Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಂದಿಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ...

ನಂದಿಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸಚಿವ ಡಾ. ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ25 Feb 2021 2:24 PM IST
share
ನಂದಿಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸಚಿವ ಡಾ. ಸುಧಾಕರ್

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಜನಪ್ರಿಯ ನಂದಿ ಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿಸಿ ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಂದಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಂದಿಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶ ಆಕರ್ಷಕವಾಗಿದೆ. ಇದಕ್ಕೆ ಐತಿಹಾಸಿಕ, ಧಾರ್ಮಿಕ ಪ್ರಾಮುಖ್ಯವಿದ್ದು, ವಿಶೇಷವಾದ ಸಸ್ಯಸಂಪತ್ತು ಇದೆ. ಇವೆಲ್ಲವನ್ನೂ ಗಮನಿಸಿ ಪ್ರವಾಸೋದ್ಯಮ ಕ್ಷೇತ್ರವಾಗಿಸಬಹುದು. ಇದಕ್ಕಾಗಿ ನಮ್ಮ ಸರ್ಕಾರ ಈಗಾಗಲೇ 10 ಕೋಟಿ ರೂ. ಅನುದಾನ ನೀಡಿದೆ ಎಂದು ಮಾಹಿತಿ ನೀಡಿದರು.

ಕಳೆದ 15 ವರ್ಷಗಳಿಂದ ರೋಪ್ ವೇ ಬೇಕು ಎಂದು ಜನರು ಬೇಡಿಕೆ ಇಡುತ್ತಿದ್ದಾರೆ. ಅಂತಾರಾಷ್ಟ್ರೀಯ ಕಂಪನಿಯೊಂದು ಇದನ್ನು ಮಾಡಲು ಮುಂದಾಗಿ ನಂತರ ಕಾರಣಾಂತರದಿಂದ ಯೋಜನೆ ಕೈ ಬಿಟ್ಟಿತ್ತು. ಈಗ ಆ ಕನಸು ನನಸಾಗಲಿದೆ. ಇಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು 10 ಎಕರೆಗೂ ಹೆಚ್ಚು ಜಾಗವನ್ನು ಪಡೆಯಲು ಪ್ರಯತ್ನಿಸಲಾಗಿದೆ. ಈ ರೀತಿ ಮಾಸ್ಟರ್ ಪ್ಲಾನ್ ಮಾಡಿ ಅನುಷ್ಠಾನಗೊಳಿಸಲಾಗುವುದು. ಮೂರ್ನಾಲ್ಕು ತಿಂಗಳಲ್ಲಿ ಕಾಮಗಾರಿ ಮುಗಿಯಬಹುದು ಎಂದರು.

ತಕ್ಷಣದಲ್ಲಿ ಟೆಂಡರ್ ಆಗಿ ಎಲ್ಲ ಬಗೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ನಂದಿಬೆಟ್ಟವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ರೂಪುಗೊಳಿಸಬೇಕಿದೆ. ಈ ತಾಣವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 30 ಕಿ.ಮೀ. ದೂರದಲ್ಲಿದೆ. ಬೆಂಗಳೂರು ನಗರದಿಂದ ಒಂದು ಗಂಟೆಯಲ್ಲಿ ಬರಬಹುದು. ಈ ಪ್ರದೇಶವನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಎಲ್ಲ ಸಹಕಾರ ನೀಡಲಾಗುವುದು ಎಂದು ಉತ್ತೇಜಿಸಿದ್ದಾರೆ ಎಂದರು.

ಇದರ ಜೊತೆಗೆ ಎಕೋ-ಟೂರಿಸಂ, ಸುತ್ತಮುತ್ತಲಿನ 5 ಬೆಟ್ಟಗಳಿಗೆ ಚಾರಣ ದಾರಿಗಳು, ಪುರಾತತ್ವ ಸ್ಮಾರಕಗಳು, ನೆಲ್ಲಿಕಾಯಿ ಬಸವಣ್ಣ ಮತ್ತು ಮಂಟಪಗಳು ಸಂರಕ್ಷಣೆ, ಸುಂದರೀಕರಣ ಸೇರಿದಂತೆ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮುಖ್ಯಮಂತ್ರಿಗಳು ಮಂಡಿಸಲಿರುವ ಆಯವ್ಯಯದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಿದ್ದಾರೆ. ರಾಜ್ಯದಲ್ಲಿ ವಿಶಿಷ್ಟವಾದ ಪ್ರವಾಸಿ ತಾಣಗಳಿವೆ ಎಂದರು.

ಪ್ಲಾಸ್ಟಿಕ್ ನಿಷೇಧ

ನಂದಿಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಸಂಪೂರ್ಣ ನಿಷೇಧಿಸಲು ತೀರ್ಮಾನಿಸಲಾಗಿದೆ. ಯಾವುದೇ ರೀತಿಯ ಪ್ಲಾಸ್ಟಿಕ್ ಒಳಗೆ ತೆಗೆದು ಕೊಂಡು ಹೋಗಲು ಅವಕಾಶ ನೀಡದಿರಲು ನಿರ್ಧರಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X