Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಲೆಯಿಂದ ಹೊರಗುಳಿದ ಮಕ್ಕಳನ್ನು...

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕರೆತರುವಲ್ಲಿ ಎನ್‍ಜಿಒಗಳ ಪಾತ್ರ ಮುಖ್ಯ: ಅಬ್ದುಲ್ ಅಝೀಮ್

ವಾರ್ತಾಭಾರತಿವಾರ್ತಾಭಾರತಿ25 Feb 2021 6:24 PM IST
share
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕರೆತರುವಲ್ಲಿ ಎನ್‍ಜಿಒಗಳ ಪಾತ್ರ ಮುಖ್ಯ: ಅಬ್ದುಲ್ ಅಝೀಮ್

ರಾಮನಗರ, ಫೆ.25: ಮುಸ್ಲಿಮ್ ಸಮುದಾಯದಲ್ಲಿ ಬಹಳಷ್ಟು ಮಕ್ಕಳು ಶಾಲೆಯಿಂದ ಹೊರಗುಳಿದು ಬಾಲಕಾರ್ಮಿಕ ಪದ್ಧತಿಯಲ್ಲಿ ತೊಡಗುತ್ತಾರೆ. ಮಕ್ಕಳನ್ನು ಶಾಲೆಗೆ ಕರೆತರುವ ಕೆಲಸದಲ್ಲಿ ಸ್ವಯಂ ಸೇವಾ ಸಂಘಗಳ ಪತ್ರ ಬಹಳ ಮುಖ್ಯ ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ  ಅಬ್ದುಲ್ ಅಝೀಮ್ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಗಳೊಂದಿಗೆ ನಡೆಸಿದ ಕುಂದುಕೊರತೆಗಳನ್ನು ಆಲಿಸುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ಪೋಷಕರು ಸರಿಯಾದ ಮಾಹಿತಿ ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸುತ್ತಾರೆ. ಆದರೆ, ಸಾಮಾಜಿಕ ಕಾರ್ಯಕರ್ತ ದಸ್ತಗೀರ್ ಆಲಂ ಅವರು ಸರಿಯಾಗಿ ಸಮೀಕ್ಷೆ ನಡೆಯುತ್ತಿಲ್ಲ ಎಂದು ದೂರು ಸಲ್ಲಿಸಿದ್ದಾರೆ ಎಂದರು.

ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸರಕಾರದಿಂದ ವಸತಿಶಾಲೆಗಳನ್ನು ನಡೆಸಲಾಗುತ್ತಿದೆ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಇರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಅಬ್ದುಲ್ ಅಝೀಮ್ ಹೇಳಿದರು.

ಮುಸ್ಲಿಮ್ ಗ್ರಾಜುಯೇಟ್ ಫೋರಂನಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲಾಗುತ್ತಿದ್ದು, ಕಟ್ಟಡ ನಿರ್ಮಾಣ ಮಾಡಲು ಅವಶ್ಯಕವಿರುವ ಸ್ಥಳವನ್ನು ಒದಗಿಸಿಕೊಡುವಂತೆ ನಯಾಝ್ ಅಹಮದ್ ಎಂಬವರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ ಅಝೀಮ್, ರಾಮನಗರ ಜಿಲ್ಲೆಯಲ್ಲಿ ಸಿ.ಎ ನಿವೇಶನಗಳು ಲಭ್ಯವಿಲ್ಲ. ರಾಮನಗರದ ಹೊರವಲಯದಲ್ಲಿ ಸ್ಥಳ ಗುರುತಿಸಿ ಅರ್ಜಿ ಸಲ್ಲಿಸಿದರೆ ಜಿಲ್ಲಾಧಿಕಾರಿ ಹಾಗೂ ಮುಖ್ಯಮಂತ್ರಿ ಜೊತೆ ಚರ್ಚಿಸಿ ಸ್ಥಳ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

ಫಾರೂಕಿಯಾ ಕಾಲೇಜಿನ ಉಪನ್ಯಾಸಕ ಫಕ್ರುದ್ದೀನ್ ದೇಶದ ಅಭಿವೃದ್ಧಿಗೆ ಶಿಕ್ಷಣ ಎಂಬುದು ಬಹಳ ಮುಖ್ಯ ಶಿಕ್ಷಣಕ್ಕಾಗಿ ನೀಡಲಾಗುವ ಅರಿವು ಶೈಕ್ಷಣಿಕ ಸಾಲವನ್ನು ತಡೆ ಹಿಡಿಯಲಾಗಿದೆ. ಈ ಅನುದಾನವನ್ನು ಮಕ್ಕಳಿಗೆ ಒದಗಿಸಿಕೊಡಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಪರಿಸ್ಥಿತಿಯಲ್ಲಿ ತೊಂದರೆಯಾಗಿದೆ. ಮುಖ್ಯಮಂತ್ರಿ ಜೊತೆ ಚರ್ಚಿಸಿ ಈ ಬಾರಿ ಆಯವ್ಯಯದಲ್ಲಿ ಅಲ್ಪಸಂಖ್ಯಾತರಿಗೆ ನೀಡಲಾಗುವ ಶೈಕ್ಷಣಿಕ ಸಾಲದ ವ್ಯವಸ್ಥೆ ಮಾಡಬೇಕಾಗಿ ಮನವಿ ಸಲ್ಲಿಸಲಾಗುವುದು ಎಂದರು.

ಸಭೆಯಲ್ಲಿ ರಾಮನಗರ ನಗರಸಭೆ ಆಯುಕ್ತ ನಂದಕುಮಾರ್, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ನಿಸಾರ್ ಅಹಮದ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕುಂದು ಕೊರತೆ ಸಭೆಗೂ ಮುನ್ನ ಅಬ್ದುಲ್ ಅಝೀಮ್, ರಾಮನಗರ ಜಿಲ್ಲಾ ಆಸ್ಪತ್ರೆ, ಟಿಪ್ಪುನಗರದ ಮಸೀದಿ, ರಾಮನಗರದ ಲೂರ್ದು ಮಾತೆಯರ ದೇವಾಲಯ ಮತ್ತು ಸರಕಾರಿ ಮುಸ್ಲಿಮ್ ವಸತಿ ಕಾಲೇಜು ಹಾಗೂ ಹಾಸ್ಟೇಲ್‍ಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಕುರಿತು ಪರಿಶೀಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X