Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವಾತಂತ್ರ್ಯಕ್ಕಾಗಿ ಪ್ರಾಣಾರ್ಪಣೆ ಮಾಡಿದ...

ಸ್ವಾತಂತ್ರ್ಯಕ್ಕಾಗಿ ಪ್ರಾಣಾರ್ಪಣೆ ಮಾಡಿದ ಒಬ್ಬ ಆರೆಸ್ಸೆಸ್ ನಾಯಕನ ಹೆಸರೇಳಿ: ಬಿಜೆಪಿಗೆ ಸಿದ್ದರಾಮಯ್ಯ ಸವಾಲು

''ಗಾಂಧಿಯನ್ನು ಕೊಂದವರು ಇಂದು ದೇಶಪ್ರೇಮದ ಪಾಠ ಮಾಡುತ್ತಾರೆ''

ವಾರ್ತಾಭಾರತಿವಾರ್ತಾಭಾರತಿ22 Feb 2021 5:51 PM IST
share
ಸ್ವಾತಂತ್ರ್ಯಕ್ಕಾಗಿ ಪ್ರಾಣಾರ್ಪಣೆ ಮಾಡಿದ ಒಬ್ಬ ಆರೆಸ್ಸೆಸ್ ನಾಯಕನ ಹೆಸರೇಳಿ: ಬಿಜೆಪಿಗೆ ಸಿದ್ದರಾಮಯ್ಯ ಸವಾಲು

ಉಡುಪಿ, ಫೆ.22: ಜಾತಿ, ಧರ್ಮಗಳನ್ನು ಮೀರಿ ಪ್ರತಿಯೊಬ್ಬನನ್ನು ಸಮಾನವಾಗಿ ಕಾಣುವುದೇ ಜಾತ್ಯಾತೀತತೆ. ಇದು ಕುವೆಂಪುರವರ ವಿಶ್ವಮಾನವ ತತ್ವಕ್ಕೆ ಅನುಗುಣವಾಗಿರುವಂತಹುದು. ಧರ್ಮದ ಹೆಸರಿನಲ್ಲಿ ಸಮಾಜ ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ಕಾಂಗ್ರೆಸ್ ವತಿಯಿಂದ ನಡೆದ ಜನಧ್ವನಿ ಪಾದಯಾತ್ರೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಒಂದು ಕಾಲದಲ್ಲಿ ಸರ್ವಧರ್ಮ ಸಮನ್ವಯತೆಯ ತವರಾಗಿದ್ದ ದಕ್ಷಿಣ ಕನ್ನಡವನ್ನು ಬಿಜೆಪಿ ನಾಯಕರು ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದ್ದಾರೆ. ಇಲ್ಲಿನ ಜನ ಪರಸ್ಪರ ಅಪನಂಬಿಕೆಯಿಂದ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಅದಕ್ಕೆ ಆರೆಸ್ಸೆಸ್ ಮತ್ತು ಬಿಜೆಪಿಯೇ ಕಾರಣ ಎಂದು ಆರೋಪಿಸಿದ್ದಾರೆ.

ದೇಶಪ್ರೇಮದ ಪಾಠ ಮಾಡುವ ಬಿಜೆಪಿ ನಾಯಕರು ತಮ್ಮ ಇತಿಹಾಸವನ್ನೊಮ್ಮೆ ನೆನಪು ಮಾಡಿಕೊಳ್ಳಲಿ. ದೇಶದ ಸ್ವಾತಂತ್ರ್ಯಕ್ಕಾಗಿ ಸಾವಿರಾರು ಕಾಂಗ್ರೆಸ್ ನಾಯಕರು ಬಲಿದಾನಗೈದಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣಾರ್ಪಣೆ ಮಾಡಿದ ಒಬ್ಬನೇ ಒಬ್ಬ ಆರೆಸ್ಸೆಸ್ ನಾಯಕನ ಹೆಸರನ್ನು ಬಿಜೆಪಿಯವರು ಹೇಳಲಿ ನೋಡೋಣ ಎಂದು ಅವರು ಸವಾಲು ಹಾಕಿದ್ದಾರೆ.

''ಹೆಡ್ಗೇವಾರ್, ಗೊಲ್ವಾಲ್ಕರ್ ಇವರೆಲ್ಲ ಸ್ವಾತಂತ್ರ್ಯ ಚಳವಳಿಯಿಂದ ದೂರ ಉಳಿದದ್ದು ಯಾಕೆ? ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿಯವರನ್ನು ಕೊಂದವರು ಇವತ್ತು ದೇಶಪ್ರೇಮದ ಪಾಠ ಮಾಡುತ್ತಾರೆ. ಇಂಥವರ ದೇಶಪ್ರೇಮದ ಪಾಠ ಯಾರಿಗೆ ಬೇಕಿದೆ ಸ್ವಾಮಿ?''

ಬಿಜೆಪಿ ಸರ್ಕಾರ ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು 3 ಕೆ.ಜಿ ಗೆ ಇಳಿಸಿ ಬಡಜನರ ಊಟ ಕಸಿದಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸ ನನಗಿದೆ. ಆಗ ಪ್ರತೀ ವ್ಯಕ್ತಿಗೆ ಉಚಿತವಾಗಿ ತಲಾ 10 ಕೆ.ಜಿ ಅಕ್ಕಿ ನೀಡುತ್ತೇವೆ. ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ. ಮಹಾತ್ಮ ಗಾಂಧಿಯವರಂತೆ ನಾನು ರಾಮಭಕ್ತನೆ. ದೇಶಕ್ಕೆ ಬೇಕಿರುವುದು ಗಾಂಧಿಯವರ ಆದರ್ಶ ಪುರುಷ ರಾಮ. ಗಾಂಧಿಯವರನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ? ರಾಮಭಕ್ತರೆಂದರೆ ಕಾಯುವವರೋ? ಕೊಲ್ಲುವವರೋ? ಎಂದು ಅವರು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ಕೆಟ್ಟ ಆರ್ಥಿಕ ನೀತಿಗಳಿಂದಾಗಿ ಇಂದು ದೇಶದ ಉತ್ಪಾದನಾ ವಲಯ ನಿಷ್ಕ್ರಿಯಗೊಂಡಿದೆ. ದಕ್ಷಿಣ ಕನ್ನಡ ಭಾಗದಲ್ಲಿ ಬೀಡಿ ಉದ್ಯಮವನ್ನು ನಂಬಿಕೊಂಡಿದ್ದ 50,000 ಜನರ ಬದುಕು ಬೀದಿಪಾಲಾಗಿದೆ. ಇದರ ಪುನಶ್ಚೇತನಕ್ಕಾಗಿ ಬಿಜೆಪಿ ಸರ್ಕಾರ ಯಾವ ಕ್ರಮ ಕೈಗೊಂಡಿದೆ? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಜಾತಿ, ಧರ್ಮಗಳನ್ನು ಮೀರಿ ಪ್ರತಿಯೊಬ್ಬನನ್ನು ಸಮಾನವಾಗಿ ಕಾಣುವುದೇ ಜಾತ್ಯಾತೀತತೆ. ಇದು ಕುವೆಂಪುರವರ ವಿಶ್ವಮಾನವ ತತ್ವಕ್ಕೆ ಅನುಗುಣವಾಗಿರುವಂತಹುದು.
ಧರ್ಮದ ಹೆಸರಿನಲ್ಲಿ ಸಮಾಜ ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು. 1/7#ಕಾಂಗ್ರೆಸ್_ಪಾದಯಾತ್ರೆ pic.twitter.com/Ktvx5wmXGl

— Siddaramaiah (@siddaramaiah) February 22, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X