Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ22 Feb 2021 7:40 PM IST
share
ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ವಾಗ್ದಾಳಿ

ಬೆಂಗಳೂರು, ಫೆ.22: ದಿಲ್ಲಿಯಲ್ಲಿ ಗಣರಾಜ್ಯೋತ್ಸವದ ದಿನ(ಜ.26)ದಂದು ನಡೆದ ಹಿಂಸಾಚಾರದ ಹಿಂದೆ ದಲ್ಲಾಳಿಗಳನ್ನು ಬೆಂಬಲಿಸುವ ಕಾಂಗ್ರೆಸ್ ಪಕ್ಷ, ಕಮ್ಯುನಿಸ್ಟ್ ಪಕ್ಷಗಳು, ದೇಶವಿರೋಧಿ ಖಲಿಸ್ತಾನಿ ಶಕ್ತಿಗಳಿವೆ. ಇದೆಲ್ಲವೂ ತಿಳಿದಿದ್ದರೂ ರಾಜ್ಯಸಭೆಯ ವಿರೋಧ ಪಕ್ಷದ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರಚಾರಕ್ಕಾಗಿ ದಿಲ್ಲಿ ದಂಗೆ ಹಿಂದೆ ಬಿಜೆಪಿ ಒಳಸಂಚಿದೆ ಎಂದು ತಪ್ಪು ಮಾಹಿತಿ ಕೊಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಸೋಲಿಗೆ ಅವರ ಪಕ್ಷದವರೆ ಕಾರಣ ಎಂಬುದನ್ನು ಕಾಂಗ್ರೆಸ್ ಪಕ್ಷದ ಸತ್ಯಶೋಧನಾ ಸಮಿತಿ ತಿಳಿಸಿದೆ. ಕಾಂಗ್ರೆಸ್‍ನಲ್ಲಿ ನಾಯಕರೇ ಇಲ್ಲದ ದುಸ್ಥಿತಿ ಇದೆ. ಕುಟುಂಬ ರಾಜಕೀಯಕ್ಕೆ ಜೋತುಬಿದ್ದ ಆ ಪಕ್ಷವು ಅನಿವಾರ್ಯವಾಗಿ ಮಲ್ಲಿಕಾರ್ಜುನ ಖರ್ಗೆಯವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ವಿರೋಧ ಪಕ್ಷದ ಮುಖಂಡನ ಸ್ಥಾನಮಾನ ನೀಡಿದೆ. ಇದನ್ನು ಅವರು ಅರ್ಥ ಮಾಡಿಕೊಳ್ಳುವುದು ಒಳಿತು ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ದಿಲ್ಲಿಯಲ್ಲಿ ಗಣರಾಜ್ಯೋತ್ಸವದ ದಿನದಂದು ದೊಡ್ಡ ಪ್ರಮಾಣದ ಹಿಂಸಾಚಾರ ನಡೆಯುವುದನ್ನು ಕಾಂಗ್ರೆಸ್ ಪಕ್ಷ ನಿರೀಕ್ಷಿಸಿತ್ತು. ಆ ಗಲಭೆ, ಆಗುವ ಹಾನಿಗೆ ಪೊಲೀಸರು ಮತ್ತು ಪೊಲೀಸ್ ವ್ಯವಸ್ಥೆಯನ್ನು ನಿಯಂತ್ರಿಸುವ ಕೇಂದ್ರ ಸರಕಾರವೇ ಕಾರಣ ಎಂದು ದೂರುವ ಉದ್ದೇಶ ಕಾಂಗ್ರೆಸ್ ಪಕ್ಷಕ್ಕೆ ಇತ್ತು ಎಂಬುದು ಖರ್ಗೆ ಅವರ ಈ ಹೇಳಿಕೆಯಿಂದ ಸ್ಪಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಒಳಜಗಳದ ಕಾರಣಕ್ಕಾಗಿ ಎಲ್ಲೆಡೆ ಸೋಲುತ್ತಿದೆ. ಆದರೂ ಕರ್ನಾಟಕದಲ್ಲಿ ಗೆದ್ದು ಅಧಿಕಾರಕ್ಕೇರುವ ಹಗಲುಗನಸನ್ನು ಆ ಪಕ್ಷದ ನಾಯಕರು ಬಿಟ್ಟಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯವೈಖರಿಯಿಂದ ಕಾಂಗ್ರೆಸ್ ಪಕ್ಷ ನಿರಂತರವಾಗಿ ನೆಲಕಚ್ಚುತ್ತಿರುವುದನ್ನು ಗಮನಿಸಿ ಕೇವಲ ಪ್ರಚಾರದ ದೃಷ್ಟಿಯಿಂದ ಖರ್ಗೆಯವರು ಇಂಥ ಹೇಳಿಕೆ ನೀಡುವುದು ಸರಿಯಲ್ಲ ಎಂದು ನಳಿನ್ ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X