Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಸತಿ ಸಮುಚ್ಛಯ ಸೇರಿ ದೊಡ್ಡ ಕಟ್ಟಡಗಳಲ್ಲಿ...

ವಸತಿ ಸಮುಚ್ಛಯ ಸೇರಿ ದೊಡ್ಡ ಕಟ್ಟಡಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಡ್ಡಾಯ: ಡಿಸಿಎಂ

ವಾರ್ತಾಭಾರತಿವಾರ್ತಾಭಾರತಿ22 Feb 2021 8:45 PM IST
share
ವಸತಿ ಸಮುಚ್ಛಯ ಸೇರಿ ದೊಡ್ಡ ಕಟ್ಟಡಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಡ್ಡಾಯ: ಡಿಸಿಎಂ

ಬೆಂಗಳೂರು, ಫೆ.22: ವಸತಿ ಸಮುಚ್ಛಯಗಳು ಸೇರಿದಂತೆ ದೊಡ್ಡ ದೊಡ್ಡ ಕಟ್ಟಡಗಳು ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಅದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಸೋಮವಾರ ನಗರದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯ ಬಗ್ಗೆ ಹಾರ್ವರ್ಡ್ ಇಂಡಿಯಾ ಕಾನ್ಫರೆನ್ಸ್ ವತಿಯಿಂದ ಏರ್ಪಡಿಸಲಾಗಿದ್ದ ‘ಭವಿಷ್ಯದತ್ತ ಸುಸ್ಥಿರ ಸಾರಿಗೆ’ ವರ್ಚುಯಲ್ ಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಲೆಕ್ಟ್ರಿಕ್ ವಾಹನಗಳನ್ನು ಒದಗಿಸಿದರಷ್ಟೇ ಸಾಲದು. ಎಲ್ಲೆಡೆಯೂ ಸುಲಭವಾಗಿ ಚಾರ್ಜ್ ಮಾಡಿಕೊಳ್ಳುವಂಥ ವ್ಯವಸ್ಥೆ ಇರಲೇಬೇಕು ಎಂದರು.

ಮುಂದಿನ ದಿನಗಳಲ್ಲಿ ಬ್ಯಾಟರಿ ವಾಹನಗಳು ಮಾರುಕಟ್ಟೆಗೆ ಬರಲಿವೆ. ಗ್ರಾಹಕರು ಬ್ಯಾಟರಿಗಳನ್ನು ಬಾಡಿಗೆಗೆ ಪಡೆದು ಆ ವಾಹನಗಳನ್ನು ಚಲಾಯಿಸಿಕೊಂಡು ಹೋಗಬಹುದು. ಎಲ್ಲೆಡೆ ಪೆಟ್ರೋಲ್ ಬಂಕ್‍ಗಳಂತೆ ಬ್ಯಾಟರಿ ಬಂಕ್‍ಗಳೂ ತಲೆ ಎತ್ತಲಿವೆ. ಆಗ ಗ್ರಾಹಕನಿಗೆ ಕಡಿಮೆ ದರದಲ್ಲಿ ವಾಹನವೂ ದೊರೆಯಲಿದೆ. ತನ್ನ ಅನುಕೂಲಕ್ಕೆ ತಕ್ಕಂತೆ ಗ್ರಾಹಕನು ಬ್ಯಾಟರಿಯನ್ನು ಬಳಕೆ ಮಾಡಿಕೊಳ್ಳಬಹುದು ಎಂದು ಅವರು ನುಡಿದರು.

ಸಬ್ಸಿಡಿ ನೀಡಲಾಗಿದೆ: ವಾಹನ ಮಾಲಿನ್ಯವನ್ನು ಸಂಪೂರ್ಣ ತೊಡೆದುಹಾಕಲು ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಲೇಬೇಕು. ಅದಕ್ಕೆ ಬೇಕಾದ ಸಬ್ಸಿಡಿ, ರಿಯಾಯಿತಿ ವಿದ್ಯುತ್ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ದೇಶದಲ್ಲೆ ಮೊತ್ತ ಮೊದಲಿಗೆ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅನುಷ್ಠಾನಕ್ಕೆ ತಂದಿರುವ ಕರ್ನಾಟಕವು ಹೊಗೆರಹಿತ ವಾಹನಗಳ ಬಳಕೆಗೆ ಹೆಚ್ಚು ಒತ್ತು ನೀಡುತ್ತಿದೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಎಲೆಕ್ಟ್ರಿಕ್ ವಾಹನಗಳಿಗೆ ವಾಣಿಜ್ಯ ಬಳಕೆ ವಿದ್ಯುತ್‍ಗಿಂತ ಅಗ್ಗದ ದರದಲ್ಲಿ ವಿದ್ಯುತ್ ನೀಡಲಾಗುತ್ತಿದೆ. ಮುಂದೆಯೂ ಈ ಸೌಲಭ್ಯ ಇರುತ್ತದೆ. ರಾಜ್ಯದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಗಣನೀಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಸ್ತೆ, ವಿದ್ಯುತ್, ನೀರು ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ವ್ಯಾಪಕ ಸುಧಾರಣೆಗಳನ್ನು ತರಲಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಎಲೆಕ್ಟ್ರಿಕ್ ವಾಹನ ತಯಾರಿಕೆ ಹಾಗೂ ಅದಕ್ಕೆ ಪೂರಕವಾದ ಕೈಗಾರಿಕೆಗಳ ಸ್ಥಾಪನೆಗೆ ಸರಕಾರ ಹೆಚ್ಚು ಬೆಂಬಲ ನೀಡುತ್ತಿದೆ. ಈಗಾಗಲೇ ರಾಜ್ಯದಲ್ಲಿ ಈ ಕ್ಷೇತ್ರಕ್ಕೆ ಸಂಬಂಧಿಸಿ ಕೈಗಾರಿಕೆಗಳು ಸ್ಥಾಪನೆಯಾಗುತ್ತಿವೆ ಎಂದ ಅವರು, ಜಾಗತಿಕ ತಾಪಮಾನ ನಿಯಂತ್ರಣಕ್ಕೆ ಕರ್ನಾಟಕವು ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದರು.

ಗೋಷ್ಠಿಯಲ್ಲಿ ಸಿಡಿಪಿಕ್ಯೂ ಗ್ಲೋಬಲ್ ಸಂಸ್ಥೆಯ ಕಾರ್ಯಕಾರಿ ಉಪಾಧ್ಯಕ್ಷೆ ಅನಿತಾ ಜಾರ್ಜ್, ಉದ್ಯಮಿ ವಿಘ್ನೇಶ್ ನಂದಕುಮಾರ್ ಹಾಗೂ ಬಿನಾಯ್ ಟೆಕ್ನಾಲಜೀಸ್ ಸಂಸ್ಥೆಯ ಸಹ ಸಂಸ್ಥಾಪಕ ವಿಭು ಬಿನಾಯ್ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X