Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೀನುಗಾರರ ಸಮುದಾಯಕ್ಕೆ ಕೇವಲ ಇಲಾಖೆ...

ಮೀನುಗಾರರ ಸಮುದಾಯಕ್ಕೆ ಕೇವಲ ಇಲಾಖೆ ಅಲ್ಲ, ಪ್ರತ್ಯೇಕ ಸಚಿವಾಲಯದ ಅಗತ್ಯ ಇದೆ: ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ25 Feb 2021 11:05 PM IST
share
ಮೀನುಗಾರರ ಸಮುದಾಯಕ್ಕೆ ಕೇವಲ ಇಲಾಖೆ ಅಲ್ಲ, ಪ್ರತ್ಯೇಕ ಸಚಿವಾಲಯದ ಅಗತ್ಯ ಇದೆ: ರಾಹುಲ್ ಗಾಂಧಿ

ಹೊಸದಿಲ್ಲಿ, ಫೆ. 25: ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ಕುರಿತು ನೀಡಿರುವ ವ್ಯಂಗ್ಯಭರಿತ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೀನುಗಾರರ ಸಮುದಾಯಕ್ಕೆ ಸಚಿವಾಲಯದಲ್ಲಿ ಕೇವಲ ಇಲಾಖೆ ಅಲ್ಲ, ಬದಲಾಗಿ ಸ್ವತಂತ್ರ ಮೀನುಗಾರಿಕೆ ಸಚಿವಾಲಯದ ಅಗತ್ಯ ಇದೆ ಗುರುವಾರ ಹೇಳಿದ್ದಾರೆ.

ಮೀನುಗಾರಿಕೆಗೆ ಸ್ವತಂತ್ರ ಸಚಿವಾಲಯ ಇಲ್ಲ ಎಂದು ಕಳೆದ ವಾರ ರಾಹುಲ್ ಗಾಂಧಿ ಅವರು ನೀಡಿದ ಹೇಳಿಕೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಪುದುಚೇರಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಆಘಾತ ವ್ಯಕ್ತಪಡಿಸಿದ್ದರು. ರಾಹುಲ್ ಗಾಂಧಿ ಹೇಳಿಕೆ ನೀಡಿದ ಬಳಿಕ ಕೇಂದ್ರ ಸಚಿವರು ಸೇರಿದಂತೆ ಬಿಜೆಪಿಯ ನಾಯಕರು ಅವರ ಬಗ್ಗೆ ವ್ಯಂಗ್ಯವಾಡಿದ್ದರು. ಪ್ರಧಾನಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ‘‘ಆತ್ಮೀಯ ಪ್ರಧಾನಿ ಅವರೇ, ಮೀನುಗಾರ ಸಮುದಾಯಕ್ಕೆ ಸಚಿವಾಲಯದಲ್ಲಿ ಕೇವಲ ಒಂದು ಇಲಾಖೆ ಇದ್ದರೆ ಸಾಲದು. ಸ್ವತಂತ್ರ ಮೀನುಗಾರಿಕೆ ಸಚಿವಾಲಯದ ಅಗತ್ಯ ಇದೆ’’ ಎಂದಿದ್ದಾರೆ.

► ನನಗೆ ಆಘಾತವಾಯಿತು: ಪ್ರಧಾನಿ ನರೇಂದ್ರ ಮೋದಿ

ಮೀನುಗಾರಿಕಾ ಸಚಿವಾಲಯವನ್ನು ಆರಂಭಿಸುವ ಕುರಿತು ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಹುಲ್ ಗಾಂಧಿ ಅವರು ಫೆಬ್ರವರಿ 17ರಂದು ಪ್ರತ್ಯೇಕ ಮೀನುಗಾರಿಕಾ ಸಚಿವಾಲಯ ಆರಂಭಿಸಲು ಬಯಸುವುದಾಗಿ ಹೇಳಿಕೆ ನೀಡಿದ್ದರು. ಅನಂತರ ಗಿರಿರಾಜ್ ಸಿಂಗ್ ಹಾಗೂ ಕಿರಣ್ ರಿಜೆಜು ಸೇರಿದಂತೆ ಹಲವು ಕೇಂದ್ರ ಸಚಿವರು ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಮೀನುಗಾರಿಕೆ, ಪಶುಸಂಗೋಪನೆ ಹಾಗೂ ಹೈನುಗಾರಿಕೆ ಸಚಿವಾಲಯ ಈಗಾಗಲೇ ಅಸ್ತಿತ್ವದಲ್ಲಿ ಇದೆ ಎಂದು ಪ್ರತಿಪಾದಿಸಿದ್ದರು.

ದೇಶದ ಮೀನುಗಾರ ಸಮುದಾಯಕ್ಕಾಗಿ ಕೇಂದ್ರ ಸಚಿವಾಲಯವನ್ನು ಆರಂಭಿಸುವುದಾಗಿ ರಾಹುಲ್ ಗಾಂಧಿ ಬುಧವಾರ ಹೇಳಿದ್ದರು. ಕೊಲ್ಲಂ ನಗರದ ತಂಗಶ್ಶೇರಿ ಪ್ರದೇಶದಲ್ಲಿ ಮೀನುಗಾರ ಸಮುದಾಯದೊಂದಿಗಿನ ಸಭೆಯಲ್ಲಿ ಅವರು ಈ ಭರವಸೆ ನೀಡಿದ್ದರು. ‘‘ಮೀನುಗಾರಿಕೆ ಸಚಿವಾಲಯ ಇಲ್ಲ. ಆದುದರಿಂದ ಮೀನುಗಾರಿಕೆ ಸಚಿವಾಲಯ ಸ್ಥಾಪಿಸಲು ಬಯಸುವುದಾಗಿ ರಾಹುಲ್ ಗಾಂಧಿ ಅವರು ಹೇಳಿರುವುದು ಕೇಳಿ ನನಗೆ ನಿಜವಾಗಿಯೂ ಆಘಾತವಾಯಿತು’’ ಎಂದು ಪುದುಚೇರಿಯಲ್ಲಿ ಗುರುವಾರ ನಡೆದ ಬಿಜೆಪಿ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ‘‘ಸತ್ಯವೇನೆಂದರೆ, ಈ ಸಚಿವಾಲಯ ಈಗಾಗಲೇ ಅಸ್ತಿತ್ವದಲ್ಲಿ ಇದೆ. ಪ್ರಸಕ್ತ ಇರುವ ಎನ್‌ಡಿಎ ಸರಕಾರ 2019ರಲ್ಲೇ ಈ ಸಚಿವಾಲಯವನ್ನು ಆರಂಭಿಸಿದೆ’’ ಎಂದು ಅವರು ಹೇಳಿದ್ದಾರೆ. ಬಿಜೆಪಿ ರ್ಯಾಲಿಯಲ್ಲಿ ಮೋದಿ ಅವರು ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು. ಕಾಂಗ್ರೆಸ್ ಆಡಳಿತ ಭಾರತದಲ್ಲಿ ಬ್ರಿಟಿಷ್ ಆಡಳಿತ ಇದ್ದಂತೆ ಎಂದು ಹೇಳಿದರು.

‘‘ವಸಾಹತುಶಾಹಿಯದ್ದು ಒಡೆದು ಆಳುವ ನೀತಿ. ಕಾಂಗ್ರೆಸ್‌ನದ್ದು ಒಡೆಯುವ, ಸುಳ್ಳು ಹೇಳುವ ಹಾಗೂ ಆ ಮೂಲಕ ಆಡಳಿತ ನಡೆಸುವ ನೀತಿ. ಕೆಲವು ಸಂದರ್ಭ ಕಾಂಗ್ರೆಸ್ ನಾಯಕರು ಪ್ರದೇಶದ ವಿರುದ್ಧ ಪ್ರದೇಶವನ್ನು ಸಮುದಾಯದ ವಿರುದ್ಧ ಸಮುದಾಯವನ್ನು ನಿಲ್ಲಿಸುತ್ತಾರೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X