Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ಇಂಧನ ಬೆಲೆ ಹೆಚ್ಚಳ ಖಂಡಿಸಿ...

ತುಮಕೂರು: ಇಂಧನ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 Feb 2021 9:25 PM IST
share
ತುಮಕೂರು: ಇಂಧನ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಪ್ರತಿಭಟನೆ

ತುಮಕೂರು: ಇಂಧನ ಬೆಲೆಗಳ ನಿರಂತರ ಹೆಚ್ಚಳ ಹಾಗೂ ಸ್ಮಾರ್ಟ್ ಸಿಟಿ ಕಾಮಗಾರಿಗಳ ವಿಳಂಬದಿಂದ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ಖಂಡಿಸಿ ಇಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಎತ್ತಿನಗಾಡಿ, ಜಟಕಾಗಾಡಿ, ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. 

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಹಮ್ಮಿಕೊಳ್ಳಲಾಗಿದ್ದ ಎತ್ತಿನ ಗಾಡಿ, ಜಟಕಾಗಾಡಿ ಮತ್ತು ಸೈಕಲ್ ಜಾಥಾವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಸೈಯಿದ್ ಅಹಮದ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಅಂತರರಾಷ್ಟ್ರಿಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕಡಿಮೆ ಇದ್ದರೂ, ಭಾರತದಲ್ಲಿ ನಿರಂತರವಾಗಿ ಇಂಧನ ಬೆಲೆಗಳನ್ನು ಹೆಚ್ಚಳ ಮಾಡುವ ಮೂಲಕ, ಕೋರೋನ ಸಂಕಷ್ಟದಲ್ಲಿರುವ ರೈತರನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸುಲಿಗೆ ಮಾಡುತ್ತಿವೆ. ಇಂಧನ ಬೆಲೆಗಳ ಹೆಚ್ಚಳದ ಪರಿಣಾಮ ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚಾಗಿ, ಜನಸಾಮಾನ್ಯರು, ಅದರಲ್ಲಿ ಬಡವರು ಮತ್ತು ಮಧ್ಯಮವರ್ಗದ ಜನರು ಬದುಕುವುದೇ ಕಷ್ಟವಾಗಿದೆ. ಕೇಂದ್ರ ಸರಕಾರ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಇದರ ವಿರುದ್ದ ಕಾಂಗ್ರೆಸ್ ನಿರಂತರ ಹೋರಾಟ ರೂಪಿಸಿದ್ದು, ಬೀದಿಗಿಳಿದು ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿರುದ್ದ ಪ್ರತಿಭಟನೆ ನಡೆಸಲಿದೆ ಎಂದರು.

ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸದೆ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿರುವ ಸರಕಾರ, ಸರಕಾರಿ ಸಾಮ್ಯದ ಸಾರಿಗೆ, ಟೆಲಿಕಾಂ, ಹೆಚ್.ಎ.ಎಲ್.ನಂತಹ ಕಂಪನಿಗಳನ್ನು ಮಾರಾಟ ಮಾಡಿ, ಅದಾನಿ, ಅಂಬಾನಿಯಂತಹ ದೊಡ್ಡ ಬಂಡವಾಳ ಗಾರರನ್ನು ಪೋಷಿಸುತ್ತಿದ್ದಾರೆ. ಗುಜರಾತ್ ನಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಹೆಸರಿನಲ್ಲಿ ನಿರ್ಮಿಸಿದ್ದ ಕ್ರೀಡಾಂಗಣವನ್ನು ತನ್ನ ಹೆಸರಿಗೆ ಬದಲಾಯಿಸಿಕೊಂಡು, ಕ್ರಿಕೆಟ್ ಅಂಕಣದಲ್ಲಿ ಅದಾನಿ,ಅಂಬಾನಿ ಎಂಡ್‍ಗಳನ್ನು ಗುರುತಿಸಿ, ದೇಶದ ಜನರ ಜೊತೆ, ಕ್ರೀಡೆಯನ್ನು ಅಪಮಾನಿಸುತ್ತಿದ್ದಾರೆ. ಇದರ ವಿರುದ್ದ ಕಾಂಗ್ರೆಸ್ ಶಾಂತಿಯುತ ಹೋರಾಟ ರೂಪಿಸಲಿದೆ ಎಂದು ಸೈಯಿದ್ ಅಹಮದ್ ತಿಳಿಸಿದರು. 

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅತೀಕ್ ಅಹಮದ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಬೆಲೆ ಏರಿಕೆ ನೀತಿಯಿಂದ ಜನಸಾಮಾನ್ಯರು ತತ್ತರಿಸಿದ್ದು, ದಿನನಿತ್ಯ ಬಳಕೆ ವಸ್ತುಗಳಾದ ಗೋಧಿ, ಬೆಳೆ, ಬೆಲ್ಲ, ಅಕ್ಕಿ, ಕಾಳುಗಳು ಬೆಲೆಗಳು ಗಗನ ಮುಖಿಯಾಗಿದ್ದು, ಜನಸಾಮಾನ್ಯರು ಬದುಕುವುದೇ ಕಷ್ಟವಾಗಿದೆ. ಇದರ ವಿರುದ್ದ ನಾವು ನಿರಂತರ ಪ್ರತಿಭಟನೆ ನಡೆಸಲಿದ್ದೇವೆ ಎಂದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಕೆ.ಪಿ.ಸಿಸಿ.ವಕ್ತಾರರಾದ ಮುರುಳೀಧರ ಹಾಲಪ್ಪ, ಚ್.ಸಿ. ಹನುಮಂತಯ್ಯ ಮಾತನಾಡಿದರು. ಈ ಸಂಬಂಧ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ  ಅಲ್ಪಸಂಖ್ಯಾತರ ಘಟಕಕದ ಸಂಜೀವ್ ಕುಮಾರ್, ಶಿವಾಜಿ, ಥಾಮ್‍ಸನ್, ನಿಶಾ, ದಾದಾಪೀರ್, ಅಲ್ಲಾಉದ್ದಿನ್, ಮುಲ್ಲಾ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X