Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೌಲ್ಯಗಳು ಕುಸಿಯದಂತೆ ಎಚ್ಚರ ವಹಿಸಿದರೆ...

ಮೌಲ್ಯಗಳು ಕುಸಿಯದಂತೆ ಎಚ್ಚರ ವಹಿಸಿದರೆ ಪ್ರಜಾತಂತ್ರಕ್ಕೆ ಅರ್ಥ: ಮುಖ್ಯಮಂತ್ರಿ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ24 Feb 2021 10:37 PM IST
share
ಮೌಲ್ಯಗಳು ಕುಸಿಯದಂತೆ ಎಚ್ಚರ ವಹಿಸಿದರೆ ಪ್ರಜಾತಂತ್ರಕ್ಕೆ ಅರ್ಥ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಫೆ. 24: ‘ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳಿಗೆ ಸಾಮಾನ್ಯ ಜನರ ಹಿತರಕ್ಷಣೆ ಮುಖ್ಯವಾಗಬೇಕು. ಅದರ ಜೊತೆಗೆ ಸಮಾಜದಲ್ಲಿನ ಶೋಷಿತರ ಮತ್ತು ದಮನಿತರ ಧ್ವನಿಯಾಗಿ ಅವರ ಪರವಾಗಿ ಕಾರ್ಯ ನಿರ್ವಹಿಸಬೇಕು' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಕರೆ ನೀಡಿದ್ದಾರೆ.

ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ‘ಕಾಮನ್‍ವೆಲ್ತ್ ಸಂಸದೀಯ ಸಂಘ' ಕರ್ನಾಟಕ ಶಾಖೆವತಿಯಿಂದ ‘ಸಂಸದೀಯ ಮೌಲ್ಯಗಳ ಕುಸಿತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಒಂದು ಆತ್ಮಾವಲೋಕನ' ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಈ ಹಿಂದೆ ಆಯ್ಕೆಯಾಗುತ್ತಿದ್ದ ರಾಜಕೀಯ ಮುತ್ಸದ್ದಿಗಳು ದೇಶಕ್ಕಾಗಿ ನಾವು ಎಂಬ ಭಾವನೆಯಲ್ಲಿದ್ದರು. ಆದರೆ, ಇಂದು ದೇಶ ಇರೋದೇ ನಮಗಾಗಿ ಎನ್ನುವ ಮನೋಭಾವನೆಯಲ್ಲಿದ್ದಾರೆ' ಎಂದು ಹೇಳಿದರು.

‘ಜನಪ್ರತಿನಿಧಿಗಳು ಎಲ್ಲರಿಗೂ ಆದರ್ಶಪ್ರಾಯರಾಗಿರಬೇಕು. ಜನಹಿತ ಬಿಟ್ಟು ಸ್ವಾರ್ಥಕ್ಕಾಗಿ ಅಧಿಕಾರವನ್ನು ಎಂದೂ ಬಳಸಬಾರದು' ಎಂದ ಸಲಹೆ ಮಾಡಿದ ಅವರು, ‘ಸದನದಲ್ಲಿ ಎಂದೂ ಅಹಿತಕರ ಘಟನೆಗಳು ನಡೆಯಬಾರದು. ಆ ರೀತಿ ನಡೆಯದಂತೆ ನಾವುಗಳು ಎಚ್ಚರಿಕೆ ವಹಿಸುವುದು ಅಗತ್ಯ. ಆಗ ಮಾತ್ರ ಪ್ರಜಾಪ್ರಭುತ್ವಕ್ಕೆ ಅರ್ಥ ಬರುತ್ತದೆ' ಎಂದರು.

ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತಾನಾಡಿ, ‘ರಾಜಕಾರಣಕ್ಕೆ ಬರುವುದೇ ನಮ್ಮ ಪುಣ್ಯ. ನೂರರಲ್ಲಿ 10 ಮಂದಿ ಮಾತ್ರವೇ ರಾಜಕಾರಣಕ್ಕೆ ಬರಬಹುದು. ನಾವು ಹೇಗೆ ನಡೆದುಕೊಳ್ತೇವೆ ಎಂಬುದು ಬಹಳ ಮುಖ್ಯ. ಜನಪ್ರತಿನಿಧಿಗಳು ಜನರ ಧ್ವನಿಯಾಗಬೇಕೇ ಹೊರತು ವ್ಯವಸ್ಥೆಯ ಸುಳಿಯಾಗಬಾರದು' ಎಂದು ಮಾರ್ಮಿಕವಾಗಿ ನುಡಿದರು.

‘ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಚೌಕಟ್ಟಿನಲ್ಲಿ ನಾವು ಆಡಳಿತ ನಡೆಸಬೇಕು ಕರ್ನಾಟಕ ರಾಜ್ಯ ಈ ವಿಚಾರದಲ್ಲಿ ರಾಷ್ಟ್ರಕ್ಕೆ ಮೇಲ್ಪಂಕ್ತಿಯಾಗಬೇಕು. ಸಂವಿಧಾನದ ಜವಾಬ್ದಾರಿಗಳು ಸಾಕಷ್ಟಿವೆ. ಜನರ ಕಷ್ಟ-ಸುಖಗಳಲ್ಲಿ ಭಾಗಿಯಾಗಬೇಕು ಎಂದ ಅವರು, ಮುಂದೊಂದು ದಿನ ಅರಾಜಕತೆ ಎದುರಾಗಬಹುದು. ಅಂತಹ ಪರಿಸ್ಥಿತಿ ಬರುವುದನ್ನು ತಡೆಯುವ ನಿಟ್ಟಿನಲ್ಲಿ ಚರ್ಚೆಗಳ ಅಗತ್ಯವಿದೆ' ಎಂದು ಅವರು ಹೇಳಿದರು.

ಕಲಾಪ ನಡೆಸಲು ಸಿದ್ಧ: ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ವಿಧಾನ ಮಂಡಲ ಕಲಾಪ ವಾರ್ಷಿಕ ಕನಿಷ್ಠ 60 ದಿನ ಸದನ ನಡೆಸಲು ನಾವು ಸಿದ್ಧ. ಈ ಸಂಬಂಧ ಉಭಯ ಸದನಗಳ ಕಲಾಪ ಸಲಹಾ ಸಮಿತಿ ಸಭೆ ನಡೆಸಿ ತೀರ್ಮಾನ ಮಾಡಲಿದ್ದು, ಇದಕ್ಕೆ ಆಡಳಿತ ಮತ್ತು ಪ್ರತಿಪಕ್ಷಗಳ ಸಹಕಾರ ನೀಡಬೇಕು ಎಂದು ಕೋರಿದರು.

ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಸಚಿವರಾದ ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಮಾಜಿ ಸಭಾಪತಿಗಳಾದ ಶಂಕರಮೂರ್ತಿ, ಬಿ.ಎಲ್.ಶಂಕರ್, ವಿ.ಆರ್. ಸುದರ್ಶನ್, ಮಾಜಿ ಸ್ಪೀಕರ್ ಗಳಾದ ಕೆ.ಆರ್.ರಮೇಶ್ ಕುಮಾರ್, ಕೆ.ಜಿ.ಬೋಪಯ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X