Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಲಾ ವಾಹನಗಳಲ್ಲಿ 1098 ಮಾಹಿತಿ ಕಡ್ಡಾಯ...

ಶಾಲಾ ವಾಹನಗಳಲ್ಲಿ 1098 ಮಾಹಿತಿ ಕಡ್ಡಾಯ : ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ25 Feb 2021 7:57 PM IST
share
ಶಾಲಾ ವಾಹನಗಳಲ್ಲಿ 1098 ಮಾಹಿತಿ ಕಡ್ಡಾಯ : ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಫೆ.25: ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ, ಜಿಲ್ಲೆಯ ಎಲ್ಲಾ ಖಾಸಗಿ ಶಾಲಾ ಬಸ್‌ಗಳಲ್ಲಿ ಮಕ್ಕಳಿಗೆ ಸ್ಪಷ್ಟವಾಗಿ ಕಾಣುವಂತೆ ಚೈಲ್ಡ್‌ಲೈನ್ ಸಂಖ್ಯೆ-1098ರ ಮಾಹಿತಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಈ ಕುರಿತಂತೆ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಗುರುವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಾಲಾ ಬಸ್‌ಗಳಲ್ಲಿ ಚೈಲ್ಡ್‌ಲೈನ್ ಸಂಖ್ಯೆ 1098ನ್ನು ಅಳವಡಿಸುವುದರ ಜೊತೆಗೆ ಮಕ್ಕಳಿಗೆ ಆ ಸಂಖ್ಯೆಯ ಪ್ರಯೋಜನ ಕುರಿತು ಮಾಹಿತಿ ನೀಡಬೇಕು ಹಾಗೂ ಶಾಲಾ ವಾಹನಗಳಲ್ಲಿ ಮಕ್ಕಳು ದೂರು ನೀಡಲು ದೂರು ಪೆಟ್ಟಿಗೆ ಅಳವಡಿಸಬೇಕು. ಮಕ್ಕಳ ಸಂರಕ್ಷಣೆಗೆ ಸಂಬಂಧಪಟ್ಟಂತೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ರಚಿಸಲಾಗಿರುವ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಸಮಿತಿಯ ಸಭೆಗಳನ್ನು ತ್ರೈಮಾಸಿಕವಾಗಿ ನಡೆಸಿ, ಸಭೆಯಲ್ಲಿ ಸಲ್ಲಿಕೆಯಾಗುವ ದೂರುಗಳ ಬಗ್ಗೆ ತೆಗೆದುಕೊಂಡ ಕ್ರಮಗಳ ಕುರಿತು ವರದಿ ನೀಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಆಯುವ ಮಕ್ಕಳ ರಕ್ಷಣಾ ಕಾರ್ಯಾಚರಣೆ ಯನ್ನು ನಿರಂತರವಾಗಿ ನಡೆಸಬೇಕು. ಬಂದರಿನ ಗೇಟಿನಲ್ಲಿ ಮಕ್ಕಳು ಒಳ ಪ್ರವೇಶಿಸದಂತೆ ತಡೆಯಲು ಬಂದರು ಇಲಾಖೆಗೆ ಅವರು ಎಚ್ಚರಿಕೆ ನೀಡಿದರು.

ಶಾಲೆಯಲ್ಲಿ ಮಕ್ಕಳ ರಕ್ಷಣಾ ಸಮಿತಿ ಮತ್ತು ಆಪ್ತ ಸಮಾಲೋಚಕರನ್ನು ಗುರುತಿಸಬೇಕು. ಮಕ್ಕಳ ರಕ್ಷಣಾ ಕಾರ್ಯಕ್ರಮವನ್ನು ಗ್ರಾಮ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವ ಬಗ್ಗೆ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಆಯೋಜಿಸುವಂತೆ ಜಗದೀಶ್ ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಜನವರಿವರೆಗೆ ಮಕ್ಕಳ ಕಲ್ಯಾಣ ಸಮಿತಿ ಮುಂದೆ 31 ಬಾಲಕರು ಹಾಗೂ 53 ಬಾಲಕಿಯರ ಪ್ರಕರಣಗಳು ಬಂದಿದ್ದು, ಹಿಂದಿನ ಬಾಕಿ ಪ್ರಕರಣಗಳೂ ಸೇರಿದಂತೆ ಒಟ್ಟು 31 ಗಂಡು ಹಾಗೂ 57 ಹೆಣ್ಣು ಮಕ್ಕಳ ಪ್ರಕರಣ ಇತ್ಯರ್ಥ ಗೊಳಿಸಲಾಗಿದೆ. ಐವರು ಹೆಣ್ಣು ಮಕ್ಕಳ ಪ್ರಕರಣ ಬಾಕಿ ಇದೆ. ಪುರ್ನವಸತಿ ಒದಗಿಸುವ ಕುರಿತ 93 ಪ್ರಕರಣಗಳಲ್ಲಿ 23 ಮಕ್ಕಳ ಪಾಲನಾ ಸಂಸ್ಥೆಗಳಿಗೆ ವರ್ಗಾಯಿಸಿದ್ದು, 62ನ್ನು ಹೆತ್ತವರ/ಪೋಷಕರ ವಶಕ್ಕೆ ಬಿಡುಗಡೆ ಮಾಡಲಾಗಿದೆ. ಏಳನ್ನು ದತ್ತು ಕೇಂದ್ರಗಳಿಗೆ ಮತ್ತು ಒಂದನ್ನು ಬೇರೆ ಜಿಲ್ಲೆಗೆ ವರ್ಗಾಯಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸದಾನಂದ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್. ಶೇಷಪ್ಪ, ಕಾರ್ಮಿಕ ಅಧಿಕಾರಿ ಕುಮಾರ್, ಕೋಟ ಠಾಣಾ ಸಹಾಯಕ ಉಪ ನಿರೀಕ್ಷಕಿ ಮುಕ್ತಾ, ಮಕ್ಕಳ ಸಹಾಯವಾಣಿ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X