Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾ.21ಕ್ಕೆ ನಿಗದಿಪಡಿಸಲಾಗಿದ್ದ ಅಖಿಲ...

ಮಾ.21ಕ್ಕೆ ನಿಗದಿಪಡಿಸಲಾಗಿದ್ದ ಅಖಿಲ ಭಾರತ ವಕೀಲರ ಪರೀಕ್ಷೆ ಮಾ.25ಕ್ಕೆ: ಬಿಸಿಐ ಆದೇಶ

ವಾರ್ತಾಭಾರತಿವಾರ್ತಾಭಾರತಿ22 Feb 2021 8:39 PM IST
share

ಬೆಂಗಳೂರು, ಫೆ.22: ಮಾ.21ಕ್ಕೆ ನಿಗದಿಪಡಿಸಲಾಗಿದ್ದ ಅಖಿಲ ಭಾರತ ವಕೀಲರ ಪರೀಕ್ಷೆ-16 (ಎಐಬಿಇ-ಎಕ್ಸ್‍ವಿಐ)ನ್ನು ಭಾರತೀಯ ವಕೀಲರ ಪರಿಷತ್ತು ಎ.25ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಈ ಕುರಿತು ಬಿಸಿಐ ಪ್ರಕಟಣೆ ಹೊರಡಿಸಿದ್ದು, ಅದರಂತೆ ಪರೀಕ್ಷೆ ತೆಗೆದುಕೊಳ್ಳುವ ಅವಧಿಯನ್ನು ಕೂಡ ವಿಸ್ತರಿಸಿದೆ. ಮೊದಲಿಗೆ ಪರೀಕ್ಷಾ ದಿನಾಂಕವನ್ನು ಮಾ.21ಕ್ಕೆ ನಿಗದಿಪಡಿಸಿತ್ತು. ಹೊಸ ಅಧಿಸೂಚನೆಯಂತೆ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮಾ.22ರವರೆಗೆ ವಿಸ್ತರಿಸಲಾಗಿದೆ.

ಹಾಗೆಯೇ ಆನ್‍ಲೈನ್ ಶುಲ್ಕ ಪಾವತಿಸಲು ಮಾ.26 ಕಡೆಯ ದಿನವಾಗಿದ್ದು, ಅರ್ಜಿ ಪೂರ್ಣಗೊಳಿಸಲು ಮಾ.31ರವರೆಗೆ ಕಾಲಾವಕಾಶವಿದೆ. ಇನ್ನು ಎ.10ರಿಂದ ಆನ್‍ಲೈನ್‍ನಲ್ಲಿ ಪರೀಕ್ಷೆಗೆ ಪ್ರವೇಶ ಪತ್ರಗಳು ಲಭ್ಯವಿದ್ದು, ಎ.25ರ ರವಿವಾರದಿಂದ ಪರೀಕ್ಷೆ ನಡೆಯಲಿವೆ.

2020ರಲ್ಲಿ ನಡೆಯಬೇಕಿದ್ದ ಎಐಬಿಇ ಪರೀಕ್ಷೆಗಳು ಕೊರೋನ ಸೋಂಕು ಕಾರಣಕ್ಕಾಗಿ ನಡೆದಿರಲಿಲ್ಲ. ಹೀಗಾಗಿ, 2021ರ ಜನವರಿ ಮತ್ತು ಮಾರ್ಚ್ ತಿಂಗಳಲ್ಲಿ 15 ಮತ್ತು 16ನೆ ಎಐಬಿಇ ಪರೀಕ್ಷೆಗಳನ್ನು ನಡೆಸಲು ಬಿಸಿಐ ತೀರ್ಮಾನಿಸಿತ್ತು. ಆದರಂತೆ ಜ.24ರಂದು 15ನೆ ಎಐಬಿಇ ಪರೀಕ್ಷೆ ನಡೆದಿತ್ತು. ಆದರೆ 15ನೆ ಎಐಬಿಇ ಪರೀಕ್ಷೆಯ ಫಲಿತಾಂಶ ಮಾರ್ಚ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದ್ದು, ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೂ ಪರೀಕ್ಷೆ ತೆಗೆದುಕೊಳ್ಳಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಎಐಬಿಇ-16ರ ಪರೀಕ್ಷೆಯನ್ನು ಎಪ್ರಿಲ್ 25ಕ್ಕೆ ಮುಂದೂಡಲಾಗಿದೆ.

ಎಐಬಿಇ-16ನೆ ಪರೀಕ್ಷೆಯಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿದ್ದು, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊದಲಿನಂತೆ ಪುಸ್ತಕ, ನೋಟ್ಸ್ ತೆಗೆದುಕೊಂಡು ಹೋಗುವುದನ್ನು ನಿರ್ಬಂಧಿಸಲಾಗಿದೆ. ಬದಲಿಗೆ ಬೇರ್ ಆ್ಯಕ್ಸ್ ಪುಸ್ತಕಗಳನ್ನು ತೆಗೆದುಕೊಂಡು ಹೋಗಬಹುದಾಗಿದೆ ಎಂದು ಬಿಸಿಐ ಸ್ಪಷ್ಟಪಡಿಸಿದೆ.

ಕಳೆದ ಜ.24ರಂದು ದೇಶದ 45 ನಗರಗಳ 150ಕ್ಕೂ ಅಧಿಕ ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದ ಎಐಬಿಇ ಪರೀಕ್ಷೆಗೆ 1.20 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ಕಾನೂನು ಪದವಿ ಪೂರೈಸಿ ಪರಿಷತ್ತುಗಳಲ್ಲಿ ವಕೀಲರಾಗಿ ನೋಂದಾಯಿಸಿಕೊಂಡ ವಕೀಲರು ವಕಾಲತ್ತು ಹಾಕಲು ಪರೀಕ್ಷೆ ಪಾಸು ಮಾಡುವುದು ಕಡ್ಡಾಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X