Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು...

ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು 1,568 ಎಫ್‍ಐಆರ್, 1,541 ಸರಕಾರಿ ಅಧಿಕಾರಿಗಳ ಬಂಧನ

ಎಸಿಬಿ ತನಿಖಾಧಿಕಾರಿಗಳ ಕಾರ್ಯಕ್ಕೆ ಹಿರಿಯ ಅಧಿಕಾರಿಗಳ ಮೆಚ್ಚುಗೆ

ವಾರ್ತಾಭಾರತಿವಾರ್ತಾಭಾರತಿ24 Feb 2021 9:26 PM IST
share
ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು 1,568 ಎಫ್‍ಐಆರ್, 1,541 ಸರಕಾರಿ ಅಧಿಕಾರಿಗಳ ಬಂಧನ

ಬೆಂಗಳೂರು, ಫೆ.24: ಆದಾಯಕ್ಕಿಂತ ಅಧಿಕ ಸಂಪಾದನೆ ಪ್ರಕರಣಗಳನ್ನು ರಾಜ್ಯದೆಲ್ಲೆಡೆ ಬೆನ್ನತ್ತಿ, ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿರುವ ಎಸಿಬಿ ತನಿಖಾ ಸಂಸ್ಥೆಯ ಕಾರ್ಯ ವೈಖರಿ ಬಗ್ಗೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ವಿಡಿಯೊ ಸಂವಾದದ ಮೂಲಕ ನಡೆದ ಭ್ರಷ್ಟಾಚಾರ ನಿಗ್ರಹ ದಳದ ರಾಜ್ಯ ಮಟ್ಟದ ಅಪರಾಧ ವಿಮರ್ಶನಾ ಸಭೆಯಲ್ಲಿ ಅಪರ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಹಿರಿಯ ಅಧಿಕಾರಿಗಳು, ಎಸಿಬಿ ತನಿಖಾಧಿಕಾರಿಗಳ ಕಾರ್ಯಾಚರಣೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

2016ನೇ ಸಾಲಿನಲ್ಲಿ ಎಸಿಬಿ ಆರಂಭವಾದಾಗಿನಿಂದ, ಇಲ್ಲಿಯವರೆಗೆ ಕರ್ನಾಟಕ ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣ ಮಾಡುವ ಕುರಿತು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿಸ್ತೃತವಾಗಿ ಸಭೆಯಲ್ಲಿ ಚರ್ಚಿಸಲಾಯಿತು.

ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 1,568 ಎಫ್‍ಐಆರ್ ಗಳನ್ನು ದಾಖಲಿಸಿದ್ದು, 1,541 ಸರಕಾರಿ ಅಧಿಕಾರಿಗಳು ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ಅದೇ ರೀತಿ, 1199 ಅಧಿಕಾರಿಗಳ ಮೇಲೆ ವಿವಿಧ ಇಲಾಖೆಗಳಿಗೆ ವರದಿಯನ್ನು ಸಲ್ಲಿಸಿ ಸೇವೆಯಿಂದ ಅಮಾನತ್ತಿಗೆ ಒಳಪಡಿಸಲಾಗಿದೆ.

ಇನ್ನು, 940 ಆರೋಪಿತ ಸರಕಾರಿ ಅಧಿಕಾರಿಗಳ ಮೇಲೆ ಇಲಾಖಾ ವಿಚಾರಣೆ ಕೈಗೊಳ್ಳುವ ಸಲುವಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಹಾಗೆಯೇ ಎಫ್‍ಐಆರ್ ದಾಖಲಿಸಿದ ಪ್ರಕರಣಗಳ ಪೈಕಿ 815 ಅಧಿಕಾರಿಗಳ ಮೇಲೆ ಕರ್ನಾಟಕ ರಾಜ್ಯದ 35 ವಿಶೇಷ ನ್ಯಾಯಾಲಯಗಳಿಗೆ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ.

ಪ್ರಮುಖವಾಗಿ ಎಸಿಬಿ ಬೆಂ.ನಗರ ಪೊಲೀಸ್ ಠಾಣೆಯಲ್ಲಿ ಟಿಡಿಆರ್ ವಿತರಣೆ ಕುರಿತು ದಾಖಲಾಗಿರುವ ಪ್ರಕರಣಗಳಲ್ಲಿ ಬಿಬಿಎಂಪಿ ಅಧಿಕಾರಿಗಳು ಅಕ್ರಮವಾಗಿ ಸುಮಾರು 150 ರೂ. ಕೋಟಿ ಮೌಲ್ಯದ 16 ಲಕ್ಷ ಚ.ಅಡಿ ವಿಸ್ತೀರ್ಣವನ್ನು ವಿತರಣೆ ಮಾಡಿರುವ ಬಗ್ಗೆ ಒಟ್ಟು 10 ಪ್ರಕರಣಗಳು ದಾಖಲಾಗಿದ್ದು, ಈ ಪ್ರಕರಣಗಳಲ್ಲಿ 15 ಸರಕಾರಿ ಅಧಿಕಾರಿಗಳು ಹಾಗೂ 59 ಖಾಸಗಿ ವ್ಯಕ್ತಿಗಳ ವಿರುದ್ಧ ತನಿಖೆ ಕೈಗೊಂಡಿದೆ.

3 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದು, ಉಳಿದ 7 ಪ್ರಕರಣಗಳು ತನಿಖೆ ಹಂತದಲ್ಲಿದೆ. ಅಷ್ಟೇ ಅಲ್ಲದೆ, ಬಿಬಿಎಂಪಿ ಬೊಮ್ಮನಹಳ್ಳಿವಲಯ ನಗರ ಯೋಜನೆ ಸಹಾಯಕ ನಿರ್ದೇಶಕ ದೇವೇಂದ್ರಪ್ಪ 20 ಲಕ್ಷ ರೂ. ಲಂಚ ಹಣ ಪಡೆಯುವ ವೇಳೆ ಸಿಕ್ಕಿಬಿದ್ದಿರುವ ಪ್ರಕರಣದಲ್ಲಿ ಅವರ ಮನೆ ಹಾಗೂ ಕಚೇರಿ ಶೋಧನಾ ವೇಳೆಯಲ್ಲಿ 8.75 ಲಕ್ಷ ರೂ ನಗದು ಹಣ, ಬಿಬಿಎಂಪಿಗೆ ಸೇರಿದ 480ಕ್ಕೂ ಹೆಚ್ಚು ಕಡತಗಳು, ಬಿಬಿಎಂಪಿ ಅಧಿಕಾರಿ ಹಾಗೂ ಕಚೇರಿಯ 120 ಸೀಲುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣ ಭೇದಿಸಿದ ಬೆನ್ನಲ್ಲೇ ಸರಕಾರವು 40ಕ್ಕೂ ಹೆಚ್ಚು ಬಿಬಿಎಂಪಿ ನಗರ ಯೋಜನೆ ವಿಭಾಗದ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಹಾಗೆಯೇ, ಇಂಡಿ ತಾಲೂಕಿನ ಸರಕಾರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸೊಸೈಟಿಯ ಮೇಲೆ ದಾಳಿ ನಡೆಸಿದಾಗ ರೈತರಿಂದ ಅನಧಿಕೃತವಾಗಿ ವಸೂಲಿ ಮಾಡಿ ಸಂಗ್ರಹಿಸಿದ್ದ 7.14 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ.

ಶೋಧನಾ ಸಮಯದಲ್ಲಿ ಬಾಕಿ ಇದ್ದ 43 ಚೆಕ್‍ಗಳು ಪತ್ತೆಯಾಗಿದ್ದು, ಅದರಲ್ಲಿ ಸಂಬಂಧಪಟ್ಟ ಫಲಾನುಭವಿಗಳಿಗೆ 1.6 ಕೋಟಿ ಹಣವನ್ನು ರೈತರಿಗೆ ಕೊಡಿಸಿಕೊಡಲು ಕ್ರಮ ವಹಿಸಲಾಗಿದೆ. ವಿಜಯಪುರ ಜಿಲ್ಲೆಯ ಎಸ್‍ಎಲ್‍ಎಓ ಕಚೇರಿಯ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಚೇರಿಯ ಶೋಧನೆಯ ವೇಳೆ ಫಲಾನುಭವಿಗಳಿಗೆ ಅನುದಾನವನ್ನು ಬಿಡುಗಡೆ ಮಾಡುವ ಸಂಬಂಧ ಬಾಕಿ ಇರುವ 640 ಕಡತಗಳು ದೊರೆತಿದ್ದು, ಬಾಕಿ ಇದ್ದ 43 ಚೆಕ್‍ಗಳನ್ನು ಫಲಾನುಭವಿಗಳಿಗೆ ಕೊಡಿಸಲು ಕ್ರಮ ವಹಿಸಲಾಗಿದೆ.

ಬಾಗಲಕೋಟೆಯ ಪುನರ್ವಸತಿ ಮತ್ತು ಪುನರ್ ನಿರ್ಮಾಣದ ಕಚೇರಿಯ ಅಧಿಕಾರಿಯ ಟ್ರ್ಯಾಪ್ ಪ್ರಕರಣದಲ್ಲಿ ಕಚೇರಿಯನ್ನು ಶೋಧನೆ ಮಾಡಿದಾಗ ಬಾಕಿ ಇದ್ದ 50 ಚೆಕ್‍ಗಳನ್ನು 70 ಫಲಾನುಭವಿಗಳ ಖಾತೆಗೆ 4,61,40,000 ರೂ. ಗಳನ್ನು ಜಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಸಂಪರ್ಕ ಸಭೆ: ಲಂಚ ಸ್ವೀಕಾರ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯವ್ಯಾಪಿ ಜಾಗೃತಿ ಕಾರ್ಯಕ್ರಮ ನಡೆಸಿದ್ದು, ಇದರ ಅಂಗವಾಗಿ ವಿವಿಧ ದರ್ಜೆಯ ಅಧಿಕಾರಿಗಳ ನೇತೃತ್ವದಲ್ಲಿ 4219 ಜನ ಸಂಪರ್ಕ ಸಭೆಗಳನ್ನು ನಡೆಸಲಾಗಿದೆ.

ಈ ಸಭೆಯಲ್ಲಿ ದೂರುದಾರರು ನೀಡಿದ ಮಾಹಿತಿ ಅನ್ವಯ 133 ಕಚೇರಿಗಳಲ್ಲಿ ದಿಢೀರ್ ದಾಳಿ ನಡೆಸಿ 17,29,68,069 ರೂ. ನಗದು ಮತ್ತು ಅಕ್ರಮ ದಾಖಲಾತಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಎಸಿಬಿ ಮಾಹಿತಿ ನೀಡಿದೆ.

ಸಭೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ 15 ಜನ ಎಸಿಬಿ ಅಧಿಕಾರಿಗಳಿಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪದಕಕ್ಕೆ ಭಾಜನರಾದ ಅಧಿಕಾರಿಗಳನ್ನು ಪ್ರಶಂಸಿಸಲಾಯಿತು.

ಮೂರು ಪ್ರಕರಣಗಳಲ್ಲಿ ಶಿಕ್ಷೆ

ಎಸಿಬಿ ತನಿಖಾಧಿಕಾರಿಗಳು ನಡೆಸಿದ ಕಾರ್ಯಾಚರಣೆ ಪ್ರಕರಣಗಳಲ್ಲಿ 3 ಪ್ರಕರಣಗಳಲ್ಲಿ ಮಾತ್ರ ಆರೋಪಿಗಳಿಗೆ ಶಿಕ್ಷೆಯಾಗಿದ್ದು, 557 ಪ್ರಕರಣಗಳು ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ ಎಂದು ಎಸಿಬಿ ತಿಳಿಸಿದೆ.

ಸಹಾಯವಾಣಿ

ರಾಜ್ಯದಲ್ಲಿ ಸಾರ್ವಜನಿಕರು ಯಾವುದೇ ಭಯ-ಭೀತಿಯಿಲ್ಲದೇ ದೂರುಗಳನ್ನು ದಾಖಲಿಸಲು '1064' ಉಚಿತ ಸಹಾಯವಾಣಿಯನ್ನು ಆರಂಭಿಸಲಾಗಿದ್ದು, ಈ ಮೂಲಕ ಹಲವಾರು ದೂರುಗಳು ದಾಖಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X