Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಾದೂರು ಘಟಕ್ಕೆ ಸಮುದ್ರದಲ್ಲಿ...

ಪಾದೂರು ಘಟಕ್ಕೆ ಸಮುದ್ರದಲ್ಲಿ ಪೈಪ್‍ಲೈನ್; ಜನವಿರೋಧಿಯಾದರೆ ಜನರೊಂದಿಗೆ: ಲಾಲಾಜಿ ಮೆಂಡನ್

ವಾರ್ತಾಭಾರತಿವಾರ್ತಾಭಾರತಿ24 Feb 2021 10:25 PM IST
share
ಪಾದೂರು ಘಟಕ್ಕೆ ಸಮುದ್ರದಲ್ಲಿ ಪೈಪ್‍ಲೈನ್; ಜನವಿರೋಧಿಯಾದರೆ ಜನರೊಂದಿಗೆ: ಲಾಲಾಜಿ ಮೆಂಡನ್

ಕಾಪು : ಪಾದೂರು ಯೋಜನೆಯಿಂದ ಕಚ್ಚಾತೈಲ ಸಂಗ್ರಹಣೆ ಮತ್ತು ರವಾನೆಗೆ ಜನವಸತಿ ಇಲ್ಲದ ಪ್ರದೇಶದಲ್ಲಿ ಪೈಪ್ ಲೈನ್ ಕಾಮಗಾರಿ ನಡೆಸಲು ಸೂಚಿಸಲಾಗಿದೆ ಎಂದು ಶಾಸಕ ಲಾಲಾಜಿ ಮೆಂಡನ್ ಹೇಳಿದರು.

ಬುಧವಾರ ಕಾಪು ಪುರಸಭೆಯ ಸಾಮನ್ಯ ಸಭೆಯಲ್ಲಿ ಪುರಸಭಾ ಸದಸ್ಯ ಅರುಣ್ ಶೆಟ್ಟಿ ಪಾದೂರು ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಮಲ್ಲಾರು, ಕೊಪ್ಪಲಂಗಡಿ ಮೂಲಕವಾಗಿ ಸಮುದ್ರ ದಡದಿಂದ 22 ಕಿ.ಮೀ ಉದ್ದದ  ಪೈಪ್‍ಲೈನ್ ಕಾಮಗಾರಿಗೆ ನಡೆಯಲಿದೆ. ದೇಶದ  ಭದ್ರತೆಯ ಕಾರಣದಿಂದ ಯೋಜನೆಗೆ ಬೆಂಬಲ ನೀಡಿದ್ದೇವೆ. ಆದರೆ ಅದು ಜನ ವಿರೋಧಿಯಾದರೆ ಜನರೊಂದಿಗೆ ನಾವು ನಿಲ್ಲುತ್ತೇವೆ ಎಂದು ಲಾಲಾಜಿ ಮೆಂಡನ್ ಹೇಳಿದರು.

ಪಾದೂರಿನಲ್ಲಿ ಜನರನ್ನು ಕತ್ತಲಲ್ಲಿಟ್ಟು ಕಚ್ಚಾತೈಲ ಸಂಗ್ರಹಣಾ ರ್ಘಟಕ ಕಾಮಗಾರಿ ನಡೆದಿದೆ. ಪ್ರಸ್ತುತ ಎರಡನೇ ಹಂತದ ಭೂಸ್ವಾಧೀನ ಪ್ರಕ್ರಿಯೆಗೆ ಚಾಲನೆ ದೊರಕಿದ್ದು, ಇದೀಗ ಘಟಕದಿಂದ ಸಮುದ್ರ ಕಿನಾರೆಯವರೆಗೆ ಪೈಪ್‍ಲೈನ್ ಅಳವಡಿಕೆ ಆಗಲಿದೆ ಎಂಬ ಮಾಹಿತಿ ಬಂದಿದ್ದು, ಈ ಬಗ್ಗೆ ಪುರಸಭೆಗೆ ಅಧಿಕೃತವಾಗಿ ಮಾಹಿತಿ ಇದೆಯೇ ಎಂದು ಅರುಣ್ ಶೆಟ್ಟಿ ಪ್ರಶ್ನಿಸಿದರು.

ಪಡು ಗ್ರಾಮದ ರಾಮನಗರ, ಮಲ್ಲಾರು, ಕುಡ್ತಿಮಾರು ಪೈಪ್‍ಲೈಹ್ ಕಾಮಗಾರಿ ನಡೆಯಲಿದ್ದು, ಕಾಮಗಾರಿಗೆ ಈಗಾಗಲೇ ಸರ್ವೇಗೆ ಜನ ಬಂದಿದ್ದರು. ಆದರೆ ಸ್ಥಳೀಯರ ವಿರೋಧ ಮತ್ತು ಗೊಂದಲಗಳ ಕಾರಣದಿಂದ ಸರ್ವೇ ಕೆಲಸವನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಸದಸ್ಯರ ಗಮನಕ್ಕೆ ತಂದು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಾಧಿಕಾರಿ ಹೇಳಿದರು.

ಪೈಪ್‍ಲೈನ್ ಯೋಜನೆಯಿಂದ ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಅವರಿಗೆ ಪುನರ್ವಸತಿ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಸದಸ್ಯ ಕೆ.ಎಚ್.ಉಸ್ಮಾನ್ ಆಗ್ರಹಿಸಿದರು.

ಸಿಡಿಪಿಐ ವಿರುದ್ಧ ಅಸಮಾಧಾನ: ಕಾಪು ಪುರಸಭೆ ವ್ಯಾಪ್ತಿಯಲ್ಲಿ ಅಂಗನವಾಡಿ ವಿಚಾರದಲ್ಲಿ ಬಹಳಷ್ಟು ಸಮಸ್ಯೆಗಳಿದ್ದು, ಅದನ್ನು ಕೇಳಲು ಅಧಿಕಾರಿಗಳೇ ಇಲ್ಲ. ಹೀಗಾದರೆ ನಮ್ಮ ವಾರ್ಡಗಳಲ್ಲಿ ಇರುವ ಅಂಗವಾಡಿ ಕೇಂದ್ರಗಳ ಸಮಸ್ಯೆಗಳನ್ನು ಪರಿಹರಿಸುದಾದರೂ ಹೇಗೆ ? ಎಂದು ಪುರಸಭಾಧ್ಯಕ್ಷ ಅನಿಲ್ ಕುಮಾರ್ ಪ್ರಶ್ನಿಸಿದರು. ಇದಕ್ಕೆ ಸದಸ್ಯರು ಕೂಡಾ ದನಿಗೂಡಿಸಿದ್ದು, ಸಿಡಿಪಿಒ ಅವರ ಅನುಪಸ್ಥಿತಿ ಪುರಸಭೆ ಸಾಮಾನ್ಯ ಸಭೆಗೆ ನೀಡುವ ಅಗೌರವವಾಗಿದೆ ಎಂದರು.

ಈ ಬಗ್ಗೆ ಮುಖ್ಯಾಧಿಕಾರಿ ವೆಂಕಟೇಶ ನಾವುಡ ಪ್ರತಿಕ್ರಿಯಿಸಿ, ಸಿಡಿಪಿಒ ಅವರಿಗೆ ಮುಂದಿನ ಸಭೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಮತ್ತು ಇಲಾಖಾವಾರು ಸಂಪೂರ್ಣ ಮಾಹಿತಿ ನೀಡುವಂತೆ ಸೂಚನೆ ನೀಡುವುದಾಗಿ ಭರವಸೆ ನೀಡಿದರು.

ಸುಮಾರು 750 ಟಿಪ್ಪರ್ ತ್ಯಾಜ್ಯ : ನಾಲ್ಕು ವರ್ಷಗಳಿಂದ ಸಂಗ್ರಹವಾಗಿರುವ 750 ಟಿಪ್ಪರ್ ನಷ್ಟು ತ್ಯಾಜ್ಯ ವಿಲೇವಾರಿಗೆ ಸಂಗ್ರಹವಾಗಿದೆ. ಇದಕ್ಕೆ 15 ಲಕ್ಷ ರೂ. ವೆಚ್ಚ ತಗಲಲಿದ್ದು, ಟೆಂಡರ್ ಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು. ಶೀಘ್ರ ತ್ಯಾಜ್ಯ ವಿಲೇವಾರಿಗೆ ಕ್ರಮ ತೆಗೆದು ಕೊಳ್ಳುವುದಾಗಿ ಮುಖ್ಯಾದಿಕಾರಿ ಭರವಸೆ ನೀಡಿದರು.

ಸ್ಮಶಾನ ನಿರ್ವಹಣೆ ಮತ್ತು ದಾಖಲಾತಿ ಸಂಗ್ರಹಣೆಯ ಮೇಲುಸ್ತುವಾರಿ ನೋಡಿಕೊಳ್ಳಲು ಸಮಿತಿ ರಚಿಸುವಂತೆ ಸದಸ್ಯರು ಒತ್ತಾಯಿಸಿದರು. ಕೆಲವು ಮಸೀದಿಗಳ ಕಬರಿಸ್ಥಾನಗಳಲ್ಲೂ ಶವ ಧಪನ ನಡೆಯುತ್ತಿದ್ದು ನೋಂದಾವಣೆಗಾಗಿ ಸಮಿತಿ ರಚಿಸುವಂತೆ ಅಗ್ರಹಿಸಿದರು.

ಕಾಪು ಪುರಸಭೆ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ಪದೇ ಪದೇ ಕಾಡುತ್ತಿದೆ. ಶಿರ್ವ ಸಬ್ ಸ್ಟೇಷನ್ ನಿಂದ ವಿದ್ಯುತ್ ಪ್ರವಹಿಸುವಿಕೆ ಆಗುತ್ತಿದ್ದು, ಕಾಪುವಿಗೆ ಪ್ರತ್ಯೇಕವಾಗಿ 113/11 ಕೆವಿ ಸಬ್ ಸ್ಟೇಷನ್ ನಿರ್ಮಾಣಕ್ಕೆ ನಿರ್ಣಯ ತೆಗೆದುಕೊಳ್ಳುವಂತೆ ಅರುಣ್ ಶೆಟ್ಟಿ ಪಾದೂರು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X