Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಇಂಧನ, ಅಗತ್ಯ ವಸ್ತುಗಳ ಬೆಲೆ...

ಶಿವಮೊಗ್ಗ: ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 Feb 2021 10:10 PM IST
share
ಶಿವಮೊಗ್ಗ: ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ, ಫೆ.24: ಬಿಜೆಪಿ ಸರ್ಕಾರ ಜನಸಾಮಾನ್ಯರನ್ನು ರಕ್ಷಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ, ಗ್ಯಾಸ್ ಸಿಲಿಂಡರ್- ಪೆಟ್ರೋಲ್-ಡಿಸೇಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ತಡೆಯಲು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ರೈಲ್ವೆ ಸ್ಟೇಷನ್ ಆವರಣದಲ್ಲಿ ಪ್ರತಿಭಟನೆ ನಡೆಸಿ ನಂತರ ಮನವಿ ಸಲ್ಲಿಸಿತು.

ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ರೈಲ್ವೆ ನಿಲ್ದಾಣದ ಮುಂಭಾಗದಲ್ಲಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಒಳಹೋಗಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು.

ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಜನ ಸಾಮಾನ್ಯರು ಜೀವನ ಸಾಗಿಸುವುದೇ ಕಷ್ಟವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ತಲ್ಲಣಗೊಂಡಿದ್ದಾರೆ. ಪ್ರತಿ ದಿನ ಗ್ರಾಹಕರಿಗೆ ಶಾಕ್ ಮೇಲೆ ಶಾಕ್ ಆಗುತ್ತಿದೆ. ಗೃಹ ಬಳಕೆ ಸಿಲಿಂಡರ್ ಬೆಲೆ ಧಿಡೀರನೆ ಏರಿದೆ. ಗಾಯದ ಮೇಲೆ ಬರೆ ಎಂಬಂತೆ ಸಬ್ಸಿಡಿ ಕೂಡ ಇಲ್ಲ. ಎಣ್ಣೆ ಕಾಳುಗಳು, ತರಕಾರಿ ಸೇರಿದಂತೆ ದಿನಸಿ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದ ಬಡವರ ಬದುಕು ಹೈರಾಣಾಗಿದ್ದು, ಒಪ್ಪೊತ್ತಿನ ಊಟಕ್ಕೂ ಕಷ್ಟವಾಗಿದೆ. ಇವರ ನಿಟ್ಟುಸಿರು ಸರ್ಕಾರಕ್ಕೆ ತಟ್ಟದೆ ಇರುವುದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದರ ಜೊತೆಗೆ ಹಣಕಾಸು ಬಿಕ್ಕಟ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಕಾಡುತ್ತಿದೆ. ಹಣದುಬ್ಬರ ಹೆಚ್ಚಳವಾಗಿದೆ. ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ. ಮುಟ್ಟುತ್ತಿದೆ. ಇದರಿಂದ ಸರಕು ಸಾಗಾಣು ದರಗಳು ಕೂಡ ಹೆಚ್ಚಾಗಿವೆ. ಬಡ ಮತ್ತು ಮಧ್ಯಮ ವರ್ಗದ ಜನರು ಬದುಕುವುದು ಹೇಗೆ ಇಡೀ ಅರ್ಥ ವ್ಯವಸ್ಥೆಯೇ ಹಾಳಾಗಿ ಹೋಗಿದೆ. ಹೀಗಾದರೆ ಜನರು ಹೇಗೆ ಸುಮ್ಮನಿರುತ್ತಾರೆ. ಬೆಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳದ ಸರ್ಕಾರ ಬೇರೆ ಬೇರೆ ವಿಷಯಗಳತ್ತ ಸಾಮಾನ್ಯ ಜನರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.

ತಕ್ಷಣವೇ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಬಡವರು ನೆಮ್ಮದಿಯಿಂದ ಬದುಕುವ ವಾತಾವರಣವನ್ನು ಕಲ್ಪಿಸಬೇಕು. ಹಣದುಬ್ಬರ ತಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಹೆಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಗಿರೀಶ್, ಪ್ರಮುಖರಾದ ಹೆಚ್.ಸಿ.ಯೋಗೀಶ್, ರೇಖಾರಂಗನಾಥ್, ಯಮುನಾರಂಗೇಗೌಡ, ರಮೇಶ್ ಹೆಗ್ಡೆ, ಚಂದ್ರಭೂಪಾಲ್, ಸುವರ್ಣ ನಾಗರಾಜ್, ವಿಜಯಲಕ್ಷ್ಮೀ ಪಾಟೀಲ್, ಕೆ.ರಂಗನಾಥ್, ಶ್ರೀನಿವಾಸ್ ಕರಿಯಣ್ಣ, ಎಸ್.ಪಿ.ಶೇಷಾದ್ರಿ, ಪ್ರವೀಣ್ ಕುಮಾರ್, ಚಂದ್ರಕಲಾ, ವಿಜಯ್‌ಕುಮಾರ್ ಕಾಶಿವಿಶ್ವನಾಥ್, ನಾಗರಾಜ್ ಸೇರಿದಂತೆ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X