Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವೈಮಾನಿಕ ತರಬೇತಿ ಶಾಲೆ ಶೀಘ್ರದಲ್ಲೆ...

ವೈಮಾನಿಕ ತರಬೇತಿ ಶಾಲೆ ಶೀಘ್ರದಲ್ಲೆ ಪುನರಾರಂಭ ಆಗಬೇಕು: ಸಚಿವ ಡಾ.ನಾರಾಯಣಗೌಡ

ವಾರ್ತಾಭಾರತಿವಾರ್ತಾಭಾರತಿ25 Feb 2021 6:49 PM IST
share
ವೈಮಾನಿಕ ತರಬೇತಿ ಶಾಲೆ ಶೀಘ್ರದಲ್ಲೆ ಪುನರಾರಂಭ ಆಗಬೇಕು: ಸಚಿವ ಡಾ.ನಾರಾಯಣಗೌಡ

ಬೆಂಗಳೂರು, ಫೆ.25: ಜಕ್ಕೂರಿನಲ್ಲಿರುವ ಸರಕಾರಿ ವೈಮಾನಿಕ ತರಬೇತಿ ಶಾಲೆ ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದು ಪುನರಾರಂಭಕ್ಕೆ ಎಲ್ಲ ಕ್ರಮ ತೆಗೆದುಕೊಳ್ಳಿ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಾ.ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಗುರುವಾರ ನಗರದ ಜಕ್ಕೂರಿನಲ್ಲಿರುವ ವೈಮಾನಿಕ ತರಬೇತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಅಲ್ಲಿನ ಅವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ವೈಮಾನಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿದ್ದಾರೆ. ಆದರೆ ಬೋಧಕ ಸಿಬ್ಬಂದಿಯೇ ಇಲ್ಲ. ಇದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ವೈಮಾನಿಕ ತರಬೇತಿ ಆರಂಭಿಸುವಂತಾಗಬೇಕು ಎಂದು ಸೂಚಿಸಿದರು.

ಜಕ್ಕೂರಿನಲ್ಲಿ 214 ಎಕರೆಯಲ್ಲಿರುವ ವೈಮಾನಿಕ ತರಬೇತಿ ಶಾಲೆ, ರನ್ ವೇ ಪರಿಶೀಲಿಸಿದ ಅವರು, ಟ್ವಿನ್ ಇಂಜಿನ್ ಚಾಲನೆಗೆ ಅಗತ್ಯವಿರುವ 10 ಎಕರೆ ಭೂಮಿ ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ತ್ವರಿತಗತಿಯಲ್ಲಿ ಆಗಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಭೂ ಸ್ವಾದೀನ ಪರಿಹಾರ ಬಾಕಿ ಮೊತ್ತ 10 ಕೋಟಿ ರೂ. ಅನ್ನು ಪಡೆದುಕೊಳ್ಳಲು ಅಗತ್ಯ ಕ್ರಮ ತೆಗೆದುಕೊಳ್ಳಿ ಎಂದರು.

ಖಾಸಗಿ ಏರ್ ಕ್ರಾಫ್ಟ್ ಪಾಕಿರ್ಂಗ್ ಶುಲ್ಕ ಕೂಡ ಸುಮಾರು ಒಂದುವರೆ ಕೋಟಿ ರೂ. ಬಾಕಿ ಇದೆ. ಅದನ್ನೆಲ್ಲ ಪಾವತಿ ಮಾಡಿಸಿಕೊಳ್ಳಬೇಕು. ಇನ್ನುಮುಂದೆ ಪಾಕಿರ್ಂಗ್ ಬಾಡಿಗೆ ಆಯಾ ತಿಂಗಳೇ ಪಾವತಿಯಾಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ವೈಮಾನಿಕ ತರಬೇತಿ ಶಾಲೆ ಪುನಾರಂಭವಾದರೆ ನೂರಾರು ನಿರುದ್ಯೋಗಿ ಯುವಕರಿಗೆ ಉದ್ಯೋಗ ಲಭಿಸುತ್ತದೆ. ರಾಷ್ಟ್ರ, ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ವಿಮಾನಯಾನ ಸೌಲಭ್ಯ ಹೆಚ್ಚುತ್ತಿದ್ದು, ಪೈಲಟ್‍ಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಹೀಗಾಗಿ ಶಾಲೆ ಪುನರಾರಂಭವಾದರೆ ಗ್ರಾಮೀಣ ಭಾಗದ ಯುವಕರೂ ಕೂಡ ತರಬೇತಿ ಪಡೆದು ಉತ್ತಮ ಸಂಬಳ ಪಡೆಯುತ್ತಾರೆ. ಆದುದರಿಂದ, ಅಧಿಕಾರಿಗಳು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ನಿರ್ವಹಣೆ ಕೂಡ ಸರಿಯಾಗಿ ಆಗಬೇಕು. ವೈಮಾನಿಕ ತರಬೇತಿ ಕೇಂದ್ರ ಅತ್ಯುತ್ತಮ ಗುಣಮಟ್ಟದಲ್ಲಿ ಇರಬೇಕು. ಆದರೆ ಇಲ್ಲಿ ಅವ್ಯವಸ್ಥೆ ಆಗರವಾಗಿದೆ. ತಿಂಗಳೊಳಗೆ ಮತ್ತೊಮ್ಮೆ ಭೇಟಿ ನೀಡುತ್ತೇನೆ. ಅಷ್ಟರಲ್ಲಿ ಶಾಲೆ ಪುನರಾರಂಭಗೊಂಡು, ಎಲ್ಲವು ಸುಸ್ಥಿತಿಯಲ್ಲಿ ಇರಬೇಕು ಎಂದು ನಾರಾಯಣಗೌಡ ಎಚ್ಚರಿಕೆ ನೀಡಿದರು.

ಬಳಿಕ ವಿದ್ಯಾನಗರದಲ್ಲಿರುವ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ಕೇಂದ್ರಕ್ಕೆ ಭೇಟಿ ಪರಿಶೀಲಿಸಿದರು. ಇಲ್ಲಿರುವ ಕ್ರೀಡಾ ಸಮುಚ್ಚಯವನ್ನು ಭಾರತೀಯ ಕ್ರೀಡಾ ಪ್ರಾಧಿಕಾರದ ಗುಣಮಟ್ಟಕ್ಕೆ ಸಮಾನಾಂತರವಾಗಿ ಉನ್ನತೀಕರಿಸಬೇಕು. ಸಿಎಸ್‍ಆರ್ ಫಂಡ್ ಬಳಸಿಕೊಂಡು ಈ ಕಾರ್ಯವನ್ನು ಮಾಡಬೇಕು ಎಂದು ಅವರು ಸೂಚಿಸಿದರು. 

ಕ್ರೀಡಾ ಸಮುಚ್ಚಯದಲ್ಲಿರುವ ಈಜುಕೊಳ, ಬಾಸ್ಕೆಟ್ ಬಾಲ್ ಕ್ರೀಡಾಂಗಣ, ಆಯುರ್ವೆದ ಮಸಾಜ್ ಕೇಂದ್ರ, ವಸತಿ ನಿಲಯಗಳನ್ನು ಪರಿಶೀಲಿಸಿದರು. ಈ ವೇಳೆ ಸ್ವಚ್ಛತೆ ಹಾಗೂ ಸರಿಯಾದ ನಿರ್ವಹಣೆ ಇಲ್ಲದಿರುವ ಬಗ್ಗೆ ಅಸಮಾಧಾನಗೊಂಡರು. ಈ ಸಂದರ್ಭದಲ್ಲಿ ಬಾಸ್ಕೆಟ್ ಬಾಲ್ ಆಟಗಾರರ ಜೊತೆ ಅಲ್ಲಿನ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು, ವಾರದೊಳಗೆ ಮತ್ತೆ ಬರುತ್ತೇನೆ. ಪರಿಸ್ಥಿತಿ ಸುಧಾರಿಸಿರಬೇಕು. ಇಲ್ಲವಾದಲ್ಲಿ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ನಾರಾಯಣಗೌಡ ಅಧಿಕಾರಿಗಳಿಗೆ ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X