Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಲಿಂಗ ವಿವಾಹಕ್ಕೆ ಕೇಂದ್ರ ಸರಕಾರ ವಿರೋಧ

ಸಲಿಂಗ ವಿವಾಹಕ್ಕೆ ಕೇಂದ್ರ ಸರಕಾರ ವಿರೋಧ

ವಾರ್ತಾಭಾರತಿವಾರ್ತಾಭಾರತಿ25 Feb 2021 11:00 PM IST
share
ಸಲಿಂಗ ವಿವಾಹಕ್ಕೆ ಕೇಂದ್ರ ಸರಕಾರ ವಿರೋಧ

ಹೊಸದಿಲ್ಲಿ, ಫೆ. 25: ಭಾರತೀಯ ದಂಡ ಸಂಹಿತೆಯ ಕಲಂ 377ರ ಅಡಿ ಸಲಿಂಗ ಕಾಮವನ್ನು ನಿರಪರಾಧೀಕರಣಗೊಳಿಸಿರುವ ಹೊರತಾಗಿಯೂ ದೇಶದಲ್ಲಿ ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ ಎಂದು ಕೇಂದ್ರ ಸರಕಾರ ಗುರುವಾರ ದಿಲ್ಲಿ ಉಚ್ಚ ನ್ಯಾಯಾಲಯಕ್ಕೆ ತಿಳಿಸಿದೆ.

ಈ ವಿಷಯದ ಕುರಿತ ಮನವಿಗಳ ಗುಚ್ಛಕ್ಕೆ ಸಂಬಂಧಿಸಿ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರಕಾರ, ಸಲಿಂಗ ಜೋಡಿ ಜೊತೆಯಾಗಿ ಜೀವಿಸುವುದು ಹಾಗೂ ಲೈಂಗಿಕ ಸಂಬಂಧ ಹೊಂದುವುದನ್ನು ‘ಭಾರತೀಯ ಕುಟುಂಬ ಘಟಕ’ಕ್ಕೆ ಹೋಲಿಸಲಾಗದು ಎಂದು ಪ್ರತಿಪಾದಿಸಿದೆ. ವಿಶೇಷ ವಿವಾಹ ಕಾಯ್ದೆ, ಹಿಂದೂ ವಿವಾಹ ಕಾಯ್ದೆ ಹಾಗೂ ವಿದೇಶ ವಿವಾಹ ಕಾಯ್ದೆ ಅಡಿಯಲ್ಲಿ ಸಲಿಂಗ ವಿವಾಹವನ್ನು ಪರಿಗಣಿಸುವಂತೆ ಕೋರಿ ಸಲ್ಲಿಸಲಾದ ಮೂರು ಮನವಿಗಳ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ರಾಜೀವ್ ಸಹಾಯಿ ಎಂಡ್‌ಲಾ ಹಾಗೂ ಅಮಿತ್ ಬನ್ಸಾಲ್ ಅವರನ್ನೊಳಗೊಂಡ ಪೀಠ ಕೇಂದ್ರ ಸರಕಾರಕ್ಕೆ ತಿಳಿಸಿತ್ತು.

ಇದೇ ರೀತಿಯ ಅವಕಾಶ ಕೋರಿ ಎಲ್‌ಜಿಬಿಟಿಕ್ಯೂನ ಮತ್ತೆ ನಾಲ್ವರು ಗುರುವಾರ ದಿಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಕೇಂದ್ರ ಸರಕಾರದ ಪರವಾಗಿ ನ್ಯಾಯಾಲಯದ ಮುಂದೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈ ಹಿಂದಿನ ಮನವಿಗೆ ಪ್ರತಿಕ್ರಿಯೆಯಾಗಿ ಅಫಿಡವಿಟ್ ಸಲ್ಲಿಸಿದರು ಹಾಗೂ ಹೊಸ ಮನವಿಗಳಿಗೆ ಪ್ರತಿಕ್ರಿಯೆ ನೀಡಲು ಸಮಯಾವಕಾಶ ಕೋರಿದರು. ಈ ಮನವಿಗಳ ಮುಂದಿನ ವಿಚಾರಣೆ ಎಪ್ರಿಲ್ 20ರಂದು ನಡೆಯಲಿದೆ.

ಸಲಿಂಗ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಸರಕಾರದ ಅಫಿಡವಿಟ್, ಇಬ್ಬರು ಸಲಿಂಗಿಗಳ ವಿವಾಹವನ್ನು ಖಾಸಗಿ ವಿಷಯ ಎಂದಷ್ಟೇ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ‘ಭಾರತೀಯ ಕುಟುಂಬ ಘಟಕ’ ಎಂದರೆ ಏನು ಎಂಬುದನ್ನು ಕೇಂದ್ರ ಸರಕಾರ ವ್ಯಾಖ್ಯಾನಿಸಿದೆ ಹಾಗೂ ಸಲಿಂಗ ಜೋಡಿ ಇದಕ್ಕೆ ಹೊಂದಿಕೆಯಾಗುವುದಿಲ್ಲ ಎಂದು ಹೇಳಿದೆ. ಸಲಿಂಗ ಜೋಡಿಗಳು ಜೊತೆಯಾಗಿ ವಾಸಿಸುವುದು ಹಾಗೂ ಲೈಂಗಿಕ ಸಂಬಂಧ ಹೊಂದುವುದನ್ನು ಭಾರತೀಯ ಕುಟುಂಬ ಘಟಕದ ಪರಿಕಲ್ಪನೆಗೆ ಹೋಲಿಸಲು ಸಾಧ್ಯವಿಲ್ಲ ಎಂದು ಅಫಿಡವಿಟ್‌ನಲ್ಲಿ ಕೇಂದ್ರ ಸರಕಾರ ಹೇಳಿದೆ. ಭಾರತದಲ್ಲಿ ವಿವಾಹ ಪವಿತ್ರತೆ ಹೊಂದಿದೆ. ಮಹಿಳೆ ಹಾಗೂ ಪುರುಷನ ನಡುವಿನ ಸಂಬಂಧ ಪ್ರಾಚೀನ ಸಂಪ್ರದಾಯ, ಪದ್ಧತಿ, ಆಚರಣೆ, ಸಾಂಸ್ಕೃತಿಕ ಹಾಗೂ ಸಾಮಾಜಿಕ ವೌಲ್ಯಗಳನ್ನು ಅವಲಂಬಿಸಿದೆ ಎಂದು ಕೇಂದ್ರ ಸರಕಾರ ಅಫಿಡವಿಟ್‌ನಲ್ಲಿ ತಿಳಿಸಿದೆ ಎಂದು ‘ಬಾರ್ ಆ್ಯಂಡ್ ಬೆಂಚ್’ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X