Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಜಿಲ್ಲಾಧಿಕಾರಿಯ ಮೊದಲ...

ಬೆಳ್ತಂಗಡಿ: ಜಿಲ್ಲಾಧಿಕಾರಿಯ ಮೊದಲ ಗ್ರಾಮವಾಸ್ತವ್ಯ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ20 Feb 2021 11:14 PM IST
share
ಬೆಳ್ತಂಗಡಿ: ಜಿಲ್ಲಾಧಿಕಾರಿಯ ಮೊದಲ ಗ್ರಾಮವಾಸ್ತವ್ಯ ಕಾರ್ಯಕ್ರಮ

ಬೆಳ್ತಂಗಡಿ: ಕಾಡಂಚಿನ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯಲು ಅರಣ್ಯ ಇಲಾಖೆಯ ಕಾನೂನುಗಳು ತೊಡಕಾಗುತ್ತಿದ್ದು ಇಲಾಖೆಯ ಸಹಕಾರದೊಂದಿಗೆ ಇಲ್ಲಿನ ಕೃಷಿಕರ ಸಮಸ್ಯೆಗಳಿಗೆ ಪರಿಹಾರ ಕಾಣಲು ಹಾಗೂ ಈ ಪ್ರದೇಶದ ಅಭಿವೃದ್ದಿಗೆ ಶ್ರಮಿಸುವುದಾಗಿ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಹೇಳಿದರು.

ಅವರು ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ದ.ಕ ಜಿಲ್ಲಾಧಿಕಾರಿಯವರ ಮೊದಲ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅರಣ್ಯ ಮತ್ತು ಕಂದಾಯ ಇಲಾಖೆಯ ಜಮೀನುಗಳು ಒಂದೇ ಸರ್ವೆ ನಂಬರಿನಲ್ಲಿದ್ದು, ಇದರಿಂದಾಗಿ ಕೃಷಿಕರಿಗೆ ಹಾಗೂ ಮನೆ ನಿರ್ಮಿಸಿದವರಿಗೆ ಹಕ್ಕುಪತ್ರ ನೀಡಲು ತೊಡಕಾಗುತ್ತಿದೆ. ಇದನ್ನು ನಿವಾರಿಸಲು ಜಂಟಿ ಸರ್ವೆ ನಡೆಸಿ ಅರಣ್ಯ ಇಲಾಖೆಯ ಜಮೀನು ಹಾಗೂ ಕಂದಾಯ ಇಲಾಖೆಯ ಜಮೀನನ್ನು ಪ್ರತ್ಯೇಕ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದೀಗ  ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದಲ್ಲಿ ಇದರ ಅನುಷ್ಠಾನ ಆರಂಭಗೊಂಡಿದ್ದು ಮುಂದಿನ ದಿನಗಳಲ್ಲಿ ಶಿಶಿಲದಲ್ಲಿಯೂ ಇದನ್ನು ಅನುಷ್ಟಾನಕ್ಕೆ ತರಲಾಗುವುದು ಎಂದು ಅವರು ತಿಳಿಸಿದರು.

ಇದು ಕೇವಲ ಭರವಸೆಗಳ ಗ್ರಾಮವಾಸ್ತವ್ಯವಾಗಲಾರದು ಇಡೀ ಜಿಲ್ಲಾಡಳಿತವೇ ಇಲ್ಲಿಗೆ ಬಂದಿದ್ದು ಸಾಧ್ಯವಿರುವ ಎಲ್ಲ ವಿಚಾರಗಳಲ್ಲಿಯೂ ಸ್ಥಳದಲ್ಲಿಯೇ ತೀರ್ಮಾನ ತೆಗೆದುಕೊಳ್ಳಲಾಗುವುದು. ಹಾಗೂ ಇಲ್ಲಿ ಬಂದ ಅರ್ಜಿಗಳ ಪರಿಶೀಲನೆಗೆ ಪ್ರತ್ಯೇಕ ಕ್ರಮ ಕೈಗೊಳ್ಳಲಾಗುವುದು ಎಂದರು.

ಸರಕಾರದ ಯೋಜನೆಗಳನ್ನು ಪಡೆಯಲು ಜನರು ಕಚೇರಿಗೆ ಅಲೆದಾಡುವುದು ತಪಪಬೇಕು ಜನರ ಮನೆ ಬಾಗಿಲಿಗೆ ಅಧಿಕಾರಿಗಳು ಬಂದು ಸೇವೆ ನೀಡುವಂತಾಗಬೇಕು ಎಂಬುದೇ ಗ್ರಾಮ ವಾಸ್ತವ್ಯದ ಗುರಿಯಾಗಿದೆ.

ಶಿಶಿಲೇಶ್ವರ ದೇವಸ್ಥಾನ ಮತ್ತು ಚಾರಣದ ತಾಣಗಳನ್ನು ಒಟ್ಟುಸೇರಿಸಿ ಪ್ರವಾಸಿ ತಾಣವಾಗಿ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಜಿಲ್ಲಾಡಳಿತವು ಹಳ್ಳಿಗೆ ತರುವುದು ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶಗಳ ಜನರ ಬಹುತೇಕ ಸಮಸ್ಯೆಗಳಿಗೆ ಪರಿಹಾರವಕಂಡುಕೊಳ್ಳಲು ಸಾಧ್ಯವಾಗಲಿದೆ ಎಂದರು.

ಶಿಶಿಲವನ್ನುಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಹಾಗೂ ಶಿಶಿಲ ಭೈರಾಪುರ ರಸ್ತೆಯ ಕನಸು ನನಸಾಗಲು ಈ ಗ್ರಾಮವಾಸ್ತವ್ಯ ಕಾರಣವಾಗಲಿದೆ. ತಾಲೂಕಿನ ಹಲವು ಗ್ರಾಮಗಳಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ದಿ ಹಾಗೂ ಇತರವಹಲವು ಯೋಜನೆಗಳಿಗೆ  ಹಾಗೂ ಬಡವರಿಗೆ ಹಕ್ಕು ಪತ್ರ ನೀಡಲು ಅರಣ್ಯ ಕಾನೂನು ತೊಡಕಾಗುತ್ತಿದ್ದು ಈ ಬಗ್ಗೆ ಜಿಲ್ಲಾಡಳಿತ ಗಮನಹರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ತಾ. ಪಂ ಅಧ್ಯಕ್ಷೆ ದಿವ್ಯಜ್ಯೋತಿ, ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ, ಗ್ರಾ. ಪಂ ಅಧ್ಯಕ್ಣ ಸಂದೀಪ್, ಉಪಾಧ್ಯಕ್ಷೆ ವಿಮಲ, ಪ್ರಭಾರ ತಹಶೀಲ್ದಾರ್ ರಮೇಶ್ ಬಾಬು, ತಾ. ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ತಾಲೂಕು ಹಾಗೂವಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು. ಸಹಾಯಕ ಕಮಿಷನರ್ ಯತೀಶ್ ಉಳ್ಳಾಲ್ ಸ್ವಾಗತಿಸಿದರು. ಸುಭಾಶ್ ಜಾಧವ ಕಾರ್ಯಕ್ರಮ ನಿರೂಪಿಸಿದರು. 

ಹರಿದು ಬಂದ ಸಮಸ್ಯೆಗಳ ಮಹಾಪೂರ; 
ಅರಣ್ಯ ಮತ್ತು ಕಂದಾಯ ಇಲಾಖೆಯ ನಡುವಿನ ಗೊಂದಲಗಳಿಂದಾಗಿ ಅಕ್ರಮ ಸಕ್ರಮದಲ್ಲಿ ಅರ್ಜಿ ಸಲ್ಲಿಸಿ ವರ್ಷಗಳೇ ಕಳೆದಿದ್ದರೂ ಹಕ್ಕು ಪತ್ರ ಸಿಗುತ್ತಿಲ್ಲ. ದಶಕಗಳಿಂದ ಬದುಕುತ್ತಿರುವ ಮನೆಗೆ 94ಸಿ ಯಲ್ಲು ಅರ್ಜಿ ಸಲ್ಲಿಸಿದರೆ ಅದೂ ಸಿಗುತ್ತಿಲ್ಲ. ಕಸ್ತೂರಿ ರಂಗನ್ ವರದಿಯ ಅನುಷ್ಟಾನದ ಬಗ್ಗೆ ಜನರಲ್ಲಿ ಭಯವಿದೆ. ಈ ಬಗ್ಗೆ ಯಾವುದೇ ಮಾಹಿತಿಗಳು ಲಭಿಸುತ್ತಿಲ್ಲ. ಅರಸಿನಮಕ್ಕಿ ಪ್ರಾಧಮಿಕ ಆರೋಗ್ಯ ಕೇಂದ್ರದಲ್ಲಿ ವೈಧ್ಯರಿಲ್ಲ. ಹೀಗೆ ಸಮಸ್ಯೆಗಳ ದೊಡ್ಡ ಪಟ್ಟಿಯನ್ನೇ ಇಂದು ಜಿಲ್ಲಾಧಿಕಾರಿಗಳ ಮುಂದೆ ಶಿಶಿಲದ ಜನರು ತೆರೆದಿಟ್ಟರು. 

ಉದ್ಘಾಟನಾ ಕಾರ್ಯಕ್ರಮದ ಬಳಿಕ ನೇರವಾಗಿ ಜನರ ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿಯವರು ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸಿದರು.
ದಯಾನಂದ, ಲೋಕಯ್ಯಗೌಡ, ಏಲಿಯಾಸ್ ಸೇರಿದಂತೆ ಹಲವರು ಅರಣ್ಯ ಇಲಾಖೆಯಿ‌ದಾಗಿ ತಮಗೆ ಹಕ್ಮು ಪತ್ರಸಿಗುತ್ತಿಲ್ಲ. ದಶಕಳಿಂದ ಕೃಷಿ ಮಾಡಿಕೊಂಡಿರುವ ಜಮೀನು ಈಗ ಡೀಮ್ಡ್ ಫಾರೆಸ್ಟ್‌ ಎಂದು ಹೇಳುತ್ತಿದ್ದಾರೆ. ಆರ್.ಟಿ.ಸಿ ಯಲ್ಲಿ ಕಂದಾಯ ಎಂದಿದೆ ಆದರೆ ಅರಣ್ಯ ಇಲಾಖೆಯವರು ಒಪ್ಲಿಗೆ ನೀಡುತ್ತಿಲ್ಲ. ಹಲವಾರು ಜನರು ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ನಮ್ಮ ಸಮಸ್ಯೆಗೆ ಪರಿಹಾರ ಒದಗಿಸಿ ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿಯವರು ಅರಣ್ಯ ಮತ್ತು ಕಂದಾಯ ಜಮೀನು ಒಂದೇ ಸರ್ವ ನಂಬರಿನಲ್ಲಿದ್ದು ಅದನ್ನು ಪ್ರತ್ಯೇಕಿಸುವ ಅಗತ್ಯವಿದೆ.  ಇದು ಒಂದೇ ದಿನದಲ್ಲಿ ಪರಿಹಾರವಾಗುವ ಕಾರ್ಯವಲ್ಲ ಇದನ್ನು ಸಾಧ್ಯವಾದಷ್ಟು ವೇಗವಾಗಿ ಪರಿಹರಿಸಿಕೊಡುವುದಾಗಿ ತಿಳಿಸಿದರು. ಅಗತ್ಯವಿರುವ ಪ್ರದೇಶಗಳಲ್ಲಿ ಜಂಟಿ ಸರ್ವೆ ನಡೆಸುವುದಾಗಿಯೂ ತಿಳಿಸಿದರು.

ಸರ್ವರ್ ಸಮಸ್ಯೆ ಯಿಂದಾಗಿ ಗ್ರಾಮೀಣ ಪ್ರದೇಶವಾದ ಶಿಶಿಲದಲ್ಲಿ ಪಡಿತರ ವಿತರಣೆ ತುಂಬಾ ಕಷ್ಟವಾಗುತ್ತಿದೆ. ಪಡಿತರ ಪಡೆಯಲು ನಾಲ್ಕೈದು ಬಾರಿ ಹೋಗಬೇಕಾಗಿ ಬರಲಿದೆ ಎಂದು ಜಿಲ್ಲಾಧಿಕಾರಿಯವರ ಗಮನ ಸೆಳೆಯಲಾಯಿತು. ಎರಡು ತಿಂಗಳಿನಲ್ಲಿ ಸರ್ವರ್ ಸಮಸ್ಯೆ ಪರಿಹಾರವಾಗಲಿದ್ದು ಸುಲಭವಾಗಿ ಪಡಿತರ ಹಂಚಲು ಸಾಧ್ಯವಾಗಲಿದೆ ಎಂದು ಸಭೆಗೆ ತಿಳಿಸಲಾಯಿತು. 

ಅರಸಿನಮಕ್ಕಿ ಪ್ರಾಧಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ ಇದರಿಂದಾಗಿ ಜನರು ದೂರದ ಆಸ್ಪತ್ರೆಗಳಿಗೆ ಹೋಗಬೇಕಾಗಿ ಬರಲಿದೆ ಎಂದು ಕೆ.ಜಿ ಗೋಖಲೆ ಪ್ರಸ್ತಾಪಿಸಿದರು. ಈ ಬಗ್ಗೆ ಉತ್ತರಿಸಿದ ತಾಲೂಕು ವೈಧ್ಯಾಧಿಕಾರಿಯವರು ಅರಸಿನಮಕ್ಕಿಯಲ್ಲಿ ವೈದ್ಯರಿದ್ದಾರೆ ಎಂದು ಹೇಳಿದ್ದು ಗೊಂದಲಗಳಿಗೆ ಕಾರಣವಾಯಿತು. ಬಳಿಕ ಸರಿಪಡಿಸಿದ ಆರೋಗ್ಯ ಇಲಾಖಾಧಿಕಾರಿ ಅವರಿಗೆ ಕೊಕ್ಕಡ ಹಾಗೂ ಧರ್ಮಸ್ಥಳದಲ್ಲಿಯೂ ನಿಯೋಜಿತರಾಗಿದ್ದಾರೆ ಎಂದು ತಿಳಿಸಿದರು. ಜನರಿಗೆ ಸಮಸ್ಯೆಯಾಗದಂತೆ ಯಾವ ದಿನ ಯಾವ ಅಸ್ಪತ್ರೆಯಲ್ಲಿರುತ್ತೀರಿ ಎಂದು ಮೊದಲೇ ತಿಳಿಸಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.

ಗ್ರಾಮದಲ್ಲಿರುವ ಡಿ.ಸಿ ಮನ್ನಾ ಭೂಮಿಯನ್ನು ಗುರುತಿಸಿ ಬಡ ಕುಟುಂಬಗಳಿಗೆ ಹಂಚುವಂತೆ ಸುಂದರ ಒತ್ತಾಯಿಸಿದರು. ಬಹುತೇಕ ಡಿಸಿ ಮನ್ನಾ ಜಮೀನುಗಳು ಅತಿಕ್ರಮಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದಾಗ, ಅತಿಕ್ರಮಣಗಳನ್ನು ಸ್ಪಷ್ಟವಾಗಿ ಪರಿಶೀಲಿಸಿ ಯಾವುದೇ ಭೂ ಮಾಲಕರುಗಳು ಡಿಸಿ ಮನ್ನಾ ಜಮೀನನ್ನು ಅತಿಕ್ರಮಿಸಿದ್ದರೆ ಕೂಡಲೇ ಅವುಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ಶಿಶಿಲ ಪ್ರದೇಶದ ಮೂತು ಗ್ರಾಮಗಳಲ್ಲಿ ನೂರಾರು ಜನರು ಹೈನುಗಾರಿಕೆಯನ್ನು ನಡೆಸುತ್ತಿದ್ದಾರೆ. ಆದರೆ ಇಲ್ಲಿ ಪಶು ವೈದ್ಯರಿಲ್ಲದ ಕಾರಣ ತುಂಬಾ ಸಮಸ್ಯೆಗಳಾಗುತ್ತಿದೆ ಎಂದು ದಿವಾಕರ ಗಮನಸೆಳೆದರು.

ಇಲಾಖೆಯಲ್ಲಿ ವೈಧ್ಯರ ಕೊರತೆಯಿರುವುದಾಗಿ ಅಧಿಕಾರಿಗಳು ತಿಳಿಸಿದರು. ಸಿಬಂದಿಗಳನ್ನು ಉಪಯೋಗಿಸಿಕೊಂಡು ಜನರ ಅಗತ್ಯಗಳಿಗೆ ಸ್ಪಂದಿಸುವಂತೆ ಜಿಲ್ಲಾಧಿಕಾರಿಯವರು ಸಲಹೆ ನೀಡಿದರು.

ಕುಶಾಲಪ್ಪ ಗೌಡ ಹಾಗೂ ಸೂರ್ಯಪ್ರಕಾಶ್ ಅವರು ಕಸ್ತೂರಿವರಂಗನ್ ವರದಿಯ ಅನುಷ್ಠಾನದಿಂದ ಆಗುವ ಪರಿಣಾಮಗಳ ಬಗ್ಗೆ ಜನರು ಭಯದಲ್ಲಿದ್ದಾರೆ. ಈ ಬಗ್ಗೆ ಸ್ಪಷ್ಟನೆ ಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ಸರಕಾರಗಳು ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಜನರು ಭಯವಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. 

ಶಿಶಿಲದ ಮಲೆಕುಡಿಯ ಕುಟುಂಬಗಳಿಗೆ ಹಕ್ಕುಪತ್ರಗಳಿಲ್ಲದ ಬಗ್ಗೆ ಬಾಲಕೃಷ್ಣ ಶಿಶಿಲ ಗಮನ ಸೆಳೆದರು. ಇದರ ಬಗ್ಗೆ ಉತ್ತರಿಸಿದ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಂದ ಮಾಹಿತಿ ಪಡೆದು ಕೆಲವು ಕಡತಗಳ ಸರ್ವೆ ಕಾರ್ಯ ನಡೆಯುತ್ತಿದೆ. ಕೆಲವರಿಗೆ ಹಕ್ಕು ಪತ್ರ ನೀಡಲಾಗಿದೆ. ಎಂಟು ಜನರ ಜಮೀನಿನ ಜಂಟಿ ಸರ್ವೆಗೆ ದಿನಂಕ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X