Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಸ್ತಾನ ಟೋಲ್‌ನಲ್ಲಿ ಸ್ಥಳೀಯರಿಗೆ...

ಸಾಸ್ತಾನ ಟೋಲ್‌ನಲ್ಲಿ ಸ್ಥಳೀಯರಿಗೆ ವಿನಾಯಿತಿ: ಕರಂದ್ಲಾಜೆ ಸೂಚನೆ

ನಿರ್ಧಾರ ಒಪ್ಪದ ನವಯುಗ ಕಂಪೆನಿ: ಗೊಂದಲದಲ್ಲಿ ಮುಗಿದ ಸಭೆ

ವಾರ್ತಾಭಾರತಿವಾರ್ತಾಭಾರತಿ22 Feb 2021 7:41 PM IST
share
ಸಾಸ್ತಾನ ಟೋಲ್‌ನಲ್ಲಿ ಸ್ಥಳೀಯರಿಗೆ ವಿನಾಯಿತಿ: ಕರಂದ್ಲಾಜೆ ಸೂಚನೆ

ಉಡುಪಿ, ಫೆ.22: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಸಮಸ್ಯೆ ಕುರಿತು ಚರ್ಚಿಸಲು ಇಂದು ಉಡುಪಿ ಜಿಪಂ ಸಭಾಂಗಣದಲ್ಲಿ ಕರೆಯಲಾದ ಸಭೆಯಲ್ಲಿ ಸಾಸ್ತಾನ ಟೋಲ್‌ಗೇಟ್‌ನ ಐದು ಕಿ.ಮೀ. ವ್ಯಾಪ್ತಿಯ ಸ್ಥಳೀಯರ ವಾಹನಗಳಿಗೆ ಟೋಲ್‌ನಲ್ಲಿ ವಿನಾಯಿತಿ ನೀಡಬೇಕು ಎಂದು ಸಂಸದರು, ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಆದರೆ ಇದಕ್ಕೆ ನವಯುಗ ಕಂಪೆನಿಯ ಅಧಿಕಾರಿಗಳು ಒಪ್ಪದಿದ್ದರೂ ಸರಿಯಾದ ನಿರ್ಧಾರ ತೆಗೆದುಕೊಳ್ಳದೆ ಭೆಯನ್ನು ಅಂತ್ಯಗೊಳಿಸಲಾಯಿತು.

ಸಂಸದೆ ಶೋಭಾ ಕರಂದ್ಲಾಜೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಟೋಲ್ ಗೇಟ್ ವ್ಯಾಪ್ತಿಯ ಐದು ಗ್ರಾಪಂಗಳ ಗ್ರಾಮಸ್ಥರ ವಾಹನಗಳ ದಾಖಲೆಗಳನ್ನು ಸಂಗ್ರಹಿಸಿ, ಆ ವಾಹನಗಳಿಗೆ ಟೋಲ್‌ನಲ್ಲಿ ವಿನಾಯಿತಿ ನೀಡಬೇಕು ಎಂದು ಸೂಚನೆ ನೀಡಿದರು. ಇದಕ್ಕೆ ಜಿಲ್ಲಾಡಳಿತ ಸಹಕಾರ ನೀಡಿ ವಾಹನಗಳ ದಾಖಲೆ ಸಂಗ್ರಹಿಸಿ ನೀಡಲಾಗುವುದು. ಇದರಿಂದ ನಕಲಿ ವಾಹನಗಳಿಗೆ ವಿನಾಯಿತಿ ನೀಡುವುದನ್ನು ತಪ್ಪಿಸಬಹುದೆಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಆದರೆ ಇದಕ್ಕೆ ಒಪ್ಪದ ನವಯುಗ ಕಂಪೆನಿಯ ಟೋಲ್ ಉಸ್ತುವಾರಿ ರಾಮಕೃಷ್ಣ, ಈ ರೀತಿ ಮಾಡಲು ಆಗುವುದಿಲ್ಲ. ಈಗಾಗಲೇ ಮೂರು ವರ್ಷ ಗಳ ಕಾಲ ಟೋಲ್ ವಿನಾಯಿತಿ ನೀಡಲಾಗಿದೆ. ಪ್ರತಿದಿನ ಶೇ.40ರಷ್ಟಡು ವಾಹನಗಳು ಉಚಿತವಾಗಿ ಸಂಚಾರ ಮಾಡುತ್ತಿದೆ. ಈಗಾಗಲೇ ಕಂಪೆನಿ ಸಾಕಷ್ಟು ನಷ್ಟದಲ್ಲಿದೆ. ಈ ಮಧ್ಯೆ ಇಂತಹ ನಿರ್ಧಾರ ಮಾಡುವುದು ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರದ ಈ ಹಿಂದಿನ ತೀರ್ಮಾನಕ್ಕೆ ವಿರುದ್ಧವಾಗಿದೆ. ನಮಗೆ ತುಂಬಾ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಭದ್ರತೆ ಹಿಂತೆಗೆತದ ಎಚ್ಚರಿಕೆ:ಸಭೆಯ ತೀರ್ಮಾನಕ್ಕೆ ಕಂಪೆನಿಯವರು ಒಪ್ಪದಿದ್ದರೆ ಟೋಲ್‌ಗೇಟ್‌ಗೆ ನೀಡಿರುವ ಪೊಲೀಸ್ ಭದ್ರತೆಯನ್ನು ವಾಪಾಸ್ಸು ತೆಗೆದುಕೊಳ್ಳಬೇಕಾದೀತು ಎಂದು ಸಂಸದೆ ಕರಂದ್ಲಾಜೆ ಎಚ್ಚರಿಕೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಪದಾಧಿಕಾರಿಗಳು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ, ಸಾಸ್ತಾನ ಟೋಲ್‌ಗೇಟ್‌ನಲ್ಲಿ ಸ್ಥಳೀಯರಿಗೆ ಪಾಸ್ ವ್ಯವಸ್ಥೆ ಮಾಡದೆ ವಿನಾಯಿತಿಯನ್ನು ಮುಂದುವರೆಸಬೇಕು. ಯಾವುದೇ ಕಾರಣಕ್ಕೂ ಇದನ್ನು ರದ್ದುಗೊಳಿಸಬಾರದು ಒತ್ತಾಯಿಸಿದರು.

ನಗರ ಸ್ಥಳೀಯಾಡಳಿತ ವ್ಯಾಪ್ತಿಯಲ್ಲಿ ಟೋಲ್‌ಗೇಟ್ ನಿರ್ಮಿಸಲು ಕಾನೂನಿ ನಲ್ಲಿ ಅವಕಾಶ ಇಲ್ಲ. ಆದರೂ ಇಲ್ಲಿ ನಿರ್ಮಿಸಿರುವ ಈ ಟೋಲ್ ಗೇಟ್‌ನ್ನು ಬೇರೆ ಕಡೆಗೆ ಸ್ಥಳಾಂತರಿಸಬೇಕು. ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ಯಿಂದ ಈವರೆಗೆ 650 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆದುದರಿಂದ ಈ ಕಂಪೆನಿ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಅವರು ಆಗ್ರಹಿಸಿದರು.

ಶೇ.75ರಷ್ಟು ಬಸ್ ಸಂಚಾರ ಸ್ಥಗಿತ: ಹೆಜಮಾಡಿಯ ಒಳರಸ್ತೆಯಲ್ಲಿ ನಿರ್ಮಿಸಲಾದ ಟೋಲ್‌ಗೇಟ್‌ನಲ್ಲಿ ಸರ್ವಿಸ್ ಬಸ್‌ಗಳು ದಿನಕ್ಕೆ 600- 900ರೂ. ಹಣ ಪಾವತಿಸಿ ಸಂಚರಿಸುತ್ತಿದ್ದು ಇದರಿಂದ ನಷ್ಟ ಅನುಭವಿಸುತ್ತಿರುವ ಮಾಲಕರು ಶೇ.75ರಷ್ಟು ಬಸ್ ಸಂಚಾರ ವನ್ನು ಸ್ಥಗಿತಗೊಳಿಸಿದ್ದಾರೆ. ಆದುದರಿಂದ ಖಾಸಗಿ ಸರ್ವಿಸ್ ಬಸ್‌ಗಳಿಗೆ ವಿನಾಯಿತಿ ನೀಡಬೇಕು ಎಂದು ಕೆನರಾ ಬಸ್ ಮಾಲಕರ ಸಂಘದ ಕಾರ್ಯ ದರ್ಶಿ ಸುರೇಶ್ ನಾಯಕ್ ಕುಯಿಲಾಡಿ ಒತ್ತಾಯಿಸಿದರು.

ಮಲ್ಪೆ-ಕರಾವಳಿ ಬೈಪಾಸ್‌ವರೆಗಿನ ರಾಷ್ಟ್ರೀಯ ಹೆದ್ದಾರಿಯನ್ನು 30ಮೀಟರ್ ಬದಲು 22 ಮೀಟರ್‌ನಲ್ಲಿ ಅಗಲೀಕರಣಗೊಳಿಸಲಾಗುವುದು. ಈ ಸಂಬಂಧ ಹೆಬ್ರಿ-ಹಿರಿಯಡ್ಕ ದ್ವಿಪಥ, ಹಿರಿಯಡ್ಕ-ಪರ್ಕಳ ಚತ್ಪುಥ ಸೇರಿದಂತೆ ಈ ಮೂರು ಯೋಜನೆಯನ್ನು ಒಂದೇ ಯೋಜನೆಯನ್ನಾಗಿಸಿ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಹೆದ್ದಾರಿ ಅಧಿಕಾರಿಗಳು ತಿಳಿಸಿದರು.

ಪರ್ಕಳ ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನಕ್ಕೆ ಸಂಬಂಧಿಸಿ ಭೂಮಿಯ ದರ ವನ್ನು ನಿಗದಿಪಡಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಆ ಬಳಿಕ ಸ್ಥಳೀಯರ ಸಭೆ ಕರೆದು ಒಪ್ಪಿಸುವ ಕಾರ್ಯ ಮಾಡುವ ಬಗ್ಗೆ ಸಭೆಯಲ್ಲಿತೀರ್ಮಾನ ತೆಗೆದುಕೊಳ್ಳಲಾಯಿತು.
ಸಭೆಯಲ್ಲಿ ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್.ಮೆಂಡನ್, ಜಿಪಂ ಅಧ್ಯಕ್ಷ ದಿನಕರ ಬಾಬು, ಸಿಇಓ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಉಪಸ್ಥಿತರಿದ್ದರು.

ಯೋಜನಾ ನಿರ್ದೇಶಕರಿಗೆ ತರಾಟೆ
ನವಯುಗ ಕಂಪೆನಿ ಪರವಾಗಿ ಸಭೆಯಲ್ಲಿ ವಾದ ಮಂಡಿಸುತ್ತಿದ್ದ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಯೋಜನಾ ನಿರ್ದೇಶಕ ಶಿಶು ಮೋಹನ್ ಅವರನ್ನು ಸಂಸದೆ ತೀವ್ರ ತರಾಟೆಗೆ ತೆಗೆದುಕೊಂಡರು.

ಕೇಂದ್ರ ಸರಕಾರ ಫಾಸ್ಟ್‌ಟ್ಯಾಗ್ ಕಡ್ಡಾಯ ಮಾಡಿರುವುದರಿಂದ ಸ್ಥಳೀಯರಿಗೆ ತಿಂಗಳಿಗೆ 275ರೂ. ಮೊತ್ತದ ಪಾಸ್ ಮಾಡಿದ್ದೇವೆ. ದಿನಕ್ಕೆ 10ರೂ. ಮಾತ್ರ ಆಗುತ್ತದೆ. ಇದು ಚಹಾ ಕುಡಿಯಲು ವ್ಯಯಿಸುವ ಹಣ ಎಂದು ಶಿಶು ಮೋಹನ್ ತಿಳಿಸಿದರು. ಇದಕ್ಕೆ ಸಮಿತಿಯವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X