Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: 17ನೆ ಕನ್ನಡ ಸಾಹಿತ್ಯ...

ಬೆಳ್ತಂಗಡಿ: 17ನೆ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ23 Feb 2021 10:25 PM IST
share
ಬೆಳ್ತಂಗಡಿ: 17ನೆ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

ಬೆಳ್ತಂಗಡಿ: ಯಕ್ಷಗಾನವ ಕನ್ನಡ ಭಾಷೆಯ ಬೆಳವಣಿಗೆಗೆ ನೀಡಿರುವ ಕೊಡುಗೆ ಅತ್ಯಂತ ಮಹತ್ವದ್ದಾಗಿದೆ. ಯಕ್ಷಗಾನವನ್ನು ರಾಜ್ಯದ ಕಲೆಯೆಂದು ಘೋಷಿಸಿ ಅದನ್ನು ಪೋಷಣೆ ಮಾಡುವ ಅಗತ್ಯವಿದೆ ಎಂದು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು.

ಅವರು ಮಂಗಳವಾರ ಪೆರಿಂಜೆ ಪಡ್ಯಾರಬೆಟ್ಟು ಸಂತೃಪ್ತಿ ಸಭಾಭವನದಲ್ಲಿ ನಡೆದ 17 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಯಕ್ಷಗಾನ ಕೇವಲ ಕರಾವಳಿಯ ಕಲೆಯಲ್ಲ ಅದು ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಿಸಿಕೊಂಡಿರುವ ಕಲೆಯಾಗಿದೆ. ಕೇರಳದಲ್ಲಿ ಕಥಕಳಿಯನ್ನು ಹೇಗೆ ರಾಜ್ಯದ ಕಲಾಪ್ರಕಾರವೆಂದು ಘೋಷಿಸಲಾಗಿದೆಯೋ ಅದೇರೀತಿಯಾಗಿ ಕರ್ನಾಟಕದಲ್ಲಿ ಯಕ್ಷ ಗಾನವನ್ನೂ ರಾಜ್ಯದ ಕಲೆಯೆಂದು ಘೋಷಿಸಬೇಕು ಎಂದು ಅವರು ಆಗ್ರಹಿಸಿದರು.

ಕನ್ನಡ ಮಾಧ್ಯಮ ಶಾಲೆಗಳು ಉಳಿದರೆ ಮಾತ್ರ ಕನ್ನಡ ಹಾಗೂ ಅದನ್ನು ನಂಬಿಕೊಂಡಿರುವ ಸಂಸ್ಕøತಿ, ಜಾನಪದ ಕಲಾಪ್ರಕಾರಗಳು ಉಳಿಯಲು ಸಾಧ್ಯ, ಆಂಗ್ಲಮಾಧ್ಯಮ ಹಾಗೂ ಇತರೆ ಶಾಲೆಗಳಿಗೆ ಸರಿಸಮಾನವಾದ ರೀತಿಯಲ್ಲಿ ಸರಕಾರ ಕನ್ನಡಶಾಲೆಗಳನ್ನು ಸಶಕ್ತ ಗೊಳಿಸುವ ಕಾರ್ಯ ಮಾಡಬೇಕಾಗಿದೆ. ಸರಕಾರದ ಬಳಿ ಎಲ್ಲ ಅಭಿವೃದ್ದಿಕಾರ್ಯಗಳನ್ನೂ ಮಾಡಲು ಹಣವಿದೆ ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಮಾತ್ರ ಹಣವಿಲ್ಲವೆಂಬುದು ನಾಚಿಕೆಗೇಡಿನ ವಿಚಾರವಾಗಿದೆ ಎಂದರು.

ನಮ್ಮ ಮಾತೃಬಾಷೆ ಯಾವುದೇ ಆಗಿರಲಿ ಕನ್ನಡ ನಾಡಿನಲ್ಲಿ ಹುಟ್ಟಿರುವ ಪ್ರತಿಯೊಬ್ಬರಿಗೂ ಕನ್ನಡಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯಿದೆ. ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಇತರ ಸಂಘ ಸಂಸ್ಥೆಗಳಿಂದ ಕನ್ನಡದ ಪರವಾಗಿ ಸಾಕಷ್ಟು ಕೆಲಸಗಳಾಗುತ್ತಿದೆ. ಎರಡು ಸಾವಿರ ವರ್ಷಗಳಿಂದ ನಿರಂತರವಾಗಿ ಬೆಳೆದು ಬಂದಿರುವಕನ್ನಡ ಭಾಷೆಯನ್ನು ಮುಂದುವರಿಸುವ ಜವಾಬ್ದಾರಿ ನಮ್ಮದಾಗಿದೆ. ಭಾಷೆ ಎಂದಿಗೂ  ನಿಂತ ನೀರಾಗಬಾರದು ಅದು ಸದಾ ಬದಲಾವಣೆಗಳಿಗೆ ಸ್ಪಂದಿಸುತ್ತಿರಬೇಕು ಆಗ ಮಾತ್ರ ಭಾಷೆ ಬೆಳೆಯಲು ಸಾಧ್ಯವಿದೆ ಎಂದರು. 

ಸಮ್ಮೇಳನಾಧ್ಯಕ್ಷ ಎಂ ರಾಮನಾಧ ಭಟ್ ಅವರ ಅನುಪಸ್ಥಿತಿಯಲ್ಲಿ ಅವರ ಭಾಷಣವನ್ನು ಧ್ವನಿ ಸುರಿಳಯ ಮೂಲಕ ಬಿತ್ತರಿಸಲಾಯಿತು. ಸರಕಾರ ನೂತನವಾಗಿ ಸರಕಾರಿ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಆರಂಭಿಸುತ್ತಿರುವುದನ್ನು ತರಾಟೆಗೆ ತೆಗೆದುಕೊಂಡರು. ಇಂಗ್ಲಿಷ್ ಮಮ್ಮಿಯ ಗುಡಿಯಲ್ಲಿ ಕನ್ನಡದ ಕಂದಮ್ಮಗಳನ್ನು ಬಲಿಕೊಡಲು ಸರಕಾರ ಸರಕಾರೀ ಪಬ್ಲಿಕ್ ಶಾಲೆಗಳೆಂಬ ಬಲಿಪೀಠಗಳನ್ನು ಸಿದ್ದಗೊಳಿಸಿದೆ. ಸರಕಾರಗಳನ್ನು ಈಗಾಗಲೆ ಇದನ್ನು ಕಾರ್ಯರೂಪಕ್ಕೆ ತಂದಿರುವುದನ್ನು ನೋಡಿದರೆ ಇದರ ವಿರುದ್ದದ ಮಾತುಗಳು ಬರೇ ಅರಣ್ಯ ರೋಧನವಾಗಲಿದೆ ಎಂದ ಅವರು ಹೊಸದಾಗಿ ಪ್ರಕಟವಾಗಿರುವ ಶಿಕ್ಷಣ ನೀತಿಯಲ್ಲಿ ಇದಕ್ಕೇನಾದರೂ ಪರಿಹಾರವಿದೆಯೇ ಎಂದು ಕಾಯೋಣ ಎಂದರು.

ಚಾರುಮುಡು ಸ್ಮರಣ ಸಂಚಿಕೆಯ ಬಿಡುಗಡೆಯನ್ನು ನೆರವೇರಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕು ಪಂಚಾಯತು ಅಧ್ಯಕ್ಷೆ ದಿವ್ಯಜ್ಯೋತಿ ಮಾತನಾಡಿ ಸಾಹಿತ್ಯ ಸಮ್ಮೇಳನಗಳು ಕನ್ನಡ ಭಾಷೆ ಸಂಸ್ಕೃತಿಯ ಉಳಿವಿಗೆ ನೆರವಾಗುವುದಾಗಿದೆ. ಸಮ್ಮೇಳನಗಳ ಮೂಲಕವಾಗಿ ನಾವು ಹೊಸ ವಿಚರಗಳನ್ನು ಸಾಹಿತ್ಯವನ್ನು ತಿಳಿದುಕೊಳ್ಳಲು ಸಾಧ್ಯವಿದೆ ಎಂದರು.

ಜಿಲ್ಲಾ ಸಾಹಿತ್ಯಪರಿಷತ್ತಿನ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಸಮ್ಮೇಳನದ ಆಶಯಗಳನ್ನತಿಳಿಸಿದರು. ಬೆಳ್ತಂಗಡಿ ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಬಿ ಯಶೋವರ್ಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಂಚಾಯತು ಸದಸ್ಯ ಹಾಗೂ ಸಮ್ಮೇಳನ ಸಂಯೋಜನ ಸಮಿತಿಯ ಕಾರ್ಯಾಧ್ಯಕ್ಷ ಪಿ ಧರಣೇಂದ್ರ ಕುಮಾರ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಮ್ಮೇಳನ ಸಮಿತಿಯ ಗೌರವ ಅಧ್ಯಕ್ಷರಾದ ಎ ಜೀವಂಧರ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ತಾಲೂಕು ಪಂಚಾಯತ್ ಸದಸ್ಯ ಓಬಯ್ಯ, ಹೊಸಂಗಡಿ ಗ್ರಾಮ ಪಂಚಾಯತು ಅಧ್ಯಕ್ಷ ಕರುಣಾಕರ ಪೂಜಾರಿ, ವಿರ್ಧಯಾನಂದ ಜೈನ್, ಎಂಪಿ ಶ್ರೀನಾಧ್, ರಾಮಕೃಷ್ಣಭಟ್, ಅಶ್ರಫ್ ಆಲಿಕುಂಞಿ ಇದ್ದರು. ಮಹಾವೀರ ಜೈನ್ ಕಾರ್ಯಕ್ರಮ ನಿರೂಪಿಸಿದರು.

ಉದ್ಘಾಟನಾ ಸಮಾರಂಭದ ಬಳಿಕ ವಿವಿಧ ಗೋಷ್ಟಿಗಳು ನಡೆದವು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿತ್ತು. ಸಮಾರೋಪ ಸಮಾರಂಭದಲ್ಲಿ ತಾಲೂಕಿನ ವಿವಿಧ ಕ್ಷೇತ್ರಗಳ ಸಧಕರನ್ನು ಸನ್ಮಾನಿಸಲಾಯಿತು.

ವರ್ಷದ ಹಿಂದೆ (2020) ಫೆಬ್ರವರಿಯಲ್ಲಿ ನಿಗಧಿಯಾಗಿದ್ದ 17 ನೆಯ ಕನ್ನಡ ಸಾಹಿತ್ಯಸಮ್ಮೇಳನ  ಕೊರೋನ ಕಾರಣದಿಂದಾಗಿ ವರ್ಷದ ಬಳಿಕ ನಡೆಸಲಾಯಿತು. ಕೊರೋನ ಭಯದಿಂದಲೋ ಏನೋ ಸಮ್ಮೇಳನದಲ್ಲಿ ಜನರ ಭಾಗವಹಿಸುವಿಕೆ ತೀರಾ ಕಡಿಮೆಯಾಗಿತ್ತು. 

ಸಮ್ಮೇಳನಾಧ್ಯಕ್ಷ, ನಿಕಟಪೂರ್ವಅಧ್ಯಕ್ಷರ ಗೈರು: ಸಮ್ಮೇಳನಾಧ್ಯಕ್ಷ ರಘುನಾಧ ಭಟ್ ಅವರಿಗೆ ಸಮ್ಮೇಳನದಲ್ಲಿ ಭಾಗವಹಿಸಲು ಸಾಧ್ಯವಾಗದ ಕಾರಣ ಅವರ ಅನುಪಸ್ಥಿತಿಯಲ್ಲಿ ಆಡಿಯೋ ವೀಡಿಯೋ ಪ್ರದರ್ಶದ ಮೂಲಕ ಅವರ ಅಧ್ಯಕ್ಷ ಭಾಷಣವನ್ನು ಬಿತ್ತರಿಸಲಾಯಿತು. ನಿಕಟಪೂರ್ವ ಅಧ್ಯಕ್ಷ ಪ. ರಾಮಕೃಷ್ಣ ಶಾಸ್ತ್ರಿ ಅವರೂ ಸಮ್ಮೇಳನಕ್ಕೆ ಆಗಮಿಸಿರಲಿಲ್ಲ.

ಕೊರೋನ ಅನಗತ್ಯ ಭಯಸೃಷ್ಟಿಸಲಾಗುತ್ತಿದೆ: ಕೊರೋನ ಒಂದು ಸಾಮಾನ್ಯ ರೋಗವೆಂಬುದು ಈಗಾಗಲೆ ಎಲ್ಲರಿಗೂ ತಿಳಿದಿದೆ, ಎಲ್ಲರೂ ಅವರ ನಿತ್ಯಕಾಯಕದಲ್ಲಿ ನಿರತರಾಗಿದ್ದಾರೆ, ಆದರೆ ಅದರ ಬಗೆಗೆ ಒಂದು ಅನಗತ್ಯವಾದ ಅವ್ಯಕ್ತಭಯವನ್ನು ಸೃಷ್ಟಿಸಲಾಗುತ್ತಿದೆ. ಇದರ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಹೇಳುವ ಧೈರ್ಯವನ್ನು ವೈದ್ಯರುಗಳು ಪ್ರದರ್ಶಿಸಬೇಕಾಗಿದೆ. 
-ಡಾ.ಎಂ.ಮೋಹನ ಆಳ್ವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X