ಫೆ.22: ಎ.ಜೆ. 14ನೇ ಘಟಿಕೋತ್ಸವ ದಿನ
ಮಂಗಳೂರು, ಫೆ.21: ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್‌ನ 14ನೇ ಘಟಿಕೋತ್ಸವು ಫೆ.22ರಂದು ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಡಿಟೋರಿಯಂನ 5ನೇ ಮಹಡಿಯಲ್ಲಿ ನಡೆಯಲಿದೆ.
ಗೌರವಾನ್ವಿತ ಮುಖ್ಯ ಅತಿಥಿಯಾಗಿ ಮಾಹೆ ಮಂಗಳೂರು ಕ್ಯಾಂಪಸ್‌ನ ಉಪಕುಲಪತಿ ಪ್ರೊ. ಡಾ.ದಿಲೀಪ್ ಜಿ. ನಾಯಕ್ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ.ಎ.ಜೆ. ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್‌ನ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಸಮಾರಂಭದಲ್ಲಿ ಉಪಸ್ಥಿತರಿರುವರು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.
Next Story





