Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಫೋಟಕ ಸಾಮಗ್ರಿಗಳ ಬಳಕೆಗೆ ಅನುಮತಿ...

ಸ್ಫೋಟಕ ಸಾಮಗ್ರಿಗಳ ಬಳಕೆಗೆ ಅನುಮತಿ ಕಡ್ಡಾಯ ಕಾನೂನು ಜಾರಿ: ಸಚಿವ ಮುರುಗೇಶ್ ನಿರಾಣಿ

''ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ತರಬೇತಿ ಅಗತ್ಯ''

ವಾರ್ತಾಭಾರತಿವಾರ್ತಾಭಾರತಿ23 Feb 2021 11:56 AM IST
share
ಸ್ಫೋಟಕ ಸಾಮಗ್ರಿಗಳ ಬಳಕೆಗೆ ಅನುಮತಿ ಕಡ್ಡಾಯ ಕಾನೂನು ಜಾರಿ: ಸಚಿವ ಮುರುಗೇಶ್ ನಿರಾಣಿ

ಹೊಸದಿಲ್ಲಿ, ಫೆ.23: ಇನ್ನು ಮುಂದೆ ಕಲ್ಲುಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಸ್ಫೋಟಕ ವಸ್ತುಗಳನ್ನು ಬಳಸಲು ಸರಕಾರದಿಂದ ಅನುಮತಿ ಪಡೆದವರು ಮಾತ್ರ ಬಳಕೆ ಮಾಡಲು ಹೊಸ ಕಾನೂನು ಜಾರಿ ಮಾಡುತ್ತೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಮಂಗಳವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕಾನೂನು ಬಾಹಿರವಾಗಿ ಕಲ್ಲು ಕ್ವಾರಿ ಮತ್ತು ಗಣಿ ಪ್ರದೇಶಗಳಲ್ಲಿ ಸ್ಫೋಟಕ ವಸ್ತುಗಳನ್ನು ಬಳಕೆ ಮಾಡುತ್ತಿರುವುದರಿಂದಲೇ ಇಂಥ ಘಟನೆಗಳು ನಡೆಯುತ್ತವೆ. ಇದನ್ನು ತಡೆಯಲು ಸದ್ಯದಲ್ಲೆ ಹೊಸ ಕಾನೂನು ಜಾರಿ ಮಾಡಲಾಗುವುದು ಎಂದರು.

ಸರಕಾರದಿಂದ ಲೈಸೆನ್ಸ್ ಪಡೆದವರು ಮಾತ್ರ ಸ್ಫೋಟಕ ವಸ್ತುಗಳನ್ನು ಬಳಸುವ ಕಾನೂನು  ಜಾರಿ ಮಾಡಲಾಗುವುದು. ಕೆಲವು ಕಡೆ ಕಾನೂನು ಬಾಹಿರವಾಗಿ ಕಲ್ಲುಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ಇದನ್ನು ತಡೆಗಟ್ಟಲು ಇಲಾಖಾ ಮಟ್ಟದಲ್ಲಿ ಹಲವಾರು ಬಿಗಿಯಾದ ಕ್ರಮಗಳನ್ನು ಕೈಗೊಂಡಿದ್ದೇವೆ. ಒಂದು ವೇಳೆ ನಮ್ಮ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ ಎಂದು ಅವರು ಎಚ್ಚರಿಸಿದರು.

ಈ ಘಟನೆಗಳು ನುರಿತ ಕೆಲಸಗಾರರಿಗೆ ತರಬೇತಿ ಮತ್ತು ಗಣಿಗಾರಿಕೆ ಶಾಲೆಯ ಸ್ಥಾಪನೆಯ ಮಹತ್ವವನ್ನು ನಮಗೆ ನೆನಪಿಸುತ್ತವೆ. ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ಗಣಿಗಾರಿಕೆ ಸ್ಥಳಗಳಲ್ಲಿ ಜಿಲಿಟಿನ್ ಕಡ್ಡಿಗಳು ಸ್ಫೋಟಕಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ ಎಂದು ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಗಣಿಗಾರಿಕೆ ಶಾಲೆಯನ್ನು ಸ್ಥಾಪಿಸಲು ತೀರ್ಮಾನಿಸಿದ್ದೇವೆ. ಜೊತೆಗೆ ಗಣಿಗಾರಿಕೆ ಪ್ರದೇಶಗಳಲ್ಲಿನ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ. ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ಮತ್ತು ಅಕ್ರಮಗಳಲ್ಲಿ ಭಾಗಿಯಾಗಿರುವ ಯಾರಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಘಟನೆಯಲ್ಲಿ ಯಾರೇ ಪ್ರಭಾವಿಗಳಾಗಿದ್ದರೂ ಎಷ್ಟೇ ದೊಡ್ಡವರಾಗಿದ್ದರೂ ಸುಮ್ಮನೆ ಬಿಡುವುದಿಲ್ಲ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನೇ ಸರಕಾರ ತೆಗೆದುಕೊಳ್ಳಲಿದೆ. ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ. ನಾವು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಪುನಃ ಮರುಕಳಿಸುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಈಗಾಗಲೇ ಸಚಿವರಾದ ಬಸವರಾಜ ಬೊಮ್ಮಾಯಿ, ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ನಮ್ಮ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದು ವಸ್ತುಸ್ಥಿತಿ ಪರಿಶೀಲಿಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಶಿವಮೊಗ್ಗ ಸ್ಫೋಟಕ್ಕೆ ಮುಂಚಿತವಾಗಿ ಸ್ಫೋಟಕಗಳನ್ನು ಸಂಗ್ರಹಿಸಲಾಗಿದೆ ಎಂದು ನಾನು ಅಧಿಕಾರಿಗಳಿಂದ ತಿಳಿದುಕೊಂಡಿದ್ದೇನೆ. ಕೆಲವು ವೈಯಕ್ತಿಕ ಕೆಲಸಗಳಿಂದಾಗಿ ನಾನು ದಿಲ್ಲಿಯಲ್ಲಿದ್ದೇನೆ. ಇಲ್ಲಿಂದ ಬೆಂಗಳೂರಿಗೆ ಹೋದ ಬಳಿಕ ನೇರವಾಗಿ ಚಿಕ್ಕಬಳ್ಳಾಪುರಕ್ಕೆ ಹೋಗುತ್ತೇನೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಮಾಹಿತಿ ನೀಡಲಾಗಿದೆ. ಗಾಯಾಳುಗಳಿಗೆ ಸರಕಾರದ ವತಿಯಿಂದ ಸೂಕ್ತವಾದ ಚಿಕಿತ್ಸೆ ನೀಡಲಾಗುವುದು ಎಂದು ಆಶ್ವಾಸನೆ ನೀಡಿದ ಅವರು, ಘಟನೆ ನಡೆದ ನಂತರ ಕೆಲವರು ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಪೊಲೀಸರು ತಕ್ಷಣವೇ ಅವರನ್ನು ಬಂಧಿಸುವ ವಿಶ್ವಾಸವಿದೆ. ಘಟನೆಗೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X