Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೇಕರಿ ಉತ್ಪನ್ನಗಳ ಉದ್ದಿಮೆ ಸ್ಥಾಪಿಸಲು...

ಬೇಕರಿ ಉತ್ಪನ್ನಗಳ ಉದ್ದಿಮೆ ಸ್ಥಾಪಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ22 Feb 2021 11:53 PM IST
share

ಬೆಂಗಳೂರು, ಫೆ. 22: ಬೇಕರಿ ಉತ್ಪನ್ನಗಳಿಗೆ ಸಂಬಂಧಿಸಿದಂತೆ ಘಟಕಗಳು, ಬ್ರ್ಯಾಂಡಿಂಗ್, ಲೇಬಲಿಂಗ್, ಮಾರುಕಟ್ಟೆ ಬೆಂಬಲ ಮತ್ತು ರಫ್ತಿಗೆ ಪ್ರೋತ್ಸಾಹ ನೀಡಲು ಆಸಕ್ತ ಸಂಸ್ಥೆ ಹಾಗೂ ಉದ್ದಿಮೆದಾರರಿಗೆ ಸಹಾಯ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆತ್ಮ ನಿರ್ಭರ ಭಾರತ ಅಭಿಯಾನದ ಅಂಗವಾಗಿ ಕೇಂದ್ರ ಸರಕಾರ ಪ್ರಧಾನ ಮಂತ್ರಿಗಳ ಅತೀ ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆ ಅಡಿಯಲ್ಲಿ ಹೊಸದಾಗಿ ಉದ್ದಿಮೆ ಸ್ಥಾಪಿಸಲು ಹಾಗೂ ಹಾಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಕರಣಾ ಘಟಕಗಳನ್ನು ಉನ್ನತೀಕರಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಯೋಜನೆ 2020-21ರಿಂದ ಪ್ರಾರಂಭವಾಗಿ 2024-25ರವರೆಗೆ ಅನುಷ್ಠಾನಗೊಳಿಸಲಾಗಿದೆ. ಅಗತ್ಯ ತಾಂತ್ರಿಕ ಹಾಗೂ ಸಂಶೋಧನಾ ಬೆಂಬಲವನ್ನು ಕೇಂದ್ರಿಯ ಆಹಾರ ಸಂಸ್ಕರಣಾ ತಂತ್ರಜ್ಞಾನ ಸಂಶೋಧನಾ ಸಂಸ್ಥೆ, ಮೈಸೂರು ಮತ್ತು ಭಾರತೀಯ ಆಹಾರ ಸಂಸ್ಕರಣಾ ತಂತ್ರಜ್ಞಾನ ಸಂಸ್ಥೆಗಳಿಂದ ಫಲಾನುಭವಿಗಳಿಗೆ ನೆರವು ನೀಡಲಾಗುವುದು.

ಆಸಕ್ತರು ಬೆಂಗಳೂರು ನಗರ ಮತ್ತು ನಗರ ಜಿಲ್ಲೆ ನಿವಾಸಿಗಳಾಗಿದ್ದು, ಉದ್ಯಮದ ಮಾಲಕತ್ವ ಹೊಂದಿರಬೇಕು. ಅರ್ಜಿದಾರರು ಕನಿಷ್ಠ 18 ವರ್ಷ ಪೂರೈಸಿ, 8ನೆ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಸಂಸ್ಥೆ ಅಸಂಘಟಿತವಾಗಿದ್ದು, 10ಕ್ಕಿಂತ ಕಡಿಮೆ ಉದ್ಯೋಗಿಗಳನ್ನು ಹೊಂದಿರಬೇಕು. ಯೋಜನಾ ವೆಚ್ಚ ಹಾಲಿ ವೆಚ್ಚಕ್ಕಿಂತ ಕಡಿಮೆ ಇರಬಾರದು. ಉತ್ಪನ್ನ ನಿರ್ವಹಣೆಯಲ್ಲಿ ಕನಿಷ್ಟ 3ವರ್ಷಗಳ ಜ್ಞಾನ ಮತ್ತು ಅನುಭವ ಹೊಂದಿರಬೇಕು.

ಆಸಕ್ತ ಅರ್ಜಿದಾರರು ತಮ್ಮ ಘಟಕಗಳ ಕುರಿತು ಯೋಜನಾ ವರದಿ ತಯಾರಿಸಿ, ವರದಿ ಅನುಮೋದನೆ ನಂತರ ಕೇಂದ್ರ ಸರಕಾರದ ಪೋರ್ಟಲ್ PMFME (http://pmfme.mofpi.gov.in) (http://pmfme.mofpi.gov.in/mis)ನಲ್ಲಿ ನೋಂದಾಯಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಗೌತಮ್‍ ಮೊ.ಸಂ. 94487 52379, ಅಭಿಷೇಕ್-ಮೊ.ಸಂ.74119 18648, ಮಥುರಾ ಎಸ್.ಪೈ, ಮೊ.ಸಂ. 8277929923 ಅಥವಾ ಸಹಾಯಕ ಕೃಷಿ ನಿರ್ದೇಶಕರು ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೃಷಿ ಸಂಕೀರ್ಣ, ಬನಶಂಕರಿ, ಬೆಂಗಳೂರು ಇಲ್ಲಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ಕೋರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X