Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೇಂದ್ರ, ರಾಜ್ಯ ಸರ್ಕಾರಗಳ‌ ವಿರುದ್ಧ...

ಕೇಂದ್ರ, ರಾಜ್ಯ ಸರ್ಕಾರಗಳ‌ ವಿರುದ್ಧ ಜನಧ್ವನಿ‌ ಪಾದಯಾತ್ರೆ: ಫೆ.27ರಂದು ಬೈಂದೂರಿನಲ್ಲಿ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ24 Feb 2021 9:42 PM IST
share
ಕೇಂದ್ರ, ರಾಜ್ಯ ಸರ್ಕಾರಗಳ‌ ವಿರುದ್ಧ ಜನಧ್ವನಿ‌ ಪಾದಯಾತ್ರೆ: ಫೆ.27ರಂದು ಬೈಂದೂರಿನಲ್ಲಿ ಸಮಾರೋಪ

ಕುಂದಾಪುರ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿ, ಕೃಷಿ ಮುಸೂದೆ ತಿದ್ದುಪಡಿ, ಬೆಲೆ ಏರಿಕೆಯ ವಿರುದ್ದ ಕಾಂಗ್ರೆಸ್ ನೇತೃತ್ವದಲ್ಲಿ ಆರಂಭಗೊಂಡ ಜನಧ್ವನಿ ಪಾದಯಾತ್ರೆ ಫೆ.27 ರಂದು ಬೈಂದೂರಿನಲ್ಲಿ ಸಮಾಪ್ತಿಗೊಳ್ಳಿಲಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

ಬುಧವಾರ ಮಧ್ಯಾಹ್ನ ಗೋಪಾಲ ಪೂಜಾರಿಯವರ ಕಟ್ ಬೇಲ್ತೂರು ನಿವಾಸದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ನಿರಂತರವಾಗಿ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಹಾಗೂ ಕರಾವಳಿ ತೀರದ ಜ್ವಲಂತ ಸಮಸ್ಯೆಗಳ ವಿರುದ್ದ ಜನಧ್ವನಿ ಪಾದಯಾತ್ರೆ ನಡೆಯ ಲಿದೆ. ಫೆ.26ರ ಬೆಳಗ್ಗೆ ತಲ್ಲೂರಿಗೆ ಆಗಮಿಸಲಿರುವ ಪಾದಯಾತ್ರೆಯನ್ನು ಬೈಂದೂರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಒಗ್ಗೂಡಿ ಸ್ವಾಗತಿಸಲಿದ್ದಾರೆ. ಅಲ್ಲಿಂದ ಸಂಜೆ ನಾವುಂದದಲ್ಲಿ ವಾಸ್ತವ್ಯ ಹೂಡಿ, ಫೆ.27ರ ಬೆಳಗ್ಗೆ 9 ಗಂಟೆಗೆ ನಾವುಂದಿಂದ ಪಾದಯಾತ್ರೆ ಹೊರಡಲಿದ್ದು, ಮಧ್ಯಹ್ನ 2ಕ್ಕೆ ಬೈಂದೂರು ಸೇರಲಿದೆ. ಬಳಿಕ ಅಲ್ಲಿ ಸಮಾರೋಪ‌ ಸಮಾರಂಭ ಜರುಗಲಿದ್ದು ಕೆಪಿಸಿಸಿಯ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಲಿದ್ದಾರೆ ಎಂದರು.

ಇಂಧನ ಬೆಲೆ ಹಾಗೂ ನಿತ್ಯಬಳಿಕೆ ವಸ್ತುಗಳು ಬೆಲೆ ಏರಿಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳ ಜನರಿಗೆ ತಲುಪಿಸಿ, ಜನಜಾಗೃತಿ ಮೂಡಿಸುವುದು ಪಾದಯಾತ್ರೆ ಉದ್ದೇಶವಾಗಿದ್ದು, ಪಾದಯಾತ್ರೆಯಲ್ಲಿ ರಾಜ್ಯ ಹಾಗೂ ಜಿಲ್ಲಾ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.

'ಪರೇಶ ಮೇಸ್ತ ಸಾವು ಮುಂದಿಟ್ಟುಕೊಂಡು ಚುನಾವಣೆ ಗೆಲುವು'
ಪಾದಯಾತ್ರೆಯಲ್ಲಿ ಕರಾವಳಿ ಸಮಸ್ಯೆಗಳ ಮೇಲೂ ಬೆಳಕು ಚೆಲ್ಲಲಾಗುತ್ತದೆ. ಕಳೆದ ಮೂರು ತಿಂಗಳಿಂದ ಮೀನುಗಾರರಿಗೆ ಸೀಮೆ ಎಣ್ಣೆ ಸಿಕ್ಕಿಲ್ಲ, ಆಶ್ರಯ ಮನೆಗಳಿಗೆ ಹಣ ಬಿಡುಗಡೆ ಆಗಿಲ್ಲ. ಪರೇಶ್ ಮೇಸ್ತ ಸಾವು ಮುಂದಿಟ್ಟುಕೊಂಡು ಚುನಾವಣೆ ಎದುರಿಸಿ ಗೆದ್ದ ನಂತರವೂ ಸಿಬಿಐ ತನಿಖೆ ಆರಂಭವಾಗಿಲ್ಲ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಆಡಳಿತವೇ ಗೊತ್ತಿಲ್ಲ ಎಂದು ಕೆ. ಗೋಪಾಲ ಪೂಜಾರಿ ಆರೋಪಿಸಿದರು.

ಬಿಜೆಪಿ ಆಡಳಿತ ವೈಫಲ್ಯಕ್ಕೆ ಸಾಕ್ಷಿ

ಬಿಜೆಪಿ ಆಡಳಿತ ವೈಫಲ್ಯಕ್ಕೆ ಕೊಲ್ಲೂರು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಆಯ್ಕೆಯಾಗದಿರುವುದು ನಮ್ಮ ಕಣ್ಣ ಮುಂದಿರುವ ಸ್ಪಷ್ಟ ಸಾಕ್ಷಿಯಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿ ಮುಖ್ಯಸ್ಥರ ನೇಮಕ ಮಾಡಲಾಗದವರು ಜನರಿಗೆ ಇನ್ನೆಷ್ಟು ಒಳ್ಳೆಯ ಆಡಳಿತ ನೀಡಲು ಸಾಧ್ಯ ಎಂದು ಪ್ರಶ್ನಿಸಿದರು.

ಬೈಂದೂರು ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X