Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಯುಷ್ಮಾನ್ ಕಾರ್ಡ್ ಗೊಂದಲ ಪರಿಹರಿಸಿ:...

ಆಯುಷ್ಮಾನ್ ಕಾರ್ಡ್ ಗೊಂದಲ ಪರಿಹರಿಸಿ: ದಿನಕರ ಬಾಬು

ಉಡುಪಿ ಜಿಪಂ ಕೆಡಿಪಿ ಸಭೆ

ವಾರ್ತಾಭಾರತಿವಾರ್ತಾಭಾರತಿ23 Feb 2021 7:01 PM IST
share
ಆಯುಷ್ಮಾನ್ ಕಾರ್ಡ್ ಗೊಂದಲ ಪರಿಹರಿಸಿ: ದಿನಕರ ಬಾಬು

ಉಡುಪಿ, ಫೆ.23: ಆಯುಷ್ಮಾನ್ ಕಾರ್ಡ್‌ನಿಂದ ನೆರವು ಪಡೆಯಲು ಇರುವ ಅರ್ಹತೆಯ ಕುರಿತಂತೆ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಹಲವು ಗೊಂದಲಗಳಿವೆ. ಯೋಜನೆಯ ಅರ್ಹತೆಗಳ ಕುರಿತು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳ ವೈದ್ಯರುಗಳಿಗೆ ತರಬೇತಿ ಆಯೋಜಿಸಿ, ಸಾರ್ವಜನಿಕರಿಗೆ ಸೂಕ್ತ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಸೂಚಿಸಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಉಡುಪಿ ಜಿಪಂನ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಆಯುಷ್ಮಾನ್ ಕಾರ್ಡ್ ಹೊಂದಿರುವ ರೋಗಿ ಯಾವ ಸಂದರ್ಭದಲ್ಲಿ ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಬಹುದು. ಯಾವ ಚಿಕಿತ್ಸೆಗೆ ಶಿಫಾರಸ್ಸು ಪತ್ರ ತರಬೇಕು, ವೈದ್ಯರು ಯೋಜನೆಯ ಯಾವ ಕಾಯಿಲೆಗಳಿಗೆ ರೆಫರಲ್ ಪತ್ರ ನೀಡಬೇಕು, ತುರ್ತು ಸಂದರ್ಭದಲ್ಲಿ ಎಲ್ಲಿ ದಾಖಲಾಗಬೇಕು ಎಂಬ ಬಗ್ಗೆ ರೋಗಿ ಹಾಗೂ ವೈದ್ಯರಿಗೂ ಸಹ ಹಲವು ಗೊಂದಲಗಳಿದ್ದು, ಇದನ್ನು ಬಗೆಹರಿಸಲು ಜಿಲ್ಲೆಯ ಸರಕಾರಿ ವೈದ್ಯರುಗಳಿಗೆ ಶೀಘ್ರದಲ್ಲಿ ತರಬೇತಿ ಆಯೋಜಿಸಿ ಎಂದು ದಿನಕರ ಬಾಬು ತಿಳಿಸಿದರು.

ಜಿಲ್ಲೆಯ ಎಲ್ಲಾ ಅಂಬುಲೆನ್ಸ್ ಚಾಲಕರಿಗೂ ಸಹ ತರಬೇತಿ ಆಯೋಜಿಸಿ. ಯೋಜನೆಯ ಸಮಗ್ರ ಮಾಹಿತಿಯನ್ನು ನೀಡುವಂತೆ ಜಿಪಂ ಸಿಇಓ ಡಾ. ನವೀನ್ ಭಟ್ ತಿಳಿಸಿದರು

ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಇದುವರೆಗೆ ಶೇ.137 ರಷ್ಟು ಸಾಧನೆ ಅಗಿದೆ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿರುವ ಕೆರೆ ಮತ್ತು ತೋಡುಗಳ ಹೂಳೆತ್ತುವ ಕಾಮಗಾರಿಗಳನ್ನು ಆದ್ಯತೆಯಲ್ಲಿ ತೆಗೆದುಕೊಳ್ಳುವಂತೆ ತಿಳಿಸಿದ ಅಧ್ಯಕ್ಷರು, ಹೂಳೆತ್ತಿದ ನಂತರ ಮಣ್ಣಿನಿಂದ ಜೆಡ್ಡುಗಳನ್ನು ನಿರ್ಮಿಸಿ. ಜಿಲ್ಲೆಯಲ್ಲಿ ಸಮುದಾಯ ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಿ, ಉದ್ಯೋಗ ಖಾತರಿ ಯೋಜನೆಯಿಂದ ಬಾವಿ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಿ ಎಂದರು.

ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ಒಣ ತ್ಯಾಜ್ಯ ಸಂಗ್ರಹ ಕಾರ್ಯ ನಡೆಯುತ್ತಿದ್ದು, ಕಾರ್ಕಳದಲ್ಲಿ ಎಂಆರ್‌ಎಫ್ ಕಾಮಗಾರಿ ಪ್ರಗತಿಯಲ್ಲಿದೆ. ಮಾರ್ಚ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹೇಳಿದರು. ಜಿಲ್ಲೆಯಲ್ಲಿ 6ನೇ ತರಗತಿಯಿಂದ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ತೆರೆದಿದ್ದು, ಇದುವರೆಗೂ ಯಾವುದೇ ಮಕ್ಕಳಲ್ಲಿ ಕೋವಿಡ್ ಕಂಡುಬಂದಿಲ್ಲ. ಎಸ್‌ಓಪಿ ಪ್ರಕಾರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಹಾಜರಾತಿ ಪ್ರಮಾಣದಲ್ಲಿ ಜಿಲ್ಲೆಯು ರಾಜ್ಯದಲ್ಲಿ 3ನೇ ಸ್ಥಾನದಲ್ಲಿದೆ ಎಂದು ಡಿಡಿಪಿಐ ಮಾಹಿತಿ ನೀಡಿದರು.

ಖಾಸಗಿ ಶಾಲೆಗಳಲ್ಲಿ ತರಗತಿಗೆ ಹಾಜರಾಗದೇ, ಆನ್‌ಲೈನ್ ತರಗತಿಯಲ್ಲಿ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳಿ ಎಂದು ಸುಮಿತ್ ಶೆಟ್ಟಿ ಹೇಳಿದರು.ಇದೇ ಸಂದರ್ಭದಲ್ಲಿ ಮ್ಯಾನುವೆಲ್ ಸ್ಕಾವೆಂಜರ್ಸ್‌ ನಿಷೇಧ ಕುರಿತ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು

ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ. ಪುತ್ರನ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ, ಶಿಕ್ಷಣಾ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X