆ ಮನವಿ ಸಲ್ಲಿಸಲಾಗಿತ್ತು. ಮಾತ್ರವಲ್ಲದೆ ಮುಖ್ಯಮಂತ್ರಿಗಳಿಗೆ ಈ ಕುರಿತು ಮನವಿ ಮಾಡಿದ್ದೆವು. ಇದೀಗ ಸರ್ಕಾರದಿಂದ ನರ್ಸಿಂಗ್ ಕೋರ್ಸ್ ಆರಂಭಕ್ಕೆ ಅನುಮತಿ ದೊರೆತಿದೆ. ಸದ್ಯದಲ್ಲಿಯೇ ತರಗತಿಗಳು ಆರಂಭವಾಗಲಿದೆ.

-ಕೆ.ಜಿ. ಬೋಪಯ್ಯ, ಶಾಸಕರು ವಿರಾಜಪೇಟೆ ಕ್ಷೇತ್ರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X